AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ ಕಾಲ್ ಮಾಡಿ ನಗ್ನಳಾದ ಯುವತಿ, ಬಳಿಕ ಹಟ್ಟಿ ಚಿನ್ನದ ಗಣಿ ಸಿಬ್ಬಂದಿಗೆ ಬಂತು ಫೋನ್ ಕರೆ

ದುಷ್ಕರ್ಮಿಗಳು ಇತ್ತೀಚೆಗೆ ಮಹೇಂದ್ರ ಖಾಸಗಿ ಶಾಲೆ ಶಿಕ್ಷಕ ಅಂತ ಅವರ ಅಶ್ಲೀಲ ವಿಡಿಯೋವನ್ನು ವೈರಲ್ ಮಾಡಿದ್ದರು. ಅಲ್ಲದೆ ಅವರ ಕುಟುಂಬಸ್ಥರಿಗೂ ವಿಡಿಯೋ ಶೇರ್ ಮಾಡಿ ದುಷ್ಕರ್ಮಿಗಳು ಆಟಾಟೋಪ ಮೆರದಿದ್ದಾರೆ. ಈ ವಿಡಿಯೋವನ್ನು ಇಟ್ಟುಕೊಂಡು ಆರೋಪಿಗಳು ಕಳೆದೊಂದು ವರ್ಷದಿಂದ ಹಣಕ್ಕಾಗಿ ಮಹೇಂದ್ರ ಅವರಿಗೆ ನಿರಂತರ ಬ್ಯ್ಲಾಕ್​ ಮೇಲ್​ ಮಾಡುತ್ತಿದ್ದಾರೆ.

ವಿಡಿಯೋ ಕಾಲ್ ಮಾಡಿ ನಗ್ನಳಾದ ಯುವತಿ, ಬಳಿಕ ಹಟ್ಟಿ ಚಿನ್ನದ ಗಣಿ ಸಿಬ್ಬಂದಿಗೆ ಬಂತು ಫೋನ್ ಕರೆ
ಸಾಂದರ್ಭಿಕ ಚಿತ್ರ
ಭೀಮೇಶ್​​ ಪೂಜಾರ್
| Edited By: ವಿವೇಕ ಬಿರಾದಾರ|

Updated on:Nov 08, 2023 | 11:03 AM

Share

ರಾಯಚೂರು ನ.8: ಹಟ್ಟಿ ಚಿನ್ನದ ಗಣಿ (Hatti Gold Mine) ಸಿನಿಯರ್ ಗೇಜ್ ಆಪರೇಟರ್​ಗೆ ಸೈಬರ್ ವಂಚಕರು ಕಳೆದೊಂದು ವರ್ಷದಿಂದ ಬ್ಲ್ಯಾಕ್ ‌ಮೇಲ್ ಮಾಡಿದ್ದು, ಹಟ್ಟಿ ಪೊಲೀಸ್(Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಟ್ಟಿ ಚಿನ್ನದ ಗಣಿಯಲ್ಲಿ ಮಹೇಂದ್ರ ಕುರ್ಡಿ ಸಿನಿಯರ್ ಗೇಜ್ ಆಪರೇಟರ್​ ಆಗಿ ಕೆಲಸ ಮಾಡುತ್ತಿದ್ದಾರೆ. ಒಂದು ದಿನ ಮಹೇಂದ್ರ ಅವರು ಗಣಿಯೊಳಗಡೆ ಕೆಲಸ ಮಾಡುತ್ತಿದ್ದ ವೇಳೆ ಅವರ ಮೊಬೈಲ್​ಗೆ ಒಂದು ಲಿಂಕ್​ ಬಂದಿತ್ತು. ಆ ಲಿಂಕ್​ ಅನ್ನು ಮಹೇಂದ್ರ ಅವರು ಕ್ಲಿಕ್​ ಮಾಡಿದ್ದರು.

ಬಳಿಕ ಮಹೇಂದ್ರ ವಿಡಿಯೋ ಕಾಲ್​ನಲ್ಲಿ ನಗ್ನ ಸ್ಥಿತಿಯಲ್ಲಿರುವ ಯುವತಿ ಜೊತೆ ಮಾತನಾಡುತ್ತಿರುವ ರೀತಿಯ ವಿಡಿಯೋ ಕ್ರಿಯೇಟ್​ ಮಾಡಲಾಯಿತು. ಆಕೆಯ ಅಶ್ಲೀಲ ವರ್ತನೆಗೆ ತಕ್ಕಂತೆ ಮಹೇಂದ್ರ ವರ್ತಿಸಿರುವ ರೀತಿ ವಿಡಿಯೋ ಎಡಿಟ್ ಮಾಡಲಾಗಿದೆ.

ಈ ವಿಡಿಯೋವನ್ನು ಇಟ್ಟುಕೊಂಡು ಆರೋಪಿಗಳು ಕಳೆದೊಂದು ವರ್ಷದಿಂದ ಹಣಕ್ಕಾಗಿ ಮಹೇಂದ್ರ ಅವರಿಗೆ ನಿರಂತರ ಬ್ಯ್ಲಾಕ್​ ಮೇಲ್​ ಮಾಡುತ್ತಿದ್ದಾರೆ. ನಿರಂತರ ಬ್ಲ್ಯಾಕ್​ ಮೇಲ್​ನಿಂದ ಮಹೇಂದ್ರ ಮನನೊಂದಿದ್ದಾರೆ. ಈ ಬಗ್ಗೆ ಮಹೇಂದ್ರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಅಶ್ಲೀಲ ವಿಡಿಯೋ ತಯಾರಿಸಿ ಖಾಸಗಿ ಚಾನೆಲ್​ ವರದಿಗಾರನಿಂದ ಬಿಜೆಪಿ ಕಾರ್ಯಕರ್ತೆಗೆ ಬ್ಲ್ಯಾಕ್ ‌ಮೇಲ್

ದುಷ್ಕರ್ಮಿಗಳು ಇತ್ತೀಚೆಗೆ ಮಹೇಂದ್ರ ಖಾಸಗಿ ಶಾಲೆ ಶಿಕ್ಷಕ ಅಂತ ಅವರ ಅಶ್ಲೀಲ ವಿಡಿಯೋವನ್ನು ವೈರಲ್ ಮಾಡಿದ್ದರು. ಅಲ್ಲದೆ ಅವರ ಕುಟುಂಬಸ್ಥರಿಗೂ ವಿಡಿಯೋ ಶೇರ್ ಮಾಡಿ ದುಷ್ಕರ್ಮಿಗಳು ಆಟಾಟೋಪ ಮೆರದಿದ್ದಾರೆ.

ನಮ್ಮ ಶಾಲೆಯಲ್ಲಿ ಘಟನೆ ನಡೆದಿಲ್ಲ, ಅದು ಹಟ್ಟಿ ಚಿನ್ನದ ಗಣಿಯಲ್ಲಿ ನಡೆದಿದೆ. ಮಹೇಂದ್ರ ಅವರು ನಮ್ಮ ಖಾಸಗಿ ವಿದ್ಯಾ ಸಂಸ್ಥೆಯಲ್ಲಿ ಖಜಾಂಚಿಯಾಗಿದ್ದರು. ನಮ್ಮ ಶಾಲೆ ಹೆಸರು ಉಲ್ಲೇಖಿಸಿ ವಿಡಿಯೋ ವೈರಲ್ ಮಾಡಲಾಗುತ್ತಿದೆ. ವಿಡಿಯೋ ವೈರಲ್ ಬಳಿಕ ಖಜಾಂಜಿ ಸ್ಥಾನಕ್ಕೆ ಮಹೇಂದ್ರರಿಂದ ರಾಜೀನಾಮೆ ಪಡೆಯಲಾಗಿದೆ. ಅವರಿಗೂ, ನಮ್ಮ ಸಂಸ್ಥೆಗೂ ಯಾವುದೇ ಸಂಬಂಧವಿಲ್ಲ ಅಂತ ಖಾಸಗಿ ವಿದ್ಯಾಸಂಸ್ಥೆಯ ಅಧ್ಯಕ್ಷ ನರಸಪ್ಪ ಯಾದವ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:02 am, Wed, 8 November 23

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!