BMTC ಮಹಿಳಾ ಕಂಡಕ್ಟರ್ ಮೇಲೆ ಆಸಿಡ್ ದಾಳಿ
ಬೆಂಗಳೂರು: ನಗರದ ಬಾಗಲಗುಂಟೆ ಸರ್ಕಲ್ ಬಳಿ ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಆಸಿಡ್ ಎರಚಿರುವ ಘಟನೆ ನಡೆದಿದೆ. ಬೆಳಗಿನ ಜಾವ 5.30ರ ಸುಮಾರಿಗೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಹಿಳಾ ಕಂಡಕ್ಟರ್ ಮೇಲೆ ಆಸಿಡ್ ಎರಚಿ ಪರಾರಿಯಾಗಿದ್ದಾನೆ. ತುಮಕೂರಿನ ಶಿರಾ ಮೂಲದ ಮಹಿಳಾ ಕಂಡಕ್ಟರ್ ಬೆಳಗ್ಗೆ ಕೆಲಸಕ್ಕೆ ಹೊರಟಿದ್ದರು. ಈ ವೇಳೆ ದುಷ್ಕರ್ಮಿಗಳು ಆಸಿಡ್ ದಾಳಿ ನಡೆಸಿದ್ದಾರೆ. ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರು […]
ಬೆಂಗಳೂರು: ನಗರದ ಬಾಗಲಗುಂಟೆ ಸರ್ಕಲ್ ಬಳಿ ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಆಸಿಡ್ ಎರಚಿರುವ ಘಟನೆ ನಡೆದಿದೆ. ಬೆಳಗಿನ ಜಾವ 5.30ರ ಸುಮಾರಿಗೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಹಿಳಾ ಕಂಡಕ್ಟರ್ ಮೇಲೆ ಆಸಿಡ್ ಎರಚಿ ಪರಾರಿಯಾಗಿದ್ದಾನೆ.
ತುಮಕೂರಿನ ಶಿರಾ ಮೂಲದ ಮಹಿಳಾ ಕಂಡಕ್ಟರ್ ಬೆಳಗ್ಗೆ ಕೆಲಸಕ್ಕೆ ಹೊರಟಿದ್ದರು. ಈ ವೇಳೆ ದುಷ್ಕರ್ಮಿಗಳು ಆಸಿಡ್ ದಾಳಿ ನಡೆಸಿದ್ದಾರೆ. ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರು ತಿಂಗಳ ಹಿಂದೊಮ್ಮೆಯೂ ಸಹ ಆಸಿಡ್ ದಾಳಿ ನಡೆದಿತ್ತು.
Published On - 1:03 pm, Thu, 19 December 19