ಬೆಂಗಳೂರು ಗ್ರಾಮಾಂತರ: ಡಿಪೋದಲ್ಲಿ ನೇಣು ಬಿಗಿದುಕೊಂಡು ಬಿಎಂಟಿಸಿ ಡ್ರೈವರ್​ ಕಂ ಕಂಡಕ್ಟರ್​ ಆತ್ಮಹತ್ಯೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ‌ಯ ದೇವನಹಳ್ಳಿ ಪಟ್ಟಣದ ಬಿಎಂಟಿಸಿ ಡಿಪೋದಲ್ಲಿ ಚಾಲಕ ಕಂ ನಿರ್ವಾಹಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಲೂಕಿನ‌ ಆವತಿ ಮೂಲದ ನಾಗೇಶ್ (45) ಆತ್ಮಹತ್ಯೆಗೆ ಶರಣಾದ ಚಾಲಕ.

ಬೆಂಗಳೂರು ಗ್ರಾಮಾಂತರ: ಡಿಪೋದಲ್ಲಿ ನೇಣು ಬಿಗಿದುಕೊಂಡು ಬಿಎಂಟಿಸಿ ಡ್ರೈವರ್​ ಕಂ ಕಂಡಕ್ಟರ್​ ಆತ್ಮಹತ್ಯೆ
ಮೃತ ಚಾಲಕ
Follow us
ನವೀನ್ ಕುಮಾರ್ ಟಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 08, 2023 | 8:55 AM

ಬೆಂಗಳೂರು ಗ್ರಾಮಾಂತರ, ಆ.8: ಇತ್ತೀಚೆಗಷ್ಟೇ ಮಂಡ್ಯ ಜಿಲ್ಲೆಯಲ್ಲಿ ಕೆಎಸ್​ಆರ್​ಟಿಸಿ (KSRTC) ಚಾಲಕ ಜಗದೀಶ್​​ ಆತ್ಮಹತ್ಯೆಗೆ ಯತ್ನಿಸಿದ್ದರು. ಅದರಂತೆ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆ‌ಯ ದೇವನಹಳ್ಳಿ(Devanahalli) ಪಟ್ಟಣದ ಬಿಎಂಟಿಸಿ(BMTC) ಡಿಪೋದಲ್ಲಿ ಚಾಲಕ ಕಂ ನಿರ್ವಾಹಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಲೂಕಿನ‌ ಆವತಿ ಮೂಲದ ನಾಗೇಶ್ (45) ಆತ್ಮಹತ್ಯೆಗೆ ಶರಣಾದ ಚಾಲಕ. ಇತ ಚಾಲಕ‌ ಕಂ ನಿರ್ವಾಹಕನಾಗಿ‌ ಕೆಲಸ ಮಾಡುತ್ತಿದ್ದರು. ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ನೊಂದಿದ್ದ ನಾಗೇಶ್. ಕಳೆದ ಮಧ್ಯರಾತ್ರಿ ಡಿಪೋಗೆ ಬಂದು ಡಿಪೋ ಮ್ಯಾನೇಜರ್ ಕೊಠಡಿ ಎದುರೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಳಗ್ಗೆ ಸಿಬ್ಬಂದಿಗಳು ನೋಡಿ, ದೇವನಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾಂಗ್ರೆಸ್ ಮುಖಂಡ ಅನೂಪ್ ಅಯ್ಯರ್ ಮನೆಯಲ್ಲಿ ಕೆಲಸ ಮಾಡುತಿದ್ದ ವ್ಯಕ್ತಿ, ಅಪಘಾತದಲ್ಲಿ ಸಾವು

ಬೆಂಗಳೂರು: ದ್ವಿಚಕ್ರ ವಾಹನವೊಂದು ವೇಗವಾಗಿ ಬಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಯಶವಂತಪುರ ಬಳಿ ನಡೆದಿದೆ. ತ್ರಿಪುರ ಮೂಲದ ಬಿಜ್ಜು ಸೆಲ್ಫ್ ಆಕ್ಸಿಡೆಂಟ್ ನಲ್ಲಿ ಸಾವನ್ನಪ್ಪಿದ ವ್ಯಕ್ತಿ. ಇತ ಕಾಂಗ್ರೆಸ್ ಮುಖಂಡ ಅನೂಪ್ ಅಯ್ಯರ್ ಮನೆಯಲ್ಲಿ ಕೆಲಸ ಮಾಡುತಿದ್ದ. ಸಂಬಂಧಿ‌ಯೊಬ್ಬನನ್ನು ಡ್ರಾಪ್ ಮಾಡಿ, ಯಶವಂತಪುರದಿಂದ ಮಲ್ಲೇಶ್ವರಂನ ಅನೂಪ್ ಅಯ್ಯರ್ ಮನೆಗೆ ಬರುತಿದ್ದ ವೇಳೆ ಅಪಘಾತವಾಗಿದೆ. ಮೃತ ದೇಹವನ್ನು ಪೊಲೀಸರು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಿದ್ದು, ಯಶವಂತಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಖುಷ್​​ ಖುಷಿಯಾಗಿದ್ದ ನವದಂಪತಿ ಬೆಳ್ಳಂಬೆಳಗ್ಗೆ ಜೋಡಿಯಾಗಿಯೇ ಶವವಾದರು: ನವದಂಪತಿಯದ್ದು ಕೊಲೆಯೋ, ಆತ್ಮಹತ್ಯೆಯೋ?

ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಲಾರಿ

ಚಿಕ್ಕಬಳ್ಳಾಫುರ: ರಾಷ್ಟ್ರೀಯ ಹೆದ್ದಾರಿ 44 ರ ರಸ್ತೆ ಬದಿ ನೋಡ ನೋಡುತ್ತಿದ್ದಂತೆ ಲಾರಿಯೊಂದು ಹೊತ್ತಿ ಉರಿದಿದೆ. ಚಿಕ್ಕಬಳ್ಳಾಪುರ ನಗರ ಹೊರವಲಯದ ಮಂಚನಬಲೆ ಬ್ರಿಡ್ಜ್ ಬಳಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಕುರಿತು ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:48 am, Tue, 8 August 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ