ಶೃಂಗೇರಿಯಲ್ಲಿ ಮುಂದುವರೆದ ಹಾಲಿ-ಮಾಜಿ ಎಂಎಲ್​ಎ ಬೆಂಬಲಿಗರ ಹೊಡೆದಾಟ: ಕಾಂಗ್ರೆಸ್ಸಿಗರಿಂದ​ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ

| Updated By: ಗಂಗಾಧರ​ ಬ. ಸಾಬೋಜಿ

Updated on: Feb 06, 2023 | 5:27 PM

ಬಿಜೆಪಿ ಕಾರ್ಯಕರ್ತನಿಗೆ ಕಾಂಗ್ರೆಸ್​ ಕಾರ್ಯಕರ್ತರಿಂದ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಡಬಗೆರೆ ಗ್ರಾಮದಲ್ಲಿ ನಡೆದಿದೆ.

ಶೃಂಗೇರಿಯಲ್ಲಿ ಮುಂದುವರೆದ ಹಾಲಿ-ಮಾಜಿ ಎಂಎಲ್​ಎ ಬೆಂಬಲಿಗರ ಹೊಡೆದಾಟ: ಕಾಂಗ್ರೆಸ್ಸಿಗರಿಂದ​ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ
ಕಾಂಗ್ರೆಸ್ಸಿಗರಿಂದ​ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ
Follow us on

ಚಿಕ್ಕಮಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ದಿನದಿಂದ ದಿನಕ್ಕೆ ಹೊಡೆದಾಟ ಪ್ರಕರಣಗಳು ಹೆಚ್ಚುತ್ತಿವೆ. ಬಿಜೆಪಿ ಕಾರ್ಯಕರ್ತನಿಗೆ ಕಾಂಗ್ರೆಸ್​ ಕಾರ್ಯಕರ್ತರಿಂದ ಹಲ್ಲೆ (Assault) ಮಾಡಿರುವಂತಹ ಘಟನೆ ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಡಬಗೆರೆ ಗ್ರಾಮದಲ್ಲಿ ನಡೆದಿದೆ. ಅಲ್ಲಿಗೆ ಶೃಂಗೇರಿಯಲ್ಲಿ ಹಾಲಿ-ಮಾಜಿ ಎಂ.ಎಲ್.ಎ. ಬೆಂಬಲಿಗರ ಹೊಡೆದಾಟ ಮುಂದುವರೆದಂತ್ತಾಗಿದೆ. ಸತೀಶ್ ಹಾಗೂ ಅವರ ಬೆಂಬಲಿಗರಿಂದ ಹಾರ್ಥೇಶ್​​ ಮೇಲೆ ಹಲ್ಲೆ ಮಾಡಲಾಗಿದೆ. ಬಿಜೆಪಿಯ ಸಿಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್​​.ಜೀವರಾಜ್ ಪರ ಕೆಲಸ ಮಾಡುತ್ತಿರುವುದಕ್ಕೆ ಬೈಕ್​ನಲ್ಲಿ ಬರುವಾಗ ಅಡ್ಡಗಟ್ಟಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವುದಾಗಿ ಆರೋಪ ಮಾಡಲಾಗಿದೆ. ಒಂದೇ ವಾರದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಎರಡು ಭಾರಿ ಹಲ್ಲೆ ಮಾಡಲಾಗಿದೆ. ಕಳೆದ ವಾರ ಎನ್​.ಆರ್​.ಪುರದಲ್ಲಿ ಬಿಜೆಪಿ ಕಾರ್ಯಕರ್ತ ಶಿವು ಎಂಬಾತನ ಮೇಲೆ ಹಲ್ಲೆ ನಡೆದಿತ್ತು. ಬಾಳೆಹೊನ್ನೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸ್ವಪಕ್ಷೀಯ ಕಾರ್ಯಕರ್ತನನ್ನು ಲಾಠಿಯಿಂದ ಹಿಗ್ಗಾಮುಗ್ಗಾ ಥಳಿಸಿದ ಹಾಸನ ಬಿಜೆಪಿ ನಾಯಕ

ಹಾಸನ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ನಾಯಕರು ಮತದಾರರನ್ನು ಸೆಳೆಯಲು ನಾನಾ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ಮಧ್ಯೆ ಹಾಸನದಲ್ಲಿ ಬಿಜೆಪಿ ನಾಯಕರೊಬ್ಬರು ಸ್ವಪಕ್ಷೀಯ ಕಾರ್ಯಕರ್ತನನ್ನು ಅಟ್ಟಾಡಿಸಿಕೊಂಡು ಹೊಡೆದಿರುವ ಘಟನೆ ಅರಸೀಕೆರೆಯಲ್ಲಿ ನಡೆದಿದೆ. ಬಿಜೆಪಿಯ ಬೂತ್ ವಿಜಯ್ ಅಭಿಯಾನ ಕಾರ್ಯಕಮದಲ್ಲಿ ತಮಗೆ ಅವಮಾನ ಮಾಡಿದ್ದಾನೆಂದು ವಿಜಯ್ ಕುಮಾರ್ ತನ್ನ ಕಾರು ಚಾಲಕನ ಜೊತೆ ಸೇರಿಕೊಂಡು ಕುಮಾರ್​ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ: ಕಾರ್ಯಕರ್ತನನ್ನು ಅಟ್ಟಾಡಿಸಿ ಹೊಡೆದಿದ್ದ ಕೇಸ್​​: ಅರಸೀಕೆರೆ ಪೊಲೀಸರಿಂದ ಬಿಜೆಪಿ ಮುಖಂಡ ಮತ್ತು ಕಾರು ಚಾಲಕನ ಬಂಧನ

ವರ್ಷದ ಹಿಂದೆ ಬಿಜೆಪಿ ಸಮಾವೇಶದ ವೇಳೆ ಬಿಜೆಪಿ ಬಿಜೆಪಿ ಅರಸೀಕೆರೆ ಬಿಜೆಪಿ ಟಿಕೇಟ್ ಆಕಾಂಕ್ಷಿ ಎನ್.ಆರ್.ಸಂತೋಚ್ ಹಾಗೂ ವಿಜಯ್ ಕುಮಾರ್ ಬಣದ ನಡುವೆ ಗಲಾಟೆ ನಡೆದಿತ್ತು. ಹಲ್ಲೆಗೊಳಗಾದ ಕುಮಾರ್ ಎನ್.ಆರ್ ಸಂತೋಷ್ ಬಣದಲ್ಲಿ ಗುರ್ತಿಸಿಕೊಂಡಿದ್ದರು. ಅಲ್ಲದೇ ಇತ್ತೀಚೆಗೆ ಬಿಜೆಪಿಯ ಬೂತ್​ ವಿಜಯ್ ಅಭಿಯಾನ​ ನಿಮಿತ್ತ ಗ್ರಾಮಗಳಿಗೆ ತೆರಳಿದ್ದ ವೇಳೆ ಕೆಲ ಜನರಿಂದ ವಿಜಯ್ ಕುಮಾರ್​ಗೆ ಅವಮಾನವಾಗಿತ್ತು. ಆ ಘಟನೆ ವೀಡಿಯೋ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದ ಎನ್ನಲಾಗಿದೆ.

ಇದನ್ನೂ ಓದಿ: ಪೋಕ್ಸೋ ಪ್ರಕರಣದ ಆರೋಪಿಯಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ವಿಶೇಷ ಅಭಿಯೋಜಕಿ

ಈ ಎಲ್ಲಾ ಬೆಳವಣಿಗೆಗಳಿಂದ ವಿಜಯ್ ಕುಮಾರ್ ಕುಪಿತಗೊಂಡು ಇಂದು ಅರಸೀಕೆರೆ ನಗರಸಭೆ ಎದುರು ನೂರಾರು ಜನರ ಎದುರೇ ತಮ್ಮ ಕಾರು ಚಾಲಕನ ಜೊತೆ ಸೇರಿ ಲಾಠಿಯಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅರಸೀಕೆರೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಗಾಯಾಳು ಕುಮಾರ್ ಅವರನ್ನು ಅರಸೀಕೆರೆ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:27 pm, Mon, 6 February 23