ಬಿಹಾರದಲ್ಲಿ ನಾಯಿ ಮೇಲೆ ಅತ್ಯಾಚಾರವೆಸಗಿ ದುಷ್ಕೃತ್ಯ ಮೆರೆದ ವ್ಯಕ್ತಿ, ಪೊಲೀಸರಿಂದ ಆರೋಪಿಗಾಗಿ ಹುಡುಕಾಟ
ವ್ಯಕ್ತಿಯೊಬ್ಬ ನಾಯಿಯ ಮೇಲೆ ಅತ್ಯಾಚಾರವೆಸಗಿ ದುಷ್ಕೃತ್ಯ ಮೆರೆದಿದ್ದಾನೆ, ಬಿಹಾರದ ಪಾಟ್ನಾದಲ್ಲಿ ಈ ಘಟನೆ ನಡೆದಿದೆ. ಮಾರ್ಚ್ 8 ರಂದು ಹೋಳಿ ದಿನದಂದು ಈ ಘಟನೆ ಸಂಭವಿಸಿದೆ.
ವ್ಯಕ್ತಿಯೊಬ್ಬ ನಾಯಿಯ ಮೇಲೆ ಅತ್ಯಾಚಾರವೆಸಗಿ ದುಷ್ಕೃತ್ಯ ಮೆರೆದಿದ್ದಾನೆ, ಬಿಹಾರದ ಪಾಟ್ನಾದಲ್ಲಿ ಈ ಘಟನೆ ನಡೆದಿದೆ. ಮಾರ್ಚ್ 8 ರಂದು ಹೋಳಿ ದಿನದಂದು ಈ ಘಟನೆ ಸಂಭವಿಸಿದೆ. ಈ ಭೀಕರ ಕೃತ್ಯದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಫುಲ್ವಾರಿ ಶರೀಫ್‌ನ ಫೈಸಲ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.
ಸಿಸಿಟಿವಿಯಲ್ಲಿ, ಅಪರಿಚಿತ ವ್ಯಕ್ತಿಯೊಬ್ಬನು ಕಾಲೋನಿಯಲ್ಲಿ ನಾಯಿಯೊಂದಿಗೆ ಅಸಹಜ ಕೃತ್ಯವನ್ನು ಬಹಿರಂಗವಾಗಿ ಮಾಡುತ್ತಿರುವುದು ಕಂಡುಬಂದಿದೆ. ಇದರ ನಂತರ, ಫುಲ್ವಾರಿ ಷರೀಫ್ ಪೊಲೀಸ್ ಠಾಣೆಯಲ್ಲಿ ಎನ್‌ಜಿಒವೊಂದು ಈ ವಿಷಯದ ಬಗ್ಗೆ ಅರ್ಜಿ ಸಲ್ಲಿಸಿದೆ.
ಇದಾದ ಬಳಿಕ ಪಾಟ್ನಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ, ಫುಲ್ವಾರಿ ಷರೀಫ್ ಮನೀಶ್ ಕುಮಾರ್, ದೂರು ದಾಖಲಾಗಿದೆ ಐಪಿಸಿ ಮತ್ತು ಪ್ರಾಣಿಗಳ ಕಾಯಿದೆಯಡಿ ಕ್ರಮ ಕೈಗೊಳ್ಳಲಾಗುವುದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಮತ್ತಷ್ಟು ಓದಿ: Bengaluru: ಪತ್ನಿ-ಪುತ್ರನ ಹತ್ಯೆಗೆ ಯತ್ನಿಸಿ ಬಳಿಕ ಚಾಕುವಿನಿಂದ ತನ್ನ ಕುತ್ತಿಗೆಗೆ ತಾನೇ ಚುಚ್ಚಿಕೊಂಡ ಮದ್ಯ ವ್ಯಸನಿ ಟೆಕ್ಕಿ
ಮಾರ್ಚ್ ಆರಂಭದಲ್ಲಿ ದೆಹಲಿಯಲ್ಲಿ ಇಂಥದ್ದೇ ಘಟನೆ ನಡೆದಿತ್ತು. ದೆಹಲಿಯ ಹರಿನಗರ ಪ್ರದೇಶದಲ್ಲಿ ನಾಯಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದರು.
ಮದುವೆಯಾಗಿ ಮಕ್ಕಳಿರುವ ಆರೋಪಿ ಹರಿನಗರ ನಿವಾಸಿ ಎಂದು ತಿಳಿದುಬಂದಿತ್ತು. ಪೊಲೀಸರ ಪ್ರಕಾರ, ದೂರು ಸ್ವೀಕರಿಸಿದ ನಂತರ ಐಪಿಸಿ ಮತ್ತು ಪ್ರಾಣಿ ಹಿಂಸೆ ಕಾಯ್ದೆಯ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧಗಳು) ಅಡಿಯಲ್ಲಿ ಎಫ್‌ಐಆರ್ ಅನ್ನು ಭಾನುವಾರ ದಾಖಲಿಸಲಾಗಿದೆ. ಈ ಘೋರ ಕೃತ್ಯವನ್ನು ಪ್ರಾಣಿಗಳಿಗೆ ಆಹಾರ ನೀಡುವವರೊಬ್ಬರ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಆರೋಪಿಯ ಪ್ರಾಣಿ ಹಿಂಸೆಯ ಕೃತ್ಯವನ್ನು ಜನರು ಖಂಡಿಸಿದ್ದರು.
ಎಫ್‌ಐಆರ್ ದಾಖಲಾದ ನಂತರ, ವಿಡಿಯೋ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಗುರುತಿಸಿ ಸೋಮವಾರ ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದರು.
ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ