Hit and Run: ಬೆಂಗಳೂರಿನಲ್ಲಿ ಹಿಟ್​ ಆ್ಯಂಡ್​ ರನ್​ಗೆ ಬೈಕ್ ಸವಾರ ಬಲಿ: ಟಿಪ್ಪರ್​ ಚಾಲಕ ಪರಾರಿ

ಹಿಟ್ ಆ್ಯಂಡ್​​ ರನ್​ಗೆ ಬೈಕ್ ಸವಾರ ಬಲಿಯಾಗಿರುವಂತಹ ಘಟನೆ ಮೈಸೂರು ರಸ್ತೆಯ ಗೋಪಾಲನ್​ ಲೆಗಸಿ ಮಾಲ್​ ಬಳಿ ನಡೆದಿದೆ.

Hit and Run: ಬೆಂಗಳೂರಿನಲ್ಲಿ ಹಿಟ್​ ಆ್ಯಂಡ್​ ರನ್​ಗೆ ಬೈಕ್ ಸವಾರ ಬಲಿ: ಟಿಪ್ಪರ್​ ಚಾಲಕ ಪರಾರಿ
ಮೈಸೂರು ರಸ್ತೆ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jan 01, 2023 | 7:58 AM

ಬೆಂಗಳೂರು: ಹಿಟ್ ಆ್ಯಂಡ್​​ ರನ್ (Hit and run) ​ಗೆ ಬೈಕ್ ಸವಾರ ಬಲಿಯಾಗಿರುವಂತಹ ಘಟನೆ ಮೈಸೂರು ರಸ್ತೆಯ ಗೋಪಾಲನ್​ ಲೆಗಸಿ ಮಾಲ್​ ಬಳಿ ನಡೆದಿದೆ. ಬೈಕ್​ನಲ್ಲಿ ತೆರಳುತ್ತಿದ್ದ ಹೊಸಕೆರೆಹಳ್ಳಿಯ ದೇವರಾಜ್​ ಮೃತ ವ್ಯಕ್ತಿ. ಬೈಕ್​ನಲ್ಲಿದ್ದ ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೈಕ್​ಗೆ ಡಿಕ್ಕಿ ಹೊಡೆದು ಟಿಪ್ಪರ್​ ಚಾಲಕ ಪರಾರಿಯಾಗಿದ್ದಾರೆ. ಚಿಕ್ಕಪೇಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ. ಮತ್ತೊಂದು ಪ್ರಕರಣದಲ್ಲಿ ನಗರದಲ್ಲಿ ಇಬ್ಬರು ಡ್ರಗ್ ಪೆಡ್ಲರ್​ಗಳ ಬಂಧನ ಮಾಡಿದ್ದು, 10 ಲಕ್ಷ ಮೌಲ್ಯದ 10 ಕೆಜಿ ಗಾಂಜಾ, 1‌ ಕೆಜಿ ಹ್ಯಾಶಿಷ್ ಆಯಿಲ್, ಕಾರು, ಬೈಕ್​ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಐಷಾರಾಮಿ ಜೀವನ ನಡೆಸಲು ಆರೋಪಿಗಳು ಡ್ರಗ್ಸ್​ ಮಾರುತ್ತಿದ್ದರು. ಸದ್ಯ  ಬಸವನಗುಡಿ ಪೊಲೀಸರಿಂದ ಆರೋಪಿ ಸೀನಪ್ಪ, ನಾಗೇಶ್​ನನ್ನ ಅರೆಸ್ಟ್​ ಮಾಡಿದ್ದಾರೆ.

ಸಮುದ್ರದಲ್ಲಿ ಈಜಲು ಹೋಗಿದ್ದ ಇಬ್ಬರ ಪೈಕಿ ಓರ್ವ ಯುವಕ ನೀರುಪಾಲು

ಮಂಗಳೂರು: ಸಮುದ್ರದಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲಾಗಿರುವಂತಹ (drowned) ಘಟನೆ ಮಂಗಳೂರಿನ ಲೈಟ್ ಹೌಸ್ ಬೀಚ್​​ನಲ್ಲಿ ನಡೆದಿದೆ. ಸುರತ್ಕಲ್​​ನ ಕಾನ ಗ್ರಾಮದ ನಿವಾಸಿ ಸತ್ಯಂ(18) ಮೃತ ಯುವಕ. ಸತ್ಯಂ ಸ್ನೇಹಿತ ಪ್ರಭಾಕರನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸತ್ಯಂ ಶವಕ್ಕಾಗಿ ಸ್ಥಳೀಯ ಮೀನುಗಾರರಿಂದ ಶೋಧ ಕಾರ್ಯ ಆರಂಭವಾಗಿದೆ. ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಅಬಕಾರಿ ಪೊಲೀಸರ ಕಾರ್ಯಾಚರಣೆ ಮೂಲಕ ಓರ್ವ ಯುವಕನ ಬಂಧನ ಮಾಡಿದ್ದು, 231 ಗ್ರಾಂ ಗಾಂಜಾವಶಕ್ಕೆ ಪಡೆದುಕೊಂಡಿದ್ದಾರೆ. ದಾವಣಗೆರೆ ನಗರದ ಕುಂದವಾಡ ಲಿಂಕ್ ರಸ್ತೆಯ ವಿನಾಯಕ ನಗರದಲ್ಲಿ ಘಟನೆ ನಡೆದಿದೆ. ಸಂಜಯ್ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿ. ಒಣಗಾಂಜಾ ಮತ್ತು ಸೇವನೆ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆ ಅಬಕಾರಿ ಉಪ ಅಸಯುಕ್ತ ಎಸ್ ಶಿವಪ್ರಸಾದ ನೇತ್ರತ್ವದಲ್ಲಿ ದಾಳಿ ಮಾಡಿದ್ದಾರೆ. ಸದ್ಯ ಆರೋಪಿಯನ್ನು ಅಬಕಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಅಪರಾಧ ಮಾಡಿ ಪಾತಾಳದಲ್ಲೇ ಅಡಗಿದ್ದರೂ, 28 ವರ್ಷವೇ ಆದರೂ, ಕೊನೆಗೆ ಆರೋಪಿ ಸಿಗಲೇಬೇಕು! ಈ ಸ್ಟೋರಿ ಸ್ವಲ್ಪ ನೋಡಿ

ಕಾರು ಮತ್ತು ಬೈಕ್ ಮಧ್ಯೆ ಡಿಕ್ಕಿ ಓರ್ವ ಸಾವು

ವಿಜಯಪುರ: ವೇಗವಾಗಿ ಚಲಿಸುತ್ತಿದ್ದ ಕಾರು ಮತ್ತು ಬೈಕ್​ಗೆ ಹೊಡೆದು ಬಳಿಕ ರಸ್ತೆ ಬದಿಯ ಸೇತುವೆಗೆ ಡಿಕ್ಕಿಯಾಗಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನಂದಿಹಾಳ ಕ್ರಾಸ್ ಬಳಿ ನಡೆದಿದೆ. ಬಿ.ಎಸ್ ಪಾಟೀಲ್ (59) ಮೃತಪಟ್ಟ ವ್ಯಕ್ತಿ. ಕಾರಿನಲ್ಲಿದ್ದ ಇತರೆ ಮೂವರು ಮತ್ತು ಬೈಕ್ ಸವಾರ ಸೇರಿದಂತೆ ನಾಲ್ವರಿಗೆ ಗಾಯಗಳಾಗಿವೆ. ಕಾರಿನಲ್ಲಿದ್ದವರು ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ‌ ಚನ್ನೂರ ಗ್ರಾಮದವರು ಎಂದು ಹೇಳಲಾಗುತ್ತಿದೆ. ಮನಗೂಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ವಿಜಯಪುರ ಕಾಂಗ್ರೆಸ್ ಜಲಾಂದೋಲನ ಸಮಾವೇಶದಲ್ಲಿ ಇಬ್ಬರಿಗೆ ಚಾಕು ಇರಿತ ಆರೋಪ

ಆನೆದಾಳಿ ಮಹಿಳೆ ಸಾವು, ಓರ್ವನಿಗೆ ಗಂಭೀರ ಗಾಯ

ಮೈಸೂರು: ಆನೆದಾಳಿ ಮಹಿಳೆ ಸಾವನ್ನಪ್ಪಿದ್ದು, ಓರ್ವನಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ಹುಣಸೂರು ತಾಲೂಕಿನ ಚಿಕ್ಕಬೀಚನಹಳ್ಳಿಯಲ್ಲಿ ನಡೆದಿದೆ. ಸಿದ್ದೇಗೌಡ ಪತ್ನಿ ಚಿಕ್ಕಮ್ಮ (60) ಮೃತರು. ಬಿಳಿಕೆರೆ ಗ್ರಾಮದ ರವಿ ಎಂಬುವವರಿಗೆ ಗಂಭೀರ ಗಾಯವಾಗಿದೆ. ಜಮೀನ ಬಳಿ ಹುರುಳಿ ಕಣದಲ್ಲಿ ಚಿಕ್ಕಮ ಹಾಗೂ ಪತ್ನಿ ಸಿದ್ದೇಗೌಡ ಇದ್ದಾಗ ಈ ವೇಳೆ ಇಬ್ಬರ ಮೇಲೆ ದಾಳಿಗೆ ಆನೆ ಮುಂದಾಗಿದೆ. ಸಿದ್ದೇಗೌಡ ಓಡಿಹೋಗಿ ತಪ್ಪಿಸಿಕೊಂಡಿದ್ದು, ಓಡಲು ಸಾಧ್ಯವಾಗದೆ ಆನೆ ತುಳಿತಕ್ಕೆ ಒಳಗಾಗಿ ಚಿಕ್ಕಮ್ಮ ಮೃತಪಟ್ಟಿದ್ದಾರೆ. ಚಿಕ್ಕಬೀಚನಹಳ್ಳಿ ದಾಳಿ ಮಾಡಿದ ಬಳಿಕ ಬಿಳಿಕೆರೆ ಗ್ರಾಮದ ಬಳಿ ರವಿ ಎಂಬುವವರ ಮೇಲು ಕೂಡ ಆನೆ ದಾಳಿ ಮಾಡಿದೆ. ಸದ್ಯ ಮೃತ ಕುಟುಂಬಸ್ಥರ ಭೇಟಿ ಮಾಡಿದ ಶಾಸಕ ಜಿ.ಟಿ.ದೇವೆಗೌಡ ಸಾಂತ್ವನ ಹೇಳಿದ್ದಾರೆ. ಆನೆ ಸೆರೆ ಹಿಡಿಯುವಂತೆ ಅರಣ್ಯಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ