BMTC ಮಹಿಳಾ ಕಂಡಕ್ಟರ್ ಮೇಲೆ ಆಸಿಡ್ ದಾಳಿ

ಬೆಂಗಳೂರು: ನಗರದ ಬಾಗಲಗುಂಟೆ ಸರ್ಕಲ್ ಬಳಿ ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಆಸಿಡ್ ಎರಚಿರುವ ಘಟನೆ ನಡೆದಿದೆ. ಬೆಳಗಿನ ಜಾವ 5.30ರ ಸುಮಾರಿಗೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಹಿಳಾ ಕಂಡಕ್ಟರ್ ಮೇಲೆ ಆಸಿಡ್ ಎರಚಿ ಪರಾರಿಯಾಗಿದ್ದಾನೆ. ತುಮಕೂರಿನ ಶಿರಾ ಮೂಲದ ಮಹಿಳಾ ಕಂಡಕ್ಟರ್ ಬೆಳಗ್ಗೆ ಕೆಲಸಕ್ಕೆ ಹೊರಟಿದ್ದರು. ಈ ವೇಳೆ ದುಷ್ಕರ್ಮಿಗಳು ಆಸಿಡ್ ದಾಳಿ ನಡೆಸಿದ್ದಾರೆ. ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರು […]

BMTC ಮಹಿಳಾ ಕಂಡಕ್ಟರ್ ಮೇಲೆ ಆಸಿಡ್ ದಾಳಿ
ಸಾಧು ಶ್ರೀನಾಥ್​

Updated on: Dec 19, 2019 | 1:39 PM

ಬೆಂಗಳೂರು: ನಗರದ ಬಾಗಲಗುಂಟೆ ಸರ್ಕಲ್ ಬಳಿ ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಆಸಿಡ್ ಎರಚಿರುವ ಘಟನೆ ನಡೆದಿದೆ. ಬೆಳಗಿನ ಜಾವ 5.30ರ ಸುಮಾರಿಗೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಹಿಳಾ ಕಂಡಕ್ಟರ್ ಮೇಲೆ ಆಸಿಡ್ ಎರಚಿ ಪರಾರಿಯಾಗಿದ್ದಾನೆ.

ತುಮಕೂರಿನ ಶಿರಾ ಮೂಲದ ಮಹಿಳಾ ಕಂಡಕ್ಟರ್ ಬೆಳಗ್ಗೆ ಕೆಲಸಕ್ಕೆ ಹೊರಟಿದ್ದರು. ಈ ವೇಳೆ ದುಷ್ಕರ್ಮಿಗಳು ಆಸಿಡ್ ದಾಳಿ ನಡೆಸಿದ್ದಾರೆ. ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರು ತಿಂಗಳ ಹಿಂದೊಮ್ಮೆಯೂ ಸಹ ಆಸಿಡ್ ದಾಳಿ ನಡೆದಿತ್ತು.

Published On - 1:03 pm, Thu, 19 December 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us