ಬಾಯ್​ಫ್ರೆಂಡ್​​ ನೋಡಲು ದುಬೈನಿಂದ ಬೆಂಗಳೂರಿಗೆ ಬಂದಿದ್ದ ಗಗನಸಖಿ ಸಾವಿಗೆ ಸ್ಫೋಟಕ ಟ್ವಿಸ್ಟ್​

ಬಾಯ್​ಫ್ರೆಂಡ್​​ ನೋಡಲು ದುಬೈನಿಂದ ಬೆಂಗಳೂರಿಗೆ ಬಂದಿದ್ದ ಗಗನಸಖಿ ಸಾವಿಗೆ ಸ್ಫೋಟಕ ಟ್ವಿಸ್ಟ್​ ಸಿಕ್ಕಿದ್ದು, ಪೊಲೀಸ್ ತನಿಖೆ ವೇಳೆ ಪ್ರಿಯಕರನ ಅಸಲಿ ಕಹಾನಿ ಬೆಳಕಿಗೆ ಬಂದಿದೆ.

ಬಾಯ್​ಫ್ರೆಂಡ್​​ ನೋಡಲು ದುಬೈನಿಂದ ಬೆಂಗಳೂರಿಗೆ ಬಂದಿದ್ದ ಗಗನಸಖಿ ಸಾವಿಗೆ ಸ್ಫೋಟಕ ಟ್ವಿಸ್ಟ್​
ಗಗನಸಖಿ ಅರ್ಚನಾ

Updated on: Mar 14, 2023 | 8:26 AM

ಬೆಂಗಳೂರು: ನಗರದ ಕೋರಮಂಗಲದಲ್ಲಿ ಅಪಾರ್ಟ್ಮೆಂಟ್​ವೊಂದರ ಮೇಲಿಂದ ಬಿದ್ದು ಗಗನಸಖಿ ಅರ್ಚನಾ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಗಗನಸಖಿ ಅರ್ಚನಾ ಆತ್ಮಹತ್ಯೆ ಅಲ್ಲ ಕೊಲೆ ಎನ್ನುವುದು ಪೊಲೀಸರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಅರ್ಚನಾಳನ್ನ ಆಕೆಯ ಬಾಯ್​ ಫ್ರೆಂಡ್ ಆದೇಶ್​ ಬಿಲ್ಡಿಂಗ್ ಮೇಲಿಂದ ತಳ್ಳಿ ಕೊಲೆ ಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಕೋರಮಂಗಲ ಪೊಲೀಸರು. ಅರ್ಚನಾಳ ಪ್ರಿಯಕರ ಆದೇಶ್​ ವಿರುದ್ಧ ಐಪಿಸಿ 302 ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡು ಆತನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಪ್ರಿಯಕರನ ಭೇಟಿಗೆ ದುಬೈನಿಂದ ಬೆಂಗಳೂರಿಗೆ ಬಂದಿದ್ದ ಗಗನಸಖಿ ಅಪಾರ್ಟ್‌ಮೆಂಟ್​ ಮೇಲಿಂದ ಬಿದ್ದು ಸಾವು

ಹಿಮಾಚಲದ ಮೂಲದ ಅರ್ಚನಾ ಹಾಗೂ ಕೇರದ ಮೂಲದ ಆದೇಶ್​ ಡೇಟಿಂಗ್​ ಅ್ಯಪ್​ನಲ್ಲಿ ಪರಿಚಿತರಾಗಿದ್ದು, ಬಳಿಕ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಅರ್ಚನಾ ದುಬೈನ ಲೇರ್​ಲೈನ್ಸ್​​ನಲ್ಲಿ ಗಗನಸಖೆಯಾಗಿದ್ದರೆ, ಆದೇಶ್​ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ. ಹೀಗೆ ಆದೇಶನನ್ನು ನೋಡಲು ಅರ್ಚನಾ ದುಬೈನಿಂದ ಬೆಂಗಳೂರಿಗೆ ಆಗಮಿಸಿದ್ದಳು. ಆದ್ರೆ, ಮಾರ್ಚ್​ 11ರಂದು ಅರ್ಚನಾ ಆದೇಶ ತಂಗಿದ್ದ ಅಪಾರ್ಟ್ಮೆಂಟ್​ ಮೇಲಿಂದ ಬಿದ್ದು ಮೃತಪಟ್ಟಿದ್ದಳು. ಬಳಿಕ ಆದೇಶ್​, ನಶೆಯಲ್ಲಿ ಬಿಲ್ದಿಂಗ್​ ಮೇಲಿಂದ ಬಿದ್ದು ಮೃತಪಟ್ಟಿದ್ದಾಳೆ ಎಂದು ಆಕೆಯ ತಂದೆಗೆ ಕರೆ ಮಾಡಿ ಹೇಳಿದ್ದ. ಅಲ್ಲದೇ ಪೊಲೀಸರಿಗೂ ಇದೇ ಹೇಳಿದ್ದ. ಆದ್ರೆ, ಈ ಸಾವಿನ ಬಗ್ಗೆ ಕುಟುಂಬಸ್ಥರಿಗೆ ಅನುಮಾನ ಬಂದಿದ್ದು, ಇದು ಆಕಸ್ಮಿಕವಾಗಿ ಬಿದ್ದಿರುವುದಲ್ಲ. ಆದೇಶ್​ ಆಕೆಯನ್ನು ಮೇಲೆಂದ ತಳ್ಳಿದ್ದಾನೆ ಎಂದು ದೂರು ನೀಡಿದ್ದರು.

ಅರ್ಚನಾಳನ್ನ ಕೊಲೆ ಮಾಡುವ ಉದ್ದೇಶದಿಂದ ಬಿಲ್ಡಿಂಗ್ ಮೇಲಿಂದ ತಳ್ಳಿದ್ದಾರೆ ಎಂದು ಅರ್ಚನಾಳ ತಂದೆ ದೇವರಾಜ್ ಕೋರಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರು ದಾಖಲಿಸಿಕೊಂಡು ತನಿಖೆ ನಡೆದ ಪೊಲೀಸರಿಗೆ ಮೇಲ್ನೋಟಕ್ಕೆ ಆದೇಶ್​ ಆಕೆಯನ್ನು ತಳ್ಳಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದ್ದು, ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.

ಗಲಾಟೆಯ ಅಸಲಿ ಕಹಾನಿ ಬೆಳಕಿಗೆ

ಆದೇಶ್​ನನ್ನು ಪೊಲೀಸರ ವಶಕ್ಕೆ ಪಡೆದು ವಿಚಾರಣೆ ಮಾಡಿದಗ ಇಬ್ಬರ ನಡುವಿನ ಗಲಾಟೆಯ ಅಸಲಿ ಕಹಾನಿ ಬಯಲಿಗೆ ಬಂದಿದೆ. ಐಲ್ ಎಂಬ ಡೇಟಿಂಗ್ ಆ್ಯಪ್​ ಮೂಲಕ ಪರಿಚಯವಾಗಿದ್ದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಕಳೆದ ಮೂರು ತಿಂಗಳಿಂದ ಮದುವೆಯಾಗುವಂತೆ ಅರ್ಚನಾ ಪೀಡಿಸುತ್ತಿದ್ದಳು. ತನ್ನ ಮನೆಯಲ್ಲಿ ಮದುವೆ ತಯಾರಿ ನಡೆದಿದೆ‌. ಈ ಹಿನ್ನೆಲೆಯಲ್ಲಿ ಇಬ್ಬರ ಮದುವೆ ಬಗ್ಗೆ ಮಾತಾಡುವಂತೆ ಒತ್ತಾಯಿಸುತ್ತಿದ್ದಳು. ಆದ್ರೆ, ಆದೇಶ್​ ಮೂರು ತಿಂಗಳಿಂದ ಹಲವು ಸಬೂಬು ನೀಡಿ ಕಾಲಹರಣ ಮಾಡಿದ್ದ. ಇನ್ನು ಕೆಲ ದಿನಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ಗಗನಸಖಿ ಅರ್ಚನಾ, ಮದುವೆಯಾಗಲು ತೀವ್ರ ಒತ್ತಡ ಹೇರಿದ್ದಳು. ಈ ವಿಚಾರವಾಗಿ ಮಾರ್ಚ್ 11 ರ ರಾತ್ರಿ ಇಬ್ಬರ ನಡುವೆ ಜೋರು ಗಲಾಟೆ ಆಗಿದ್ದು, ಈ ವೇಳೆ ಅರ್ಚನಾ ಮದುವೆಯಾಗದಿದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಳು. ಇದರಿಂದ ಕೋಪಗೊಂಡ ಆದೇಶ್​, ಆಕೆಯನ್ನು ಬಿಲ್ಡಿಂಗ್ ಮೇಲಿಂದ ತಳ್ಳಿದ್ದಾನೆ ಎಂದು ಪೊಲೀಸ್​ ತನಿಖೆ ವೇಳೆ ಬೆಳಕಿಗೆ ಬಂದಿದೆ.

ಇನ್ನಷ್ಟು ಕ್ರೈಂ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Loading...
Unable to load recommendations.
Follow Us