Breaking: ಮಹಿಳೆಯನ್ನು ಅಪಹರಿಸಿ, 2 ದಿನಗಳ ಕಾಲ ಚಿತ್ರಹಿಂಸೆ ನೀಡಿ ಅತ್ಯಾಚಾರ ಮಾಡಿದ ನಾಲ್ವರು ಆರೋಪಿಗಳ ಬಂಧನ

ಗಾಜಿಯಾಬಾದ್‌ನಲ್ಲಿ ಮಹಿಳೆಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಮಾಡಿ, 2 ದಿನಗಳ ಕಾಲ ಚಿತ್ರಹಿಂಸೆ ನೀಡಿರುವ ಘಟನೆ ಬೆಳಕಿಗೆ ಬಂದಿದೆ.

Breaking: ಮಹಿಳೆಯನ್ನು ಅಪಹರಿಸಿ, 2 ದಿನಗಳ ಕಾಲ ಚಿತ್ರಹಿಂಸೆ ನೀಡಿ ಅತ್ಯಾಚಾರ ಮಾಡಿದ ನಾಲ್ವರು ಆರೋಪಿಗಳ ಬಂಧನ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Oct 19, 2022 | 11:45 AM

ಉತ್ತರ ಪ್ರದೇಶ: ಗಾಜಿಯಾಬಾದ್‌ನಲ್ಲಿ (Ghaziabad) ಮಹಿಳೆಯನ್ನು ಐವರು ವ್ಯಕ್ತಿಗಳು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಮಾಡಿ, 2 ದಿನಗಳ ಕಾಲ ಚಿತ್ರಹಿಂಸೆ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಇದೀಗ 4 ಆರೋಪಿಗಳ ಬಂಧನ ಮಾಡಲಾಗಿದೆ. ಮಹಿಳೆಯನ್ನು ಅಪಹರಿಸಿ, ಆಕೆ 4 ದಿನಗಳ ಚಿತ್ರಹಿಂಸೆ ನೀಡಿ. ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿಯ 40 ವರ್ಷದ ಮಹಿಳೆಯ ಮೇಲೆ ಗಾಜಿಯಾಬಾದ್‌ನಲ್ಲಿ ಐವರು ವ್ಯಕ್ತಿಗಳು ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಲ್ವರನ್ನು ಬಂಧಿಸಿದ್ದಾರೆ. ಗಾಜಿಯಾಬಾದ್‌ನ ಆಶ್ರಮ ರಸ್ತೆಯ ಬಳಿ ಮಹಿಳೆಯೊಬ್ಬರು ಬಿದ್ದಿರುವ ಮಾಹಿತಿ ಪೊಲೀಸರಿಗೆ ಲಭಿಸಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ನಂತರ ಪೊಲೀಸರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಆಸ್ಪತ್ರೆಯಲ್ಲಿ ಆಕೆಯಿಂದ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಗಾಜಿಯಾಬಾದ್​ನಲ್ಲಿ ದೆಹಲಿಯ ಮಹಿಳೆಯನ್ನು 5 ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಕ್ಟೋಬರ್ 18ರಂದು ಆಶ್ರಮ ರಸ್ತೆಯ ಬಳಿ ಮಹಿಳೆಯೊಬ್ಬರು ಮಲಗಿರುವ ಬಗ್ಗೆ ನಂದಗ್ರಾಮ್ ಪೋಲೀಸರಿಗೆ ಮಾಹಿತಿ ಸಿಕ್ಕಿತು. ಪೊಲೀಸರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರು. ಆಕೆ ದೆಹಲಿಯ ನಿವಾಸಿಯಾಗಿದ್ದು, ನಂದಗ್ರಾಮ್​ನಲ್ಲಿರುವ ತನ್ನ ಸಹೋದರನ ನಿವಾಸಕ್ಕೆ ಬಂದಿದ್ದರು ಎನ್ನಲಾಗಿದೆ.

ತನ್ನ ಮೇಲೆ ಅತ್ಯಾಚಾರ ಎಸಗಿದ ಐವರು ಪುರುಷರ ಬಗ್ಗೆಯೂ ಆ ಮಹಿಳೆಗೆ ತಿಳಿದಿದೆ ಎಂದು ಅವರು ಹೇಳಿಕೆ ನೀಡಿದ್ದಾರೆ. ಆ ಮಹಿಳೆಯ ಸಹೋದರ ಆಕೆಯನ್ನು ಗಾಜಿಯಾಬಾದ್‌ನ ಬಸ್ ನಿಲ್ದಾಣದಲ್ಲಿ ಬಿಟ್ಟು ಮನೆಗೆ ಹೋದ ನಂತರ ಈ ಘಟನೆ ಸಂಭವಿಸಿದೆ. ನಂತರ ಐವರು ಆಕೆಯನ್ನು ಅಪಹರಿಸಿ ತಮ್ಮ ವಾಹನದಲ್ಲೇ ಅತ್ಯಾಚಾರ ಎಸಗಿದ್ದಾರೆ. ನಂದಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಸಂಪೂರ್ಣ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:09 am, Wed, 19 October 22

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ