AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಹತ್ಯೆ

ತಡರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಕಲ್ಲು ಎತ್ತಿಹಾಕಿ ವ್ಯಕ್ತಿಯೊರ್ವನನ್ನ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ ತಲಘಟ್ಟಪುರ ನೆಟ್ಟಿಗೆರೆಪಾಳ್ಯ ಬಳಿ ನಡೆದಿದೆ.

Bengaluru News: ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಹತ್ಯೆ
ಸಾಂದರ್ಭಿಕ ಚಿತ್ರ
Follow us
Prajwal Kumar NY
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 29, 2023 | 8:51 AM

ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ಕೊಲೆಗಳ ಸಂಖ್ಯೆ ಹೆಚ್ಚುತ್ತಿದ್ದು, ಅದರಂತೆ ಇದೀಗ ತಡರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಕಲ್ಲು ಎತ್ತಿಹಾಕಿ ವ್ಯಕ್ತಿಯೊರ್ವನನ್ನ ಬರ್ಬರವಾಗಿ ಕೊಲೆ(Murder) ಮಾಡಿದ ಘಟನೆ ನಗರದ ತಲಘಟ್ಟಪುರ ನೆಟ್ಟಿಗೆರೆಪಾಳ್ಯ ಬಳಿ ನಡೆದಿದೆ. ಈ ಕುರಿತು ಸ್ಥಳೀಯರು ಬೆಳಗ್ಗೆ ತಲಘಟ್ಟಪುರ(Talaghattapura)ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಅಪರಿಚಿತ ವ್ಯಕ್ತಿಯ ಕೊಲೆ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ಮೃತ ವ್ಯಕ್ತಿಯ ಗುರುತು ಪತ್ತೆ ಹಚ್ಚುತ್ತಿದ್ದಾರೆ.

ಗೋಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಚಿಕ್ಕಮಗಳೂರು: ಆಟೋದಲ್ಲಿ‌ ಗೋಮಾಂಸ ಮಾರಾಟ ಮಾಡುತ್ತಿದ್ದ ವೇಳೆ ಭಜರಂಗದಳ ಕಾರ್ಯಕರ್ತರು ದಾಳಿ ಮಾಡಿ, ಇಬ್ಬರನ್ನು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮೂಡಿಗೆರೆ ತಾಲೂಕಿನ ಬೀಜುವಳ್ಳಿ ಗ್ರಾಮದ ಬಳಿ ನಡೆದಿದೆ. ಹಾಸನ ಮೂಲದ ಜಾಫರ್ ಉಮರ್, ಮೊಹಮ್ಮದ್ ‌ಮೊಹಲ್ಲಾ ಬಂಧಿತ ಆರೋಪಿಗಳು. ಬಕ್ರೀದ್ ಹಬ್ಬ ಹಿನ್ನೆಲೆ ಇವರು ಹಾಸನದಿಂದ ಗೋಮಾಂಸ ತಂದು ಮಾರಾಟ ಮಾಡುತ್ತಿದ್ದರು. ಈ ವೇಳೆ ಭಜರಂಗದಳ ಕಾರ್ಯಕರ್ತರು ದಾಳಿ ನಡೆಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು 140ಕೆ.ಜಿ ಗೋಮಾಂಸ ಸೇರಿದಂತೆ ಆಟೋವನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಜನರ ಸಮ್ಮುಖದಲ್ಲೇ ಯುವಕನನ್ನು ಅಟ್ಟಾಡಿಸಿಕೊಂಡು ಹೋಗಿ ಬರ್ಬರವಾಗಿ ಕೊಲೆ: ಬೆಚ್ಚಿಬೀಳಿಸುವ ಸಿಸಿಟಿವಿ ವಿಡಿಯೋ ವೈರಲ್

ಮನೆಯಲ್ಲಿ ಬಂದಿದ್ದ ನಾಗರಹಾವಿನ ರಕ್ಷಣೆ

ಕೋಲಾರ: ಇತ್ತೀಚೆಗೆ ನಗರ ಪ್ರದೇಶದ ಮನೆಗಳಲ್ಲಿ ಹೆಚ್ಚಾಗಿ ಹಾವುಗಳು ಪ್ರತ್ಯಕ್ಷವಾಗುತ್ತಿದೆ. ಅದರಂತೆ ಇದೀಗ ಕೋಲಾರ ತಾಲ್ಲೂಕಿನ ವೀರಾಪುರ ಗ್ರಾಮದ ಪ್ರಕಾಶ್ ಎಂಬುವರ ಮನೆಗೆ ಬಂದಿದ್ದ ದೊಡ್ಡ ನಾಗರಹಾವನ್ನ ಉರಗ ರಕ್ಷಕ ಆನಂದ್ ಎಂಬುವವರು ರಕ್ಷಣೆ ಮಾಡಿ, ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ