ಉತ್ತರ ಪ್ರದೇಶದಲ್ಲಿ ಹಾಡಹಗಲೇ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆ

ಉತ್ತರ ಪ್ರದೇಶ(Uttar Pradesh)ದ ಸಂಭಾಲ್‌ನ ಬಿಜೆಪಿ ನಾಯಕ(BJP Leader) ಅನುಜ್ ಚೌಧರಿ ಅವರನ್ನು ಮೊರಾದಾಬಾದ್‌ನಲ್ಲಿರುವ ಅವರ ನಿವಾಸದ ಹೊರಗೆ ಗುರುವಾರ ಸಂಜೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ

ಉತ್ತರ ಪ್ರದೇಶದಲ್ಲಿ ಹಾಡಹಗಲೇ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆ
ಬಿಜೆಪಿ ಮುಖಂಡದ ಹತ್ಯೆImage Credit source: NDTV
Follow us
ನಯನಾ ರಾಜೀವ್
|

Updated on: Aug 11, 2023 | 8:51 AM

ಉತ್ತರ ಪ್ರದೇಶ(Uttar Pradesh)ದ ಸಂಭಾಲ್‌ನ ಬಿಜೆಪಿ  ಮುಖಂಡ(BJP Leader) ಅನುಜ್ ಚೌಧರಿ ಅವರನ್ನು ಮೊರಾದಾಬಾದ್‌ನಲ್ಲಿರುವ ಅವರ ನಿವಾಸದ ಹೊರಗೆ ಗುರುವಾರ ಸಂಜೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. 34 ವರ್ಷದ ಚೌಧರಿ ತಮ್ಮ ಅಪಾರ್ಟ್‌ಮೆಂಟ್‌ನ ಹೊರಗೆ ಸ್ನೇಹಿತನೊಂದಿಗೆ ನಡೆದುಕೊಂಡು ಹೋಗುತ್ತಿರುವಾಗ ಬೈಕ್‌ನಲ್ಲಿ ಬಂದ ಮೂವರು ಅನೇಕ ಬಾರಿ ಗುಂಡು ಹಾರಿಸುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಯಲ್ಲಿ ಕಾಣಬಹುದು.

ಚೌಧರಿ ಅವರನ್ನು ಮೊರಾದಾಬಾದ್‌ನ ಬ್ರೈಟ್‌ಸ್ಟಾರ್ ಆಸ್ಪತ್ರೆಗೆ ಕೂಡಲೇ ಕರೆದೊಯ್ಯಲಾಯಿತು. ಸ್ಥಳೀಯ ರಾಜಕೀಯದಲ್ಲಿ ಸಕ್ರಿಯರಾಗಿರುವ ಚೌಧರಿ ಅವರು ಸಂಭಾಲ್‌ನ ಅಸ್ಮೋಲಿ ಬ್ಲಾಕ್‌ನಿಂದ ಬ್ಲಾಕ್ ಮುಖ್ಯಸ್ಥರ ಚುನಾವಣೆಯಲ್ಲಿ ಸ್ಪರ್ಧಿಸಿದರು ಆದರೆ ಯಶಸ್ವಿಯಾಗಿರಲಿಲ್ಲ. ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಯತ್ನಿಸುತ್ತಿದ್ದಾರೆ.

ಕುಟುಂಬವು ಅಮಿತ್ ಚೌಧರಿ ಮತ್ತು ಅನಿಕೇತ್ ಮೇಲೆ ದೂರು ದಾಖಲಿಸಿದೆ. ಆರೋಪಿಗಳ ಬಂಧನಕ್ಕೆ ಐದು ತಂಡಗಳನ್ನು ರಚಿಸಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೊರಾದಾಬಾದ್ ಪೊಲೀಸರು ಮಾಹಿತಿ ನೀಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ