ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಸೀಮಾಪುರಿಯಲ್ಲಿರುವ ಮನೆಯಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿತ್ತು. ಆ ಬ್ಯಾಗ್ ಪರಿಶೀಲಿಸಿದಾಗ ಅದರೊಳಗೆ ಐಇಡಿ (ಸ್ಫೋಟಕ) ಇರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಬಾಂಬ್ ಸ್ಕ್ವಾಡ್ ಮತ್ತು ಅಗ್ನಿಶಾಮಕ ದಳದ ತಂಡಗಳು ಧಾವಿಸಿದ್ದು, ರಾಷ್ಟ್ರೀಯ ಭದ್ರತಾ ದಳವು (ಎನ್ಎಸ್ಜಿ) ಆ ಮನೆಯ ಮೇಲೆ ದಾಳಿ ನಡೆಸಿ, ತಪಾಸಣೆ ನಡೆಸಿದೆ. ಆ ಮನೆಯಲ್ಲಿ ಸೀಲ್ ಮಾಡಲಾಗಿದ್ದ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದೆ.
ಪೂರ್ವ ದೆಹಲಿಯ ಗಾಜಿಪುರದ ಹೂವಿನ ಮಾರುಕಟ್ಟೆಯಲ್ಲಿ ಕಳೆದ ತಿಂಗಳು 3 ಕೆಜಿಯ ಆರ್‌ಡಿಎಕ್ಸ್ ಬಾಂಬ್ ಇದ್ದ ಬ್ಯಾಗ್ ಪತ್ತೆಯಾಗಿತ್ತು. ಆ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಜನವರಿ 26ರ ಗಣರಾಜ್ಯೋತ್ಸವದ ಮುನ್ನ ನಡೆದ ಭಯೋತ್ಪಾದನಾ ಯತ್ನ ಎಂದು ಪೊಲೀಸರು ಶಂಕಿಸಿದ್ದರು.
ಜನವರಿ 14ರಂದು ಸಾಮಾನ್ಯವಾಗಿ ಭಾರೀ ಜನಸಂದಣಿಯನ್ನು ಸೆಳೆಯುವ ಗಾಜಿಪುರ ಮಾರುಕಟ್ಟೆಯಲ್ಲಿ ಇರಿಸಲಾಗಿದ್ದ ಬಾಂಬ್ ಅನ್ನು ಪೊಲೀಸರು ನಿಷ್ಕ್ರಿಯಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ಸೀಮಾಪುರಿ ಪ್ರದೇಶದಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಪತ್ತೆಯಾಗಿದೆ ಎಂದು ಅಧಿಕಾರಿಗಳು ಫೋನ್ ಕರೆ ಸ್ವೀಕರಿಸಿದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸ್ ವಿಶೇಷ ಸೆಲ್ ಮತ್ತು ಬಾಂಬ್ ಸ್ಕ್ವಾಡ್ ತಂಡ ಸೀಮಾಪುರಿಗೆ ಧಾವಿಸಿದೆ. ಪೊಲೀಸರು ಆ ಪ್ರದೇಶವನ್ನು ಸುತ್ತುವರಿದಿದ್ದಾರೆ.
ಇದೀಗ ಐಇಡಿ ಸ್ಫೋಟಕವಿರುವ ಬ್ಯಾಗ್ ಪತ್ತೆಯಾಗಿರುವ ಮನೆಯಲ್ಲಿ ಮೂರ್ನಾಲ್ಕು ಯುವಕರು ಬಾಡಿಗೆಗಿದ್ದರು. ಇದೀಗ ಆ ಯುವಕರು ಅಲ್ಲಿಂದ ಪರಾರಿಯಾಗಿದ್ದಾರೆ.
ಇದನ್ನೂ ಓದಿ: BJP Office Attacked: ತಮಿಳುನಾಡು ಬಿಜೆಪಿ ಕೇಂದ್ರ ಕಚೇರಿ ‘ಕಮಲಾಲಯಂ’ ಮೇಲೆ ಪೆಟ್ರೋಲ್ ಬಾಂಬ್ ದಾಳಿ
ಭಾರತ-ಪಾಕ್ ಗಡಿಯಲ್ಲಿ ಬಾಂಬ್ ಎಸೆದ ಡ್ರೋನ್; ಬಿಎಸ್ಎಫ್ ಯೋಧರಿಂದ ಗುಂಡಿನ ದಾಳಿ