ಮುತ್ತು ಮಾರಿಯಮ್ಮ ದೇವಸ್ಥಾನದ ಬಳಿ ಕತ್ತು ಕೊಯ್ದು ಮಹಿಳೆ ಬರ್ಬರ ಕೊಲೆ..

ಬೆಂಗಳೂರು: ಕತ್ತು ಕೊಯ್ದು ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಮಮೂರ್ತಿನಗರದ ಮುತ್ತು ಮಾರಿಯಮ್ಮ ದೇವಸ್ಥಾನದ ಬಳಿ ನಡೆದಿದೆ. ಲಾವಣ್ಯ(37) ಹತ್ಯೆಯಾದ ಮಹಿಳೆ. ಕೊಲೆಯಾದ ಲಾವಣ್ಯಳ ಗಂಡ ವಾಸುವಿಗೆ ತಂಗಿಯ ಗಂಡನಾಗಿದ್ದ ವಿಜಯ್ ಕುಮಾರ್‌ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ. ಘಟನೆ ಸಂಬಂಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಏರಿಯಾದ ಜನರಲ್ಲಿ ಆತಂಕ ಮನೆ ಮಾಡಿದೆ. ಕೊಲೆಗೆ ಕಾರಣ: ಆರೋಪಿ ವಿಜಯ್ ಕುಮಾರ್ ತನ್ನ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಹೀಗಾಗಿ ಬಸವನಗುಡಿ ಮಹಿಳಾ […]

ಮುತ್ತು ಮಾರಿಯಮ್ಮ ದೇವಸ್ಥಾನದ ಬಳಿ ಕತ್ತು ಕೊಯ್ದು ಮಹಿಳೆ ಬರ್ಬರ ಕೊಲೆ..
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Nov 17, 2020 | 2:36 PM

ಬೆಂಗಳೂರು: ಕತ್ತು ಕೊಯ್ದು ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಮಮೂರ್ತಿನಗರದ ಮುತ್ತು ಮಾರಿಯಮ್ಮ ದೇವಸ್ಥಾನದ ಬಳಿ ನಡೆದಿದೆ. ಲಾವಣ್ಯ(37) ಹತ್ಯೆಯಾದ ಮಹಿಳೆ.

ಕೊಲೆಯಾದ ಲಾವಣ್ಯಳ ಗಂಡ ವಾಸುವಿಗೆ ತಂಗಿಯ ಗಂಡನಾಗಿದ್ದ ವಿಜಯ್ ಕುಮಾರ್‌ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ. ಘಟನೆ ಸಂಬಂಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಏರಿಯಾದ ಜನರಲ್ಲಿ ಆತಂಕ ಮನೆ ಮಾಡಿದೆ.

ಕೊಲೆಗೆ ಕಾರಣ: ಆರೋಪಿ ವಿಜಯ್ ಕುಮಾರ್ ತನ್ನ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಹೀಗಾಗಿ ಬಸವನಗುಡಿ ಮಹಿಳಾ ಠಾಣೆಯಲ್ಲಿ‌ ವಿಜಯ್ ಕುಮಾರ್ ವಿರುದ್ಧ ದೂರು ದಾಖಲಾಗಿತ್ತು. ರಾಜಿ ಮಾಡಿಕೊಳ್ಳಲು ಲಾವಣ್ಯ ಹಾಗೂ ಆಕೆಯ ಪತಿ ವಾಸುಗೆ ಆರೋಪಿ ವಿಜಯ್ ಪೀಡಿಸುತ್ತಿದ್ದ. ಈ ಬಗ್ಗೆ ಮಾತನಾಡಲು ಇಂದು ಲಾವಣ್ಯ ಮನೆಗೆ ಬಂದಿದ್ದಾನೆ. ಈ ವೇಳೆ ಲಾವಣ್ಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಬಳಿಕ ತಾನು ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. ಸದ್ಯ ಆರೋಪಿ ವಿಜಯ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಲಾವಣ್ಯ ಮೃತಪಟ್ಟಿದ್ದಾರೆ.

Published On - 3:29 pm, Sun, 15 November 20

ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು