ಬಾವಿಗೆ ಜಿಗಿದ ತಂಗಿ ಕಾಪಾಡಲು ತಾನೂ ಬಾವಿಗೆ ಹಾರಿದ; ಅಣ್ಣ-ತಂಗಿ ಶವ ಕಂಡ ಪೋಷಕರ ಆಕ್ರಂದನ

| Updated By: ಆಯೇಷಾ ಬಾನು

Updated on: Jan 30, 2024 | 10:16 AM

ನಂದಿನಿ ಕಾಲೇಜಿಗೆ ಹೋಗಲಿಲ್ಲ ಎಂದು ಕೋಪಗೊಂಡಿದ್ದ ಸಂದೀಪ್ ಕಾಲೇಜಿಗೆ ಹೋಗು ಎಂದು ಬೈದು ಬುದ್ದಿ ಹೇಳಿದ್ದ. ಅಣ್ಣ ಬೈದ ಎಂದು ಕೋಪಗೊಂಡ ತಂಗಿ ಬಾವಿಗೆ ಹಾರಿದ್ದಾಳೆ. ತಂಗಿ ಕಾಪಾಡಲು ಅಣ್ಣ ಕೂಡ ಬಾವಿಗೆ ಜಿಗಿದಿದ್ದು ಇಬ್ಬರೂ ನೀರು ಪಾಲಾಗಿದ್ದಾರೆ. ಬಾವಿಯಲ್ಲಿ ಅಣ್ಣ-ತಂಗಿಯ ಶವ ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಬಾವಿಗೆ ಜಿಗಿದ ತಂಗಿ ಕಾಪಾಡಲು ತಾನೂ ಬಾವಿಗೆ ಹಾರಿದ; ಅಣ್ಣ-ತಂಗಿ ಶವ ಕಂಡ ಪೋಷಕರ ಆಕ್ರಂದನ
ಬಾವಿಯಿಂದ ಅಣ್ಣ-ತಂಗಿಯ ಶವ ಎತ್ತಿದ ಸ್ಥಳೀಯರು
Follow us on

ಕಲಬುರಗಿ, ಜ.30: ಕಾಲೇಜಿಗೆ ಹೋಗು ಎಂದು ಅಣ್ಣ ಬೈದು ಬುದ್ದಿ ಹೇಳಿದ್ದಕ್ಕೆ ಮನ ನೊಂದ ತಂಗಿ ಓಡಿ ಹೋಗಿ ಬಾವಿಗೆ ಜಿಗಿದಿದ್ದು ತಂಗಿ ಕಾಪಾಡಲು ಅಣ್ಣ ಕೂಡ ಬಾವಿಗೆ ಹಾರಿ ಪ್ರಾಣ (Death) ಕಳೆದುಕೊಂಡ ಅಮಾನವೀಯ ಘಟನೆ ಕಲಬುರಗಿಯಲ್ಲಿ ನಡೆದಿದೆ. ಜಿಲ್ಲೆಯ ಚಿಂಚೋಳಿ ತಾಲೂಕಿನ ಪಟಪಳ್ಳಿ ಗ್ರಾಮದಲ್ಲಿ ಬಾವಿಗೆ ಬಿದ್ದು ಅಣ್ಣ, ತಂಗಿ ಇಬ್ಬರೂ ಮೃತಪಟ್ಟಿದ್ದಾರೆ. ತಂಗಿ ನಂದಿನಿ(18), ಅಣ್ಣ ಸಂದೀಪ್(21) ಮೃತ ದುರ್ದೈವಿಗಳು. ​​

ನಂದಿನಿ ಕಾಲೇಜಿಗೆ ಹೋಗಲಿಲ್ಲ ಎಂದು ಕೋಪಗೊಂಡಿದ್ದ ಸಂದೀಪ್ ಕಾಲೇಜಿಗೆ ಹೋಗು ಎಂದು ಬೈದು ಬುದ್ದಿ ಹೇಳಿದ್ದ. ಇಷ್ಟಕ್ಕೇ ನೊಂದಿಕೊಂಡ ನಂದಿನಿ ಮನೆ ಬಳಿಯಿದ್ದ ಬಾವಿಗೆ ಹಾರಿದ್ದಾಳೆ. ತಂಗಿ ಬಾವಿಗೆ ಜಿಗಿದಿದ್ದು ತಿಳಿಯುತ್ತಿದ್ದಂತೆ ತಂಗಿ ಕಾಪಾಡಲು ಸಂದೀಪ್ ಕೂಡ ಬಾವಿಗೆ ಹಾರಿದ್ದಾನೆ. ಈ ವೇಳೆ ಇಬ್ಬರೂ ನೀರಿನಲ್ಲಿ ಮುಳುಗಿ ಪ್ರಾಣಬಿಟ್ಟಿದ್ದಾರೆ. ಬಾವಿಯ ದಡದಲ್ಲಿ ನಂದಿನಿ ತಲೆಗೆ ಹೂವಿನ ಗೊಂಚಲು ಮುಡಿದುಕೊಂಡdನ್ನು ಗಮನಿಸಿದ ಹೆತ್ತವರು ಅನುಮಾನಗೊಂಡು ಕಾರ್ಯಾಚರಣೆ ನಡೆಸಿದ ನಂತರ ಬಾವಿಯಲ್ಲಿ ಅಣ್ಣ ತಂಗಿಯ ಶವ ಪತ್ತೆಯಾಗಿದೆ. ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು ವಿವಿ ಹಾಸ್ಟೆಲ್ ಊಟದಲ್ಲಿ ಮತ್ತೆ ಹುಳಗಳು ಪತ್ತೆ; ಕವನ ಬರೆದ ವಿದ್ಯಾರ್ಥಿಗಳು

ಕತ್ತು ಕೊಯ್ದು ಪ್ರಿಯತಮೆ ಹತ್ಯೆಗೆ ಯತ್ನಿಸಿದ ಪ್ರಿಯಕರ

ಚಿತ್ರದುರ್ಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ಕತ್ತು ಕೊಯ್ದು ಪ್ರಿಯತಮೆ ಹತ್ಯೆಗೆ ಪ್ರಿಯಕರ ಯತ್ನಿಸಿದ ಘಟನೆ ನಡೆದಿದೆ. ಪ್ರಿಯತಮೆ ಸಮೀನಾ(25) ಕತ್ತು ಕೊಯ್ದು ದಾದಾಪೀರ್ ಪರಾರಿಯಾಗಿದ್ದಾನೆ. ಸಮೀನಾಳನ್ನ ದಾವಣಗೆರೆಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿ ದಾದಾಪೀರ್ ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಸುಲ್ತಾನಪುರದಲ್ಲಿ ವಾಸವಾಗಿದ್ದ ದಾದಾಪೀರ್-ಸಮೀನಾ ಇಬ್ಬರ ನಡುವೆ ಕಳೆದ ಒಂದು ತಿಂಗಳಿಂದ ಆಗಾಗ ಗಲಾಟೆ ನಡೆಯುತ್ತಿತ್ತು. ನಿನ್ನೆ ರಾತ್ರಿ ಕೂಡ ಗಲಾಟೆ ನಡೆದಿದ್ದು ಸಮೀ‌ನಾಳ ಕತ್ತು ಕೊಯ್ದು ಹತ್ಯೆಗೆ ದಾದಾಪೀರ್ ಯತ್ನಿಸಿದ್ದಾನೆ. ಕತ್ತು ಕೊಯ್ದು ಪರಾರಿಯಾಗಿದ್ದಾನೆ. ಸ್ಥಳೀಯರು ಸಮೀ‌ನಾಳನ್ನು ದಾವಣಗೆರೆಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಸಮೀನಾ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:12 am, Tue, 30 January 24