ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ನಡೆದಿದೆ. ಮೃತರನ್ನು ಬಿಜೆಪಿ ಬಜರಂಗಪುರಿ ಮಂಡಲದ ಮಾಜಿ ಪ್ರಧಾನ ಕಾರ್ಯದರ್ಶಿ ಅಜಯ್ ಶಾ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಪಾಟ್ನಾದ ಅಲಮ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಬಜರಂಗಪುರಿ ಕಾಲುವೆ ಬಳಿ ಬಿಜೆಪಿ ನಾಯಕ ಮತ್ತು ಡೈರಿ ಬೂತ್ ಆಪರೇಟರ್ 50 ವರ್ಷದ ಶಾ ಎಂಬುವವರನ್ನು ದುಷ್ಕರ್ಮಿಗಳು ರಾತ್ರಿ 10 ಗಂಟೆ ಸುಮಾರಿಗೆ ಗುಂಡಿಕ್ಕಿ ಕೊಂದಿದ್ದಾರೆ. ಆತನನ್ನು ಕೊಂದ ನಂತರ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಕೊಲೆಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಘಟನೆ ಬಳಿಕ ಸ್ಥಳಕ್ಕಾಗಮಿಸಿದ ಪಾಟ್ನಾ ಸಿಟಿ ಎಎಸ್ಪಿ ಶರತ್ ಆರ್.ಎಸ್, ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.
ಗೂಂಡಾಗಳನ್ನು ಗುರುತಿಸಲು ಪ್ರದೇಶದಲ್ಲಿ ಅಳವಡಿಸಲಾಗಿರುವ ಸಿಸಿಟಿವಿಯನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.
ಮತ್ತಷ್ಟು ಓದಿ: ರಾಜಸ್ಥಾನ: ಬೈಕ್ಗೆ ಪತ್ನಿಯನ್ನು ಕಟ್ಟಿ ಎಳೆದೊಯ್ದ ಪತಿ, ವಿಡಿಯೊ ವೈರಲ್
ಗುಂಡಿನ ಸದ್ದು ಕೇಳಿದ ಬಳಿಕ ಕುಟುಂಬಸ್ಥರು ಹೊರಗೆ ಬಂದು ಗಾಯಾಳು ಶಾ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದು ನಂತರ ಚಿಕಿತ್ಸೆಗಾಗಿ ಎನ್‌ಎಂಸಿಎಚ್‌ಗೆ ಕರೆದೊಯ್ದರು, ಅಲ್ಲಿ ವೈದ್ಯರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:40 am, Wed, 14 August 24