Bihar: 3 ಮಕ್ಕಳನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ

ಮಹಿಳೆಯೊಬ್ಬಳು ತನ್ನ 3 ಮಕ್ಕಳನ್ನು ಹತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಗಯಾದ ಮಾಗ್ರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Bihar: 3 ಮಕ್ಕಳನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ
ಸಾವು
Follow us
ನಯನಾ ರಾಜೀವ್
|

Updated on: Apr 30, 2023 | 12:28 PM

ಮಹಿಳೆಯೊಬ್ಬಳು ತನ್ನ 3 ಮಕ್ಕಳನ್ನು ಹತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಗಯಾದ ಮಾಗ್ರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಾಲ್ತಿ ದೇವಿ ಎಂಬಾಕೆ ಹಾಗೂ ಅವರ ಮೂರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಮಹಿಳೆ ಮೊದಲು ಮಕ್ಕಳಿಗೆ ನೇಣು ಹಾಕಿ ಹತ್ಯೆ ಮಾಡಿ, ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಪತಿಯ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಮತ್ತೊಂದು ಘಟನೆಯಲ್ಲಿ 34 ವರ್ಷದ ಮಹಿಳೆಯೊಬ್ಬಳು ಬ್ಯೂಟಿ ಪಾರ್ಲರ್​ಗೆ ತೆರಳಲು ಪತಿ ನಿರಾಕರಿಸಿದ್ದಕ್ಕೆ ಸಾವಿಗೆ ಶರಣಾಗಿದ್ದಾರೆ. ಮಧ್ಯಪ್ರದೇಶದ ಇಂದೋರ್​ನಲ್ಲಿ ಈ ಘಟನೆ ನಡೆದಿದೆ, ಮೃತ ಮಹಿಳೆ ರೀನಾ ಯಾದವ್ ಎಂದು ಗುರುತಿಸಲಾಗಿದೆ. ಏರೋಡ್ರೋಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಓದಿ: ಬೆಂಗಳೂರು: ಡೆತ್​ನೋಟು ಬರೆದಿಟ್ಟು ಸರ್ಕಾರಿ ಆಸ್ಪತ್ರೆಯ ವೈದ್ಯ ನೇಣಿಗೆ ಶರಣು; ಕಾರಣ ಇಲ್ಲಿದೆ

ತನಿಖಾಧಿಕಾರಿ ಉಮಾ ಶಂಕರ್ ಯಾದವ್ ಮಾತನಾಡಿ, ಮಹಿಳೆಯು ಸುಮಾರು 15 ವರ್ಷಗಳ ಹಿಂದೆ ಬಲರಾಮ್ ಯಾದವ್ ಅವರನ್ನು ವಿವಾಹವಾಗಿದ್ದರು. ಗುರುವಾರ ಬ್ಯೂಟಿ ಪಾರ್ಲರ್‌ಗೆ ಹೋಗುವಂತೆ ಬಲರಾಮ್‌ಗೆ ಕೇಳಿದ್ದಳು ಆದರೆ ಅವರು ನಿರಾಕರಿಸಿದ್ದರು, ಅದಕ್ಕೆ ಕೋಪಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ