ವಿಚಾರಣೆ ವೇಳೆ ಹೊರಬಿತ್ತು ಮತ್ತೊಂದು ಸತ್ಯ: ಕೊಲೆ ಆರೋಪಿ ನಡೆಸುತ್ತಿದ್ದನಂತೆ ಖೋಟಾ ನೋಟು ಜಾಲ!

ಮಹಿಳೆಯ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ತನಿಖೆಯ ವೇಳೆ ಇನ್ನೋರ್ವನ ಜೊತೆ ಸೇರಿ ನಕಲಿ ನೋಟುಗಳನ್ನು ಪ್ರಿಂಟ್ ಮಾಡುತ್ತಿರುವುದಾಗಿ ಆರೋಪಿ ತಪ್ಪು ಒಪ್ಪಿಕೊಂಡಿದ್ದಾನೆ.

ವಿಚಾರಣೆ ವೇಳೆ ಹೊರಬಿತ್ತು ಮತ್ತೊಂದು ಸತ್ಯ: ಕೊಲೆ ಆರೋಪಿ ನಡೆಸುತ್ತಿದ್ದನಂತೆ ಖೋಟಾ ನೋಟು ಜಾಲ!
ಖೋಟಾ ನೋಟು ಪ್ರಿಂಟ್ ​ಮಾಡ್ತಿದ್ದ ಆರೋಪಿಗಳ ಬಂಧನ
Follow us
shruti hegde
| Updated By: KUSHAL V

Updated on: Dec 27, 2020 | 1:28 PM

ಬೆಂಗಳೂರು: ಬಾಡಿಗೆ ಮನೆ ಕೇಳುವ ನೆಪದಲ್ಲಿ ಬಂದು ಮನೆ ಮಾಲೀಕಳನ್ನು ಕೊಲೆಗೈದಿದ್ದ ಆರೋಪಿಯನ್ನು ಬೊಮ್ಮನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಅನ್ಸಾರಿ ಅಲಿಯಾಸ್ ಶಾಹುಲ್ ಹಮೀದ್ ಬಂಧಿತ ಆರೋಪಿ.ಬಾಡಿಗೆ ಮನೆ ಕೇಳೋ ನೆಪದಲ್ಲಿ ಬಂದಿದ್ದ ಅನ್ಸಾರಿ ನಿರ್ಮಲ ಮೇರಿ ಎಂಬುವವರನ್ನು ಹತ್ಯೆಗೈದು ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ.

ಇದೀಗ, ಅಚ್ಚರಿಯ ಸಂಗತಿಯೆಂದರೆ ವಿಚಾರಣೆ ವೇಳೆ ಪೊಲೀಸರಿಗೆ ಆರೋಪಿಯ ಮತ್ತೊಂದು ಕರಾಮತ್ತು ಪತ್ತೆಯಾಗಿದೆ. ಹೌದು, ತನಿಖೆ ವೇಳೆ ಪೊಲೀಸರಿಗೆ ಆರೋಪಿ ಅನ್ಸಾರಿ ನಕಲಿ ನೋಟ್ ಪ್ರಿಂಟ್​ ಮಾಡುವ ಜಾಲದಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ.

ಅಂದ ಹಾಗೆ, ಅನ್ಸಾರಿ ಹೆಸರಿನಲ್ಲಿ ನೆರೆಯ ಕೇರಳದಲ್ಲಿ 30 ಪ್ರಕರಣಗಳು ದಾಖಲಾಗಿವೆ. ಹೀಗಾಗಿ, ಈ ಐನಾತಿ ಕಿಲಾಡಿ ಅಲ್ಲಿಂದ ತಪ್ಪಿಸಿಕೊಂಡು ಬಂದು ಸಿಲಿಕಾನ್​ ಸಿಟಿಯಲ್ಲಿ ಬಂದು ನೆಲೆಸಿದ್ದ. ಆದರೆ, ಕಿರಾತಕ ತನ್ನ ಹಳೇ ಚಾಳಿಗಳನ್ನು ಮಾತ್ರ ಬಿಡಲಿಲ್ಲ.

ನಗರದಲ್ಲಿ ಪ್ರದೀಪ್​ ಎಂಬಾತನ ಜೊತೆ ಸೇರಿ ಖೋಟಾ ನೋಟುಗಳನ್ನು ಪ್ರಿಂಟ್ ಮಾಡೋ ಕೆಲಸಕ್ಕೆ ಕೈ ಹಾಕಿದ್ದಾನೆ. ಸದ್ಯ, ವಿಚಾರಣೆ ವೇಳೆ ಅನ್ಸಾರಿ ಈ ಬಗ್ಗೆ ತಪ್ಪೊಪ್ಪಿಕೊಂಡಿದ್ದು ಆತ ನೀಡಿದ ಸುಳಿವಿನ ಬೆನ್ನತ್ತಿದ ಖಾಕಿ ಪಡೆ ಈ ನಕಲಿ ನೋಟ್​ ಜಾಲದ ಮತ್ತೊಬ್ಬ ಆರೋಪಿಯಾದ ಪ್ರದೀಪ್​ನನ್ನು ಸಹ ಅರೆಸ್ಟ್ ಮಾಡಿದ್ದಾರೆ.

ಸದ್ಯ, ಇಬ್ಬರು ಆರೋಪಿಗಳಿಂದ 10 ಸಾವಿರ ರೂಪಾಯಿ ಮೌಲ್ಯದ ಖೋಟಾ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ. ಅಂದ ಹಾಗೆ, ಕೊಲೆ ಮಾತ್ರವಲ್ಲದೇ ಈ ಕಿರಾತಕರು 8 ಸರಗಳ್ಳತನದ ಪ್ರಕರಗಳಲ್ಲಿ ಸಹ ಭಾಗಿಯಾಗಿದ್ದರು ಎಂದು ಹೇಳಲಾಗಿದೆ.

ನಕಲಿ ನೋಟು ಜಾಲ ಪತ್ತೆ : ಮೂವರು ಆರೋಪಿಗಳ ಬಂಧನ

ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ