ಪಾಟ್ನಾ: ಮಾರುಕಟ್ಟೆಗೆಂದು ಹೋಗಿದ್ದ ಮಹಿಳೆಯ ಬರ್ಬರ ಹತ್ಯೆ
ಮಾರುಕಟ್ಟೆಗೆಂದು ಹೋಗಿದ್ದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಮಹಿಳೆ ತಡರಾತ್ರಿಯಾದರೂ ಮನೆಗೆ ಬಾರದಿರುವುದನ್ನು ಕಂಡ ಕುಟುಂಬದವರು ಬೆಳಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.

ಮಾರುಕಟ್ಟೆಗೆಂದು ಹೋಗಿದ್ದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಮಹಿಳೆ ತಡರಾತ್ರಿಯಾದರೂ ಮನೆಗೆ ಬಾರದಿರುವುದನ್ನು ಕಂಡ ಕುಟುಂಬದವರು ಬೆಳಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಕೂಡಲೇ ಪೊಲೀಸರು ಬಂದು ಹುಡುಕಾಟ ಆರಂಭಿಸಿದಾಗ ಮಹಿಳೆಯ ಮನೆಯಿಂದ 100 ಮೀಟರ್ ದೂರದ ರಸ್ತೆಯಲ್ಲಿ ಶವ ಪತ್ತೆಯಾಗಿದೆ. ಪಾಟ್ನಾದ ಬರ್ಹ್ ಉಪವಿಭಾಗದ ಆತಂಗೊಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಳು ಹರಿತವಾದ ಆಯುಧದಿಂದ ಕತ್ತು ಸೀಳಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಮಹಿಳೆಯ ಶವವನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಎಫ್‌ಎಸ್‌ಎಲ್ ತಂಡವನ್ನು ಸ್ಥಳಕ್ಕೆ ಕರೆಸಿಕೊಂಡು ತನಿಖೆ ಆರಂಭಿಸಿದರು. ಮೃತ ಮಹಿಳೆಯನ್ನು ಅನಿತಾ ದೇವಿ (35) ಎಂದು ಗುರುತಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ಮಹಿಳೆ ತನ್ನ ತಾಯಿಯ ಮನೆಯಲ್ಲಿ ವಾಸಿಸುತ್ತಿದ್ದಳು ಎಂದು ಹೇಳಲಾಗುತ್ತಿದೆ.
ಮತ್ತಷ್ಟು ಓದಿ: ಗಣೇಶ ಪೂಜೆಗೆ ಇಟ್ಟ ಹಣದ ವಿಚಾರದಲ್ಲಿ ಸಹೋದರರ ನಡುವೆ ಗಲಾಟೆ; ಕೊಲೆಯಲ್ಲಿ ಅಂತ್ಯ
ಶನಿವಾರ ಮಹಿಳೆ ತನ್ನ ಆಭರಣಗಳನ್ನು ತರಲು ಫತುಹಾ ಮಾರುಕಟ್ಟೆಗೆ ಹೋಗಿದ್ದಳು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ತಡರಾತ್ರಿಯಾದರೂ ಮನೆಗೆ ಬಾರದೇ ಇದ್ದಾಗ ಆಕೆಯ ಪೋಷಕರು ಮಹಿಳೆಗಾಗಿ ಹುಡುಕಾಟ ಆರಂಭಿಸಿದ್ದಾರೆ. ಮಹಿಳೆಯನ್ನು ದೂರವಾಣಿಯಲ್ಲಿ ಸಂಪರ್ಕಿಸಿದಾಗ ಆಕೆಯ ಫೋನ್ ಸ್ವಿಚ್ಡ್ ಆಫ್ ಆಗಿತ್ತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮತ್ತು ಸಂಬಂಧಿಕರ ಮನೆಯಲ್ಲಿ ಅನಿತಾದೇವಿಯನ್ನು ಹುಡುಕಲು ಕುಟುಂಬ ಸದಸ್ಯರು ಸಾಕಷ್ಟು ಪ್ರಯತ್ನ ಮಾಡಿದರು. ಇದಾದ ನಂತರವೂ ಅನಿತಾ ದೇವಿಯ ಯಾವುದೇ ಕುರುಹು ಪತ್ತೆಯಾಗಿಲ್ಲ.
ಅವರು ತಾಯಿ ಮನೆಯಲ್ಲಿದ್ದುಕೊಂಡು ಇಬ್ಬರು ಮಕ್ಕಳನ್ನು ನೋಡಿಕೊಳ್ಳುತ್ತಿದ್ದರು, ಪತಿಯೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಆಕೆ ಪತಿಯೂ ಆಗಾಗ ತಂದೆ-ತಾಯಿ ಮನೆಗೆ ಭೇಟಿ ನೀಡುತ್ತಿದ್ದರು. ಅನಿತಾ ದೇವಿ ಹತ್ಯೆಗೆ ಕಾರಣವೇನು ಎಂದು ಪತ್ತೆ ಹಚ್ಚುವ ಪ್ರಯತ್ನದಲ್ಲಿದ್ದಾರೆ.
ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ