Bengaluru News: ಸ್ನೇಹಿತನ ಜತೆ ಸೇರಿ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿದ ಪ್ರಿಯಕರ

ಮೊಬೈಲ್ ಕೊಡುವುದಾಗಿ ಪ್ರೇಯಸಿಯನ್ನು ಪುಸಲಾಯಿಸಿ ರೂಮ್​ಗೆ ಕರೆದುಕೊಂಡು ಹೋದ ಪ್ರಿಯಕರ ತನ್ನ ಸ್ನೇಹಿತನೊಂದಿಗೆ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ.

Bengaluru News: ಸ್ನೇಹಿತನ ಜತೆ ಸೇರಿ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿದ ಪ್ರಿಯಕರ
ಸಾಂದರ್ಭಿಕ ಚಿತ್ರ
Follow us
ರಮೇಶ್ ಬಿ. ಜವಳಗೇರಾ
|

Updated on: Jun 08, 2023 | 3:04 PM

ಬೆಂಗಳೂರು: ಯುವತಿ ಮೇಲೆ ಸ್ನೇಹಿತರಿಂದ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ. ಯುವತಿ ಮೇಲೆ ಆಕೆಯ ಪ್ರಿಯಕರ ಹಾಗೂ ಆತನ ಸ್ನೇಹಿತ ಸೇರಿಕೊಂಡು ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆ ಜೂನ್ 6ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಗಿರಿನಗರ ಪೊಲೀಸರು ಸದ್ಯ ಪುರುಷೋತ್ತಮ್ ಹಾಗು ಚೇತನ್ ಎನ್ನುವ ಆರೋಪಿಗಳನ್ನು ಬಂಧಿಸಿದ್ದಾರೆ. ಮೊಬೈಲ್ ಕೊಡುತ್ತೇನೆಂದು ಪುರುಷೋತ್ತಮ್ , ತನ್ನ ಪ್ರೇಯಸಿಯನ್ನು ಪುಸಲಾಯಿಸಿ ರೂಮ್​ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ.

ಪುರುಷೋತ್ತಮ್ ಹಾಗೂ ಯುವತಿ ಮೂಲತಃ ಇಬ್ಬರೂ ತುಮಕೂರು ಜಿಲ್ಲೆ ಕೊರಟಗೆರೆ ಮೂಲದವರಾಗಿದ್ದು, ಕಳೆದ 1 ವರ್ಷದಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಕಳೆದ ವಾರ ಅಷ್ಟೇ ಪುರುಷೋತ್ತಮ್ ಪ್ರೇಯಸಿಯನ್ನು ಭೇಟಿಯಾಗಿ ಮೊಬೈಲ್​ ಪಡೆದುಕೊಂಡಿದ್ದ. ಬಳಿಕ 2 ದಿನಗಳ ಹಿಂದೆ ಯುವತಿ ಪುರುಷೋತ್ತಮ್ ಗೆ ಕರೆ ಮಾಡಿ ಮೊಬೈಲ್​ ಕೇಳಿದ್ದಳು. ಸರಿ ಮೆಜೆಸ್ಟಿಕ್​ಗೆ ಬಾ ಮೊಬೈಲ್ ಕೊಡುತ್ತೇನೆ ಎಂದಿದ್ದ. ಅದರಂತೆ ಯುವತಿ ಜೂನ್ 6ರಂದು ಬೆಂಗಳೂರಿನ ಮೆಜೆಸ್ಟಿಕ್​ಗೆ ಬಂದಿದ್ದಳು. ನಂತರ ಗಿರಿನಗರದ ಈರಣ್ಣಗುಡ್ಡೆಯ ಸ್ನೇಹಿತನ ರೂಮ್​ಗೆ ಕರೆದೊಯ್ದಿದ್ದ. ಈ ವೇಳೆ ನನ್ನ ಮೊಬೈಲ್ ಕೊಡು ಊರಿಗೆ ಹೋಗಬೇಕೆಂದು ಯುವತಿ ಹೇಳಿದ್ದಾಳೆ. ಆದ್ರೆ, ಪುರುಷೋತ್ತಮ್ ಮೊಬೈಲ್ ನೀಡದೆ ಸತಾಯಿಸಿ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ನಂತರ ರೂಮ್​ಗೆ ಬಂದಿದ್ದ ಸ್ನೇಹಿತ ಚೇತನ್​ ಸಹ ಯುವತಿ ಮೇಲೆ ಅತ್ಯಾಚಾರವೆಸಗಲು ಯತ್ನಿಸಿದ್ದಾನೆ. ಯುವತಿ ಚೀರಾಟ ಕೇಳಿ ಅಕಪಕ್ಕದ ಮನೆಯುವರು ಜಮಾವಣೆಗೊಂಡು ಗಿರಿನಗರ ಠಾಣೆ ಪೊಲೀಸರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ಯುವತಿಯನ್ನು ರಕ್ಷಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಗಿರಿನಗರ ಪೊಲೀಸರು ತನಿಖೆ ನಡೆಸಿದ್ದಾರೆ.

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!