ಆನೇಕಲ್: ಶಾಲೆಗೆ ರಜೆ ಎಂದು ಮನೆಗೆ ಬಂದಿದ್ದ ಬಾಲಕ ಸ್ವಂತ ಅಣ್ಣನ ಕೈಯಿಂದಲೇ ಕೊಲೆ

| Updated By: ಆಯೇಷಾ ಬಾನು

Updated on: May 18, 2024 | 9:21 AM

ಆಂಧ್ರದ ಕರ್ನೂಲ್​ನಲ್ಲಿ ಅಜ್ಜಿ ಮನೆಯಲ್ಲೇ ಇದ್ದುಕೊಂಡು ಸರ್ಕಾರಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದ ಪ್ರಾಣೇಶ್, ಶಾಲೆಗೆ ಬೇಸಿಗೆ ರಜೆ ಹಿನ್ನೆಲೆ ತಂದೆ ತಾಯಿ ಇದ್ದ ನೆರಿಗಾ ಗ್ರಾಮಕ್ಕೆ ಬಂದಿದ್ದ. ಪದೇ ಪದೇ ತಮ್ಮ ಮೊಬೈಲ್ ತೆಗೆದುಕೊಂಡು ಗೇಮ್ ಆಡ್ತಾನೆ ಕೊಡಲ್ಲ ಎಂಬ ಕಾರಣಕ್ಕೆ ಅಣ್ಣ-ತಮ್ಮನ ನಡುವೆ ಜಗಳ ಆಗುತ್ತಿತ್ತು, ಆದರೆ ಮೇ.15ರಂದು ಕೋಪ ದ್ವೇಶಕ್ಕೆ ತಿರುಗಿ ಸ್ವಂತ ಅಣ್ಣನೇ ತಮ್ಮನ ಕೊಲೆ ಮಾಡಿದ್ದಾನೆ.

ಆನೇಕಲ್: ಶಾಲೆಗೆ ರಜೆ ಎಂದು ಮನೆಗೆ ಬಂದಿದ್ದ ಬಾಲಕ ಸ್ವಂತ ಅಣ್ಣನ ಕೈಯಿಂದಲೇ ಕೊಲೆ
ತಮ್ಮನ ಕೊಲೆ ಮಾಡಲು ಸುತ್ತಿಗೆ ಜೇಬಲ್ಲಿ ಇಟ್ಟುಕೊಳ್ಳುತ್ತಿರುವ ಅಣ್ಣ
Follow us on

ಆನೇಕಲ್, ಮೇ.18: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ನೆರಿಗಾ ಗ್ರಾಮದಲ್ಲಿ ಬಾಲಕನನ್ನು ಕೊಲೆ (Murder) ಮಾಡಲಾಗಿತ್ತು. ಬಹಿರ್ದೆಸೆಗೆ ತೆರಳಿದ್ದ ಬಾಲಕ ಪ್ರಾಣೇಶ್(15) ಶವವಾಗಿ ಪತ್ತೆಯಾಗಿದ್ದ. ಸದ್ಯ ಈ ಘಟನೆಗೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಮೊಬೈಲ್ ಚಟಕ್ಕೆ ಬಿದ್ದು ಸ್ವಂತ ತಮ್ಮನನ್ನೇ ಕೊಲೆಗೈದಿದ್ದ ಅಣ್ಣನನ್ನು ಪೊಲೀಸರು ಬಂಧಿಸಿದ್ದಾರೆ. 15 ವರ್ಷದ ಪ್ರಾಣೇಶ್​ನನ್ನು ಕೊಲೆಗೈದಿದ್ದ 18 ವರ್ಷದ ಅಣ್ಣ ಶಿವಕುಮಾರ್ ಅರೆಸ್ಟ್ ಆಗಿದ್ದಾನೆ.

ಆಂಧ್ರದ ಕರ್ನೂಲ್​ನಲ್ಲಿ ಅಜ್ಜಿ ಮನೆಯಲ್ಲೇ ಇದ್ದುಕೊಂಡು ಸರ್ಕಾರಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದ ಪ್ರಾಣೇಶ್, ಶಾಲೆಗೆ ಬೇಸಿಗೆ ರಜೆ ಹಿನ್ನೆಲೆ ತಂದೆ ತಾಯಿ ಇದ್ದ ನೆರಿಗಾ ಗ್ರಾಮಕ್ಕೆ ಬಂದಿದ್ದ. ಸಮಯ ಸಿಕ್ಕಾಗಲೆಲ್ಲ ಅಣ್ಣ ಶಿವಕುಮಾರ್​ನ ಮೊಬೈಲ್​ ತೆಗೆದುಕೊಂಡು ಆಟ ಆಡ್ತಿದ್ದ. ಇದು ಶಿವಕುಮಾರ್​ಗೆ ಕೋಪ ತರಿಸಿತ್ತು. ಹೀಗಾಗಿ ಮೇ 15ರಂದು ತಮ್ಮ ಬಹಿರ್ದೆಸೆಗೆ ಹೋದಾಗ ಅವನನ್ನು ಹಿಂಬಾಲಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಪ್ರಾಣೇಶ್​ನ ತಲೆ, ಹೊಟ್ಟೆ ಭಾಗಕ್ಕೆ ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ ಮನೆಗೆ ಬಂದು ತನಗೆ ಏನು ಗೊತ್ತಿಲ್ಲ, ತಾನು ಅಮಾಯಕನಂತೆ ಸುಮ್ಮನಾಗಿದ್ದಾನೆ.

ತಂದೆ ತಾಯಿ ಕೆಲಸ ಮುಗಿಸಿ ಸಂಜೆ ಮನೆಗೆ ಬಂದಾಗ ಚಿಕ್ಕ ಮಗನಿಗಾಗಿ ಎಲ್ಲೆಡೆ ಹುಡುಕಾಡಿದ್ದಾರೆ. ಈ ವೇಳೆ ತಮ್ಮನ ಶವ ಬಿದ್ದಿದೆ ಎಂದು ಓಡೋಡಿ ಬಂದು ಶಿವಕುಮಾರ ಪೋಷಕರಿಗೆ ಕೊಲೆಯಾಗಿದೆ ಎಂದು ತಿಳಿಸಿದ್ದಾನೆ. ಚಿಕ್ಕ ಮಗನನ್ನು ಕಳೆದುಕೊಂಡ ಪೋಷಕರು ಕಣ್ಣೀರಿಡುತ್ತಲೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸದ್ಯ ಈಗ ಪೊಲೀಸರ ತನಿಖೆ ವೇಳೆ ಆರೋಪಿ ಯಾರೆಂದು ಪತ್ತೆಯಾಗಿದ್ದು ಪೋಷಕರಿಗೆ ಶಾಕ್ ಆಗಿದೆ. ತಮ್ಮನ ಶವವನ್ನ ನಾನೇ ಮೊದಲು ನೋಡಿದ್ದೆ ಎಂದು ಹೇಳುತ್ತಿದ್ದ ಶಿವಕುಮಾರನ ಮೇಲೆ ಪೊಲೀಸರಿಗೆ ಅನುಮಾನ ಬಂದಿದ್ದು ಠಾಣೆಗೆ ಕರೆದು ಕೊಂಡು ಹೋಗಿ ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ.

ಇದನ್ನೂ ಓದಿ: ಸರ್ಕಾರ ಸತ್ತಿದೆಯೋ ಬದುಕಿದೆಯೋ? ನೇಹಾ, ಅಂಜಲಿಗೆ ಕೊಲೆಗೆ ಸರ್ಕಾರವೇ ನೇರ ಹೊಣೆ: ಬಿಜೆಪಿ ಎಂಎಲ್​ಸಿ ರವಿಕುಮಾರ್ ವಾಗ್ದಾಳಿ

ಆರೋಪಿ ಶಿವಕುಮಾರ್ ತಮ್ಮನನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿ ತನಗೆ ಏನೂ ತಿಳಿಯದಂತೆ ಓಡಾಡಿಕೊಂಡಿದ್ದ. ಅಲ್ಲದೆ ಪೊಲೀಸರ ತನಿಖೆಯ ಹಾದಿ ತಪ್ಪಿಸಲು ಮುಂದಾಗಿದ್ದ. ಸದ್ಯ ಕೊಲೆಗೆ ಬಳಸಲಾದ ಸುತ್ತಿಗೆ ಜೇಬಿನಲ್ಲಿ ಇಟ್ಟುಕೊಳ್ಳುತ್ತಿರುವ ದೃಶ್ಯ CCTVಯಲ್ಲಿ ಸೆರೆಯಾಗಿದ್ದು ಕೊಲೆಯ ಹಿಂದಿನ ರಹಸ್ಯ ಬಯಲಾಗಿದೆ.

ಮೂಲತಃ ಆಂಧ್ರ ಮೂಲದ ಸೂಳೆಕೆರಿ ಗ್ರಾಮದ ಚನ್ನಮ್ಮ ಮತ್ತು ಬಸವರಾಜ್ ಎಂಬ ಕೂಲಿಕಾರ್ಮಿಕ ದಂಪತಿಯ ಇಬ್ಬರು ಪುತ್ರರಲ್ಲಿ ಓರ್ವ ಕೊಲೆಯಾಗಿದ್ದು ಮತ್ತೋರ್ವ ಜೈಲು ಸೇರಿದ್ದಾನೆ. ಈ ದಂಪತಿ 3 ತಿಂಗಳ ಹಿಂದೆ ಗಾರೇ ಕೆಲಸಕ್ಕೆಂದು ಆಂಧ್ರದಿಂದ ನೆರಿಗಾ ಗ್ರಾಮಕ್ಕೆ ಬಂದು ನೆಲೆಸಿದ್ರು. ತಮ್ಮ ದೊಡ್ಡ ಮಗನಿಗೆ ವಿಧ್ಯೆ ಹತ್ತಲಿಲ್ಲ ಎಂದು ತಮ್ಮೊಂದಿಗೆ ಕರೆದುಕೊಂಡು ಬಂದು ಗಾರೇ ಕೆಲಸಕ್ಕೆ ಹಾಕಿದ್ದರು. ಚಿಕ್ಕ ಮಗನಿಗೆ ಓದಿನಲ್ಲಿ ಆಸಕ್ತಿ ಇದ್ದ ಕಾರಣ ಅಜ್ಜಿ ಮನೆಯಲ್ಲೇ ಬಿಟ್ಟು ಓದಿಸುತ್ತಿದ್ದರು. ಶಾಲೆ ರಜೆ ಇದೆ ಎಂದು ತಂದೆ-ತಾಐಇ ಮನೆಗೆ ಬಂದ ಪ್ರಾಣೇಶ್ ಸ್ವಂತ ಅಣ್ಣನಿಂದಲೇ ಪ್ರಾಣ ಕಳೆದುಕೊಂಡಿದ್ದಾನೆ.

ಸುತ್ತಿಗೆ ತಂದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಆರೋಪಿ ಶಿವಕುಮಾರ್, ನಿರ್ಮಾಣ ಹಂತದ ಕಟ್ಟಡದಿಂದ ಸುತ್ತಿಗೆ ತಂದಿದ್ದ. ಸುತ್ತಿಗೆಯನ್ನ ಜೇಬಿನಲ್ಲಿ ಇಟ್ಟುಕೊಳ್ಳುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪೋಲೀಸರ ತನಿಖೆಯಿಂದ ಆರೋಪಿ ಕೊಲೆ ರಹಸ್ಯ ಬಯಲಾಗಿದೆ. ಇದ್ದ ಇಬ್ಬರು ಮಕ್ಕಳನ್ನ ಕಳೆದುಕೊಂಡು ತಂದೆ ತಾಯಿ ಅನಾಥರಾಗಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ