ಬಿಟ್​ ಕಾಯಿನ್​ ಪ್ರಕರಣ: ಪೊಲೀಸರನ್ನೇ ವಶಕ್ಕೆ ಪಡೆದ ಎಸ್​ಐಟಿ

| Updated By: Rakesh Nayak Manchi

Updated on: Jan 25, 2024 | 9:53 AM

ಶ್ರೀಕಿಯನ್ನು ಬಂಧಿಸಿ ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸಿತ್ತು. ಸಿಸಿಬಿ ತನಿಖೆಯಲ್ಲಿ ಲೋಪ ನಡೆದಿದೆ ಎಂದು ಎಸ್‍ಐಟಿ ತನಿಖೆಯಲ್ಲಿ ತಿಳಿದು ಬಂದಿತ್ತು. ಈ ಹಿನ್ನೆಲೆಯಲ್ಲಿ FIR ಕೂಡ ದಾಖಲಾಗಿತ್ತು. ಇದೀಗ ಈ ಪ್ರಕರಣದ ಪ್ರಮುಖ ಸಾಕ್ಷಿ ಶ್ರೀಕಿ ತನಿಖೆಗೆ ಸಹಕರಿಸದೇ ಸತಾಯಿಸುತ್ತಿದ್ದಾನೆ. ಇನ್ನೊಂದೆಡೆ, ಪ್ರಕರಣದಲ್ಲಿ ವಿಚಾರಣೆಗೆ ಬಂದಿದ್ದ ಎಲ್ಲರನ್ನೂ ಎಸ್​ಐಟಿ ವಶಕ್ಕೆ ಪಡೆದಿದ್ದು, ಇದರಲ್ಲಿ ಇಬ್ಬರು ಪೊಲೀಸರು ಕೂಡ ಸೇರಿದ್ದಾರೆ.

ಬಿಟ್​ ಕಾಯಿನ್​ ಪ್ರಕರಣ: ಪೊಲೀಸರನ್ನೇ ವಶಕ್ಕೆ ಪಡೆದ ಎಸ್​ಐಟಿ
ಬಿಟ್​ ಕಾಯಿನ್​ ಪ್ರಕರಣ ಸಂಬಂಧ ಇಬ್ಬರು ಪೊಲೀಸರನ್ನು ವಶಕ್ಕೆ ಪಡೆದ ಎಸ್​ಐಟಿ
Follow us on

ಬೆಂಗಳೂರು, ಜ.25: ಬಿಟ್ ಕಾಯಿನ್ ಪ್ರಕರಣದಲ್ಲಿ (Bitcoin case) ಮಹತ್ತರ ಬೆಳವಣಿಗೆ ನಡೆದಿದ್ದು, ತನಿಖೆ ನಡೆಸುತ್ತಿರುವ ಎಸ್​ಐಟಿ (SIT) ವಿಚಾರಣೆಗೆ ಕರೆದವರನ್ನೆಲ್ಲಾ ನಿನ್ನೆ ವಶಕ್ಕೆ ಪಡೆದಿತ್ತು. ಈ ಪೈಕಿ ಇಬ್ಬರು ಪೊಲೀಸರು ಎಂದು ಇದೀಗ ತಿಳಿದುಬಂದಿದೆ. ಪೊಲೀಸ್ ಇನ್ಸ್​ಪೆಕ್ಟರ್​​ ಪ್ರಶಾಂತ್ ಬಾಬು ಹಾಗೂ ಸೈಬರ್ ಎಕ್ಸ್​​ಪರ್ಟ್ ಸಂತೋಷ್ ಎಂಬವರನ್ನು ನಿನ್ನೆ ವಶಕ್ಕೆ ಪಡೆಯಲಾಗಿದ್ದು, ಇಂದು ಬಂಧಿಸಿ ಮಧ್ಯಾಹ್ನ ಮೂರು ಘಂಟೆಗೆ ನ್ಯಾಯಾಲಯದ ಮುಂದೆ ಹಾಜರು ಪಡಿಸಲು ಎಸ್​ಐಟಿ ಸಿದ್ಧತೆ ನಡೆಸುತ್ತಿದೆ.

ಎಸ್ಐಟಿ ರಚನೆಯಾಗಿ ಆರು ತಿಂಗಳು ಕಳೆದಿದ್ದರೂ ಇದುವರೆಗೆ ಯಾರನ್ನೂ ಅರೆಸ್ಟ್ ಮಾಡಿರಲಿಲ್ಲ. ಪ್ರಕರಣದಲ್ಲಿ ಸಾವಿರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂದು ಕಾಂಗ್ರೆಸ್ ಅರೋಪ ಮಾಡಿತ್ತು. ಆದರೆ ಈಗ ತನಿಖೆ ವೇಳೆ ಕೇವಲ ಮೂರೂವರೆ ಲಕ್ಷ ರೂಪಾಯಿ ಮೌಲ್ಯದ ಬಿಟ್ ಕಾಯಿನ್ ವರ್ಗಾವಣೆ ಮಾಹಿತಿ ಲಭ್ಯವಾಗಿದೆ.

ಸದ್ಯ ಒಂದೇ ಒಂದು ಬಿಟ್ ಕಾಯಿನ್​ಗಳನ್ನು ಎಸ್​ಐಟಿ ವಶಕ್ಕೆ ಪಡೆದುಕೊಂಡಿಲ್ಲ. ತಾಂತ್ರಿಕ ವಸ್ತುಗಳು (ಎವಿಡೆನ್ಸ್​ಗಳನ್ನು ದುರುಪಯೋಗ ಮಾಡಿದ್ದಾರೆ) ಎಂಬುದು ತನಿಖೆ ವೇಳೆ ಪತ್ತೆಯಾಗಿತ್ತು. ಸದ್ಯ ಪ್ರಕರಣ ಸಂಬಂಧ ಹೆಚ್ಚಿನ ತನಿಖೆಯನ್ನು ಸಿಐಟಿ ನಡೆಸುತ್ತಿದೆ.

ಇದನ್ನೂ ಓದಿ: ಬಿಟ್ ಕಾಯಿನ್ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆ,ವಿಚಾರಣೆಗೆ ಬಂದಿದ್ದ ಎಲ್ಲರೂ ಎಸ್​ಐಟಿ ವಶಕ್ಕೆ

ಬಿಟ್ ಕಾಯಿನ್ ಪ್ರಕರಣದಲ್ಲಿ ನಿನ್ನೆ ಮಹತ್ತರ ಬೆಳವಣಿಗೆ ನಡೆದಿತ್ತು. ತನಿಖೆ ನಡೆಸುತ್ತಿರುವ ಎಸ್​ಐಟಿ ಮತ್ತೊಂದು ಪ್ರಕರಣ ದಾಖಲಿಸಿಕೊಂಡು ವಿಚಾರಣೆಗೆ ಕರೆದಿದ್ದವರನ್ನೆಲ್ಲಾ ವಶಕ್ಕೆ ಪಡೆದು ತನಿಖೆ ಕೈಗೊಂಡಿತ್ತು. ಬಿಟ್ ಕಾಯಿನ್ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆ ನಡೆಯುತ್ತಿದ್ದು, ವಶಕ್ಕೆ ಪಡೆದುಕೊಂಡವರ ವಿಚಾರಣೆ ವೇಳೆ ಏನೆಲ್ಲಾ ಮಾಹಿತಿ ಹೊರಬರುತ್ತೆ? ಆಗ ಎಸ್​ಐಟಿಯ ಮುಂದಿನ ನಡೆಯೇನು ಎನ್ನುವುದೇ ಕುತೂಹಲ ಮೂಡಿಸಿದೆ.

ಶ್ರೀಕಿಯನ್ನು ಬಂಧಿಸಿ ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸಿತ್ತು. ಸಿಸಿಬಿ ತನಿಖೆಯಲ್ಲಿ ಲೋಪ ನಡೆದಿದೆ ಎಂದು ಎಸ್‍ಐಟಿ ತನಿಖೆಯಲ್ಲಿ ತಿಳಿದು ಬಂದಿತ್ತು. ಈ ಹಿನ್ನೆಲೆಯಲ್ಲಿ ಎಫ್‍ಐಆರ್ ಕೂಡ ದಾಖಲಾಗಿತ್ತು. ಇದೀಗ ಈ ಪ್ರಕರಣದ ಪ್ರಮುಖ ಸಾಕ್ಷಿ ಶ್ರೀಕಿ ತನಿಖೆಗೆ ಸಹಕರಿಸದೇ ಸತಾಯಿಸುತ್ತಿದ್ದಾನೆ.

ಇನ್ನು ಈ ಪ್ರಕರಣದಲ್ಲಿ ಕೆಲ ಬಿಜೆಪಿ ನಾಯಕರುಗಳ ಹೆಸರುಗಳು ಕೇಳಿಬಂದಿದ್ದವು. ಇದರಿಂದ ಈ ಬಿಟ್​ ಕಾಯಿನ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು. ಇದೀಗ ಎಸ್​ಟಿ ಅಧಿಕಾರಿಗಳು ಈ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ತನಿಖೆಯಲ್ಲಿ ಏನೆಲ್ಲ ಅಂಶಗಳು ಬೆಳಕಿಗೆ ಬರಲಿವೆ ಎನ್ನುವುದುನ್ನು ಕಾದುನೋಡಬೇಕಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ