ಬೆಂಗಳೂರು: ವಿದ್ಯಾರ್ಥಿನಿಯೊಂದಿಗೆ ಮಾತನಾಡಿದ್ದಕ್ಕೆ ಸಹಪಾಠಿಗಳಿಂದ ಹಲ್ಲೆ; ದೂರು ದಾಖಲು

10ನೇ ತರಗತಿಯ ವಿದ್ಯಾರ್ಥಿಯೋರ್ವನಿಗೆ ಸಹಪಾಠಿಗಳು ಹಲ್ಲೆ ಮಾಡಿರುವ ಘಟನೆ ಶ್ರೀರಾಂಪುರದ ಖಾಸಗಿ ಶಾಲೆಯಲ್ಲಿ ನಡೆದಿದೆ.

ಬೆಂಗಳೂರು: ವಿದ್ಯಾರ್ಥಿನಿಯೊಂದಿಗೆ ಮಾತನಾಡಿದ್ದಕ್ಕೆ ಸಹಪಾಠಿಗಳಿಂದ ಹಲ್ಲೆ; ದೂರು ದಾಖಲು
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Aug 01, 2023 | 11:21 AM

ಬೆಂಗಳೂರು: 10ನೇ ತರಗತಿಯ (10th Standred) ವಿದ್ಯಾರ್ಥಿಯೋರ್ವನಿಗೆ (Student) ಸಹಪಾಠಿಗಳು ಹಲ್ಲೆ ಮಾಡಿರುವ ಘಟನೆ ಶ್ರೀರಾಂಪುರದ ಖಾಸಗಿ ಶಾಲೆಯಲ್ಲಿ (School) ನಡೆದಿದೆ. ಮಾಗಡಿ ರೋಡ್​ ನಿವಾಸಿ 15 ವರ್ಷದ ಆದರ್ಶ (ಹೆಸರು ಬದಲಾಯಿಸಲಾಗಿದೆ) ಹಲ್ಲೆಗೊಳಗಾದ ವಿದ್ಯಾರ್ಥಿ. ಆದರ್ಶ ಸಹಪಾಠಿ ಹಿಮಾಂಶು (ಹೆಸರು ಬದಲಾಯಿಸಲಾಗಿದೆ) ಮತ್ತು ಇತರರು ಹಲ್ಲೆ ಮಾಡಿದ ಆರೋಪಿಗಳು. ಆದರ್ಶ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡು ಮನೆಗೆ ಬಂದಿದ್ದಾನೆ. ಇದನ್ನು ಕಂಡ ಆದರ್ಶನ ತಾಯಿ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ಜುಲೈ 27 ರಂದು ಮಧ್ಯಾಹ್ನ 3:45 ರ ಸುಮಾರಿಗೆ ಶಾಲೆ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದಾಗ ಘಟನೆ ಸಂಭವಿಸಿದೆ ಎಂದು ಆದರ್ಶ ತಾಯಿ ದೂರಿನಲ್ಲಿ ದಾಖಲಿಸಿದ್ದಾರೆ. ಜು.27 ರಂದು ಆದರ್ಶ ಶಾಲೆಯಲ್ಲಿ ತನ್ನ ಸಹಪಾಠಿ ವಿದ್ಯಾರ್ಥಿನಿಯಿಂದ ನೋಟ್ಸ್​​ ಪಡೆಯಲು ಕೆಲ ನಿಮಿಷಗಳ ಕಾಲ ಆಕೆಯೊಂದಿಗೆ ಮಾತನಾಡಿದ್ದಾನೆ.

ಇದನ್ನು ಆದರ್ಶ ಸಹಪಾಠಿ ಹಿಮಾಂಶು ಗಮನಿಸಿದ್ದಾನೆ. ನಂತರ ದೈಹಿಕ ಶಿಕ್ಷಣ ಅವಧಿಯಲ್ಲಿ ಹಿಮಾಂಶು ಮತ್ತು ಇತರ ಮೂವರು ಸಹಪಾಠಿಗಳು ಸೇರಿ ಈ ವಿಚಾರವಾಗಿ ಆದರ್ಶನೊಂದಿಗೆ​ ಜಗಳವಾಡಿದ್ದಾರೆ. ಇದನ್ನು ಕಂಡ ದೈಹಿಕ ಶಿಕ್ಷಕಿ ಮಧ್ಯೆ ಪ್ರವೇಶಿಸಿ ನಾಲ್ವರಿಗು ಬೈದು ಬುದ್ದಿ ಹೇಳಿ ಕಳುಹಿಸಿದ್ದಾರೆ. ಈ ವೇಳೆ ಹಿಮಾಂಶು ನಿನ್ನನ್ನು ನೋಡಿಕೊಳ್ಳುತ್ತೇನೆ ಎಂದು ಆದರ್ಶನಿಗೆ ಎಚ್ಚರಿಕೆ ನೀಡಿದ್ದಾನೆ.

ಶಾಲೆ ಮುಗಿದ ನಂತರ ಆದರ್ಶ ಮನೆಗೆ ಹೋಗುತ್ತಿರುವಾಗ ಹಿಮಾಂಶು ಮತ್ತು ಇತರ ಮೂವರು ಸಹಪಾಠಿಗಳು ಸೇರಿ ಆತನನ್ನು ಅಡ್ಡಗಟ್ಟಿ ಹಲ್ಲೆ ಮಾಡಿದ್ದಾರೆ. ಮುಖಕ್ಕೆ ಕಾಲಿನಿಂದ ಒದ್ದಿದ್ದಾರೆ. ಕೈಯಿಂದ ಹೊಡೆದಿದ್ದಾರೆ. ಇದರಿಂದ ಆದರ್ಶನ ಹಲ್ಲುಗಳು ಮುರಿದಿವೆ. ಅಲ್ಲದೇ ಆದರ್ಶನ ಕಣ್ಣಿಗೆ ಪೆಟ್ಟಾಗಿದೆ. ಇದರಿಂದ ಕಣ್ಣು ಸರಿಯಾಗಿ ಕಾಣುತ್ತಿಲ್ಲವೆಂದು ಆದರ್ಶನ ತಾಯಿ ದೂರಿನಲ್ಲಿ ದಾಖಲಿಸಿದ್ದಾರೆ.

ಇದನ್ನೂ ಓದಿ: ಇನ್ಶೂರೆನ್ಸ್​​ ಹಣಕ್ಕಾಗಿ ಜ್ಯುವೆಲ್ಲರಿ ಮಾಲೀಕನ ನಾಟಕ; ವಿಚಾರಣೆ ವೇಳೆ ಹೊರಬಂತು ಅಸಲಿ ಕಹಾನಿ

ಈ ಬಗ್ಗೆ ಆದರ್ಶ ತಾಯಿ ಮಾಡಿ ಹಿಮಾಂಶು ನನ್ನ ಮಗನನ್ನು ತಪ್ಪಾಗಿ ಅರ್ಥಮಾಡಿಕೊಂಡಿದ್ದಾನೆ. ಅವನನ್ನು ಕೆಟ್ಟದಾಗಿ ಥಳಿಸಿದ್ದಾನೆ. ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಆತನಿಗೆ ಸುಮಾರು ಒಂದು ತಿಂಗಳ ಕಾಲ ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದಾರೆ. ವೈದ್ಯರ ಪ್ರಕಾರ ಆದರ್ಶನ ಕಣ್ಣಿಗೆ ಹಾನಿಯಾಗಿದೆ. ಇದು ಸಾಮಾನ್ಯ ಹಲ್ಲೆ ಅಲ್ಲ, ಆದ್ದರಿಂದ ನಾನು ದೂರು ನೀಡಿದ್ದೇನೆ. ಶಾಲಾ ಆಡಳಿತವು ನಮ್ಮ ಸಂಪರ್ಕದಲ್ಲಿದ್ದಾರೆ. ಆಡಳಿತ ಮಂಡಳಿ ನಾಲ್ವರು ಹುಡುಗರ ಪೋಷಕರನ್ನು ಕರೆಸಿ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿ “ನಾವು ನಾಲ್ವರು ಬಾಲಕರ ವಿರುದ್ಧ ಬಾಲಾಪರಾಧ ನ್ಯಾಯ ಕಾಯ್ದೆ ಅಡಿ ಪ್ರಕರಣವನ್ನು ದಾಖಲಿಸಿದ್ದೇವೆ ಎಂದು ಹೇಳಿದರು.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:21 am, Tue, 1 August 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ