ನೊಯ್ಡಾ: ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಮನೆಯೊಂದರಲ್ಲಿ ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಇಂದು ಸಂಭವಿಸಿದ ಸ್ಫೋಟದಲ್ಲಿ ಓರ್ವ ಬಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ರಾಗದ್‌ಗಂಜ್ ಗ್ರಾಮದ ಮೊಹಮ್ಮದ್ ಫಾರೂಕ್ ಅವರ ನಿವಾಸದಲ್ಲಿ ಪಟಾಕಿ ತಯಾರಿಸುತ್ತಿದ್ದ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಈ ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಆಡಳಿತಾಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.
ಮೃತರನ್ನು ಆಕಾಶ್ (15) ಮತ್ತು ಲಲ್ಲು (30) ಎಂದು ಗುರುತಿಸಲಾಗಿದೆ. ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯೆ ಆಕಾಶ್ ಮತ್ತು ಲಲ್ಲು ಮೃತಪಟ್ಟರೆ, ಇತರ ಮೂವರಾದ ಇಶ್ತಿಯಾಕ್ (40), ಅಯಾಸ್ (17) ಮತ್ತು ಕೃಷ್ಣ ಕುಮಾರ್ (24) ಗಾಯಗೊಂಡಿದ್ದಾರೆ. ಇನ್ನುಳಿದ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಉತ್ತಮ ಚಿಕಿತ್ಸೆಗಾಗಿ ಲಕ್ನೋಗೆ ಕಳುಹಿಸಲಾಗಿದೆ.
ಇದನ್ನೂ ಓದಿ: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ಕಲ್ಲಿದ್ದಲು ಗಣಿ ಸ್ಫೋಟ; 7 ಜನ ಸಾವು
ಪೊಲೀಸರ ಪ್ರಕಾರ, ಫಾರೂಕ್ ಪಂಜಾಬ್‌ನಲ್ಲಿ ವಾಸಿಸುತ್ತಿದ್ದರು. ಮನೆಯ ಮಾಲೀಕರು ಪಂಜಾಬ್‌ನ ಜಲಂಧರ್‌ನಲ್ಲಿ ವಾಸಿಸುತ್ತಿದ್ದು, ಸ್ಫೋಟ ಸಂಭವಿಸಿದಾಗ ಕೆಲವರು ಪಟಾಕಿಗಳನ್ನು ತಯಾರಿಸುತ್ತಿದ್ದರು ಎಂದು ಪ್ರತ್ಯಕ್ಷದರ್ಶಿ ರಾಜ್ಜನ್ ಬಾಬಾ ಹೇಳಿದ್ದಾರೆ. ಸ್ಫೋಟದ ರಭಸಕ್ಕೆ ಮನೆಯ ಗೋಡೆ ಕುಸಿದು ಪಕ್ಕದ ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಗೊಂಡಾ ಪೊಲೀಸ್ ವರಿಷ್ಠಾಧಿಕಾರಿ ವಿನೀತ್ ಜೈಸ್ವಾಲ್ ಅವರು ಶ್ವಾನ ದಳ ಮತ್ತು ಕ್ಷೇತ್ರ ಘಟಕಗಳು ಸ್ಥಳದಲ್ಲಿದ್ದು, ತನಿಖೆ ನಡೆಸುತ್ತಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ