ದೆಹಲಿಯ ಮನೆಯೊಂದರಲ್ಲಿ ಸ್ಫೋಟಕವಿರುವ ಬ್ಯಾಗ್ ಪತ್ತೆ; ಸ್ಥಳಕ್ಕೆ ದೌಡಾಯಿಸಿದ ಬಾಂಬ್ ನಿಷ್ಕ್ರಿಯ ದಳ

Bomb Scare in Delhi: ಸೀಮಾಪುರಿ ಪ್ರದೇಶದಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಪತ್ತೆಯಾಗಿದೆ ಎಂದು ಅಧಿಕಾರಿಗಳು ಫೋನ್ ಕರೆ ಸ್ವೀಕರಿಸಿದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸ್ ವಿಶೇಷ ಸೆಲ್ ಮತ್ತು ಬಾಂಬ್ ಸ್ಕ್ವಾಡ್ ತಂಡ ಸೀಮಾಪುರಿಗೆ ಧಾವಿಸಿದೆ.

ದೆಹಲಿಯ ಮನೆಯೊಂದರಲ್ಲಿ ಸ್ಫೋಟಕವಿರುವ ಬ್ಯಾಗ್ ಪತ್ತೆ; ಸ್ಥಳಕ್ಕೆ ದೌಡಾಯಿಸಿದ ಬಾಂಬ್ ನಿಷ್ಕ್ರಿಯ ದಳ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Feb 17, 2022 | 6:56 PM

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಸೀಮಾಪುರಿಯಲ್ಲಿರುವ ಮನೆಯಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿತ್ತು. ಆ ಬ್ಯಾಗ್​ ಪರಿಶೀಲಿಸಿದಾಗ ಅದರೊಳಗೆ ಐಇಡಿ (ಸ್ಫೋಟಕ) ಇರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಬಾಂಬ್ ಸ್ಕ್ವಾಡ್ ಮತ್ತು ಅಗ್ನಿಶಾಮಕ ದಳದ ತಂಡಗಳು ಧಾವಿಸಿದ್ದು, ರಾಷ್ಟ್ರೀಯ ಭದ್ರತಾ ದಳವು (ಎನ್​ಎಸ್​ಜಿ) ಆ ಮನೆಯ ಮೇಲೆ ದಾಳಿ ನಡೆಸಿ, ತಪಾಸಣೆ ನಡೆಸಿದೆ. ಆ ಮನೆಯಲ್ಲಿ ಸೀಲ್ ಮಾಡಲಾಗಿದ್ದ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದೆ.

ಪೂರ್ವ ದೆಹಲಿಯ ಗಾಜಿಪುರದ ಹೂವಿನ ಮಾರುಕಟ್ಟೆಯಲ್ಲಿ ಕಳೆದ ತಿಂಗಳು 3 ಕೆಜಿಯ ಆರ್‌ಡಿಎಕ್ಸ್ ಬಾಂಬ್‌ ಇದ್ದ ಬ್ಯಾಗ್ ಪತ್ತೆಯಾಗಿತ್ತು. ಆ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಜನವರಿ 26ರ ಗಣರಾಜ್ಯೋತ್ಸವದ ಮುನ್ನ ನಡೆದ ಭಯೋತ್ಪಾದನಾ ಯತ್ನ ಎಂದು ಪೊಲೀಸರು ಶಂಕಿಸಿದ್ದರು.

ಜನವರಿ 14ರಂದು ಸಾಮಾನ್ಯವಾಗಿ ಭಾರೀ ಜನಸಂದಣಿಯನ್ನು ಸೆಳೆಯುವ ಗಾಜಿಪುರ ಮಾರುಕಟ್ಟೆಯಲ್ಲಿ ಇರಿಸಲಾಗಿದ್ದ ಬಾಂಬ್ ಅನ್ನು ಪೊಲೀಸರು ನಿಷ್ಕ್ರಿಯಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ಸೀಮಾಪುರಿ ಪ್ರದೇಶದಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಪತ್ತೆಯಾಗಿದೆ ಎಂದು ಅಧಿಕಾರಿಗಳು ಫೋನ್ ಕರೆ ಸ್ವೀಕರಿಸಿದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸ್ ವಿಶೇಷ ಸೆಲ್ ಮತ್ತು ಬಾಂಬ್ ಸ್ಕ್ವಾಡ್ ತಂಡ ಸೀಮಾಪುರಿಗೆ ಧಾವಿಸಿದೆ. ಪೊಲೀಸರು ಆ ಪ್ರದೇಶವನ್ನು ಸುತ್ತುವರಿದಿದ್ದಾರೆ.

ಇದೀಗ ಐಇಡಿ ಸ್ಫೋಟಕವಿರುವ ಬ್ಯಾಗ್ ಪತ್ತೆಯಾಗಿರುವ ಮನೆಯಲ್ಲಿ ಮೂರ್ನಾಲ್ಕು ಯುವಕರು ಬಾಡಿಗೆಗಿದ್ದರು. ಇದೀಗ ಆ ಯುವಕರು ಅಲ್ಲಿಂದ ಪರಾರಿಯಾಗಿದ್ದಾರೆ.

ಇದನ್ನೂ ಓದಿ: BJP Office Attacked: ತಮಿಳುನಾಡು ಬಿಜೆಪಿ ಕೇಂದ್ರ ಕಚೇರಿ ‘ಕಮಲಾಲಯಂ’ ಮೇಲೆ ಪೆಟ್ರೋಲ್ ಬಾಂಬ್​ ದಾಳಿ​

ಭಾರತ-ಪಾಕ್ ಗಡಿಯಲ್ಲಿ ಬಾಂಬ್ ಎಸೆದ ಡ್ರೋನ್​; ಬಿಎಸ್​ಎಫ್ ಯೋಧರಿಂದ ಗುಂಡಿನ ದಾಳಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್