ಬಿಹಾರ: ಪಾಟ್ನಾದಲ್ಲಿ ಗುಂಡಿಕ್ಕಿ ಬಿಜೆಪಿ ಮುಖಂಡನ ಹತ್ಯೆ

ಬಿಜೆಪಿ ಮುಖಂಡರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಪಾಟ್ನಾದ ಅಲಮ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಬಜರಂಗಪುರಿ ಕಾಲುವೆ ಬಳಿ ಬಿಜೆಪಿ ನಾಯಕ ಮತ್ತು ಡೈರಿ ಬೂತ್ ಆಪರೇಟರ್ 50 ವರ್ಷದ ಶಾ ಎಂಬುವವರನ್ನು ದುಷ್ಕರ್ಮಿಗಳು ರಾತ್ರಿ 10 ಗಂಟೆ ಸುಮಾರಿಗೆ ಗುಂಡಿಕ್ಕಿ ಕೊಂದಿದ್ದಾರೆ. ಆತನನ್ನು ಕೊಂದ ನಂತರ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಬಿಹಾರ: ಪಾಟ್ನಾದಲ್ಲಿ ಗುಂಡಿಕ್ಕಿ ಬಿಜೆಪಿ ಮುಖಂಡನ ಹತ್ಯೆ
ಗುಂಡಿನ ದಾಳಿ
Follow us
|

Updated on:Aug 14, 2024 | 11:41 AM

ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ನಡೆದಿದೆ. ಮೃತರನ್ನು ಬಿಜೆಪಿ ಬಜರಂಗಪುರಿ ಮಂಡಲದ ಮಾಜಿ ಪ್ರಧಾನ ಕಾರ್ಯದರ್ಶಿ ಅಜಯ್ ಶಾ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಪಾಟ್ನಾದ ಅಲಮ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಬಜರಂಗಪುರಿ ಕಾಲುವೆ ಬಳಿ ಬಿಜೆಪಿ ನಾಯಕ ಮತ್ತು ಡೈರಿ ಬೂತ್ ಆಪರೇಟರ್ 50 ವರ್ಷದ ಶಾ ಎಂಬುವವರನ್ನು ದುಷ್ಕರ್ಮಿಗಳು ರಾತ್ರಿ 10 ಗಂಟೆ ಸುಮಾರಿಗೆ ಗುಂಡಿಕ್ಕಿ ಕೊಂದಿದ್ದಾರೆ. ಆತನನ್ನು ಕೊಂದ ನಂತರ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಕೊಲೆಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಘಟನೆ ಬಳಿಕ ಸ್ಥಳಕ್ಕಾಗಮಿಸಿದ ಪಾಟ್ನಾ ಸಿಟಿ ಎಎಸ್ಪಿ ಶರತ್ ಆರ್.ಎಸ್, ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಗೂಂಡಾಗಳನ್ನು ಗುರುತಿಸಲು ಪ್ರದೇಶದಲ್ಲಿ ಅಳವಡಿಸಲಾಗಿರುವ ಸಿಸಿಟಿವಿಯನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.

ಮತ್ತಷ್ಟು ಓದಿ: ರಾಜಸ್ಥಾನ: ಬೈಕ್​​ಗೆ ಪತ್ನಿಯನ್ನು ಕಟ್ಟಿ ಎಳೆದೊಯ್ದ ಪತಿ, ವಿಡಿಯೊ ವೈರಲ್ 

ಗುಂಡಿನ ಸದ್ದು ಕೇಳಿದ ಬಳಿಕ ಕುಟುಂಬಸ್ಥರು ಹೊರಗೆ ಬಂದು ಗಾಯಾಳು ಶಾ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದು ನಂತರ ಚಿಕಿತ್ಸೆಗಾಗಿ ಎನ್‌ಎಂಸಿಎಚ್‌ಗೆ ಕರೆದೊಯ್ದರು, ಅಲ್ಲಿ ವೈದ್ಯರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:40 am, Wed, 14 August 24

‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ
ಮಕ್ಕಳು ಸೀನಿದಾಗ ಚಿರಂಜೀವಿ ಚಿರಂಜೀವಿ ಅಂತ ಯಾಕೆ ಅನ್ನಬೇಕು?
ಮಕ್ಕಳು ಸೀನಿದಾಗ ಚಿರಂಜೀವಿ ಚಿರಂಜೀವಿ ಅಂತ ಯಾಕೆ ಅನ್ನಬೇಕು?
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಲಾರಿಯಡಿ ಸಿಲುಕಿದ ಬೈಕ್; ಪವಾಡದಂತೆ ಬಚಾವಾದ ಚಾಲಕ
ಲಾರಿಯಡಿ ಸಿಲುಕಿದ ಬೈಕ್; ಪವಾಡದಂತೆ ಬಚಾವಾದ ಚಾಲಕ