ಒಬ್ಬ ಯುವಕನನ್ನು ನಾಲ್ವರ ಗ್ಯಾಂಗ್ ಅಟ್ಟಾಡಿಸಿಕೊಂಡು ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸುಂಕದಕಟ್ಟೆ ಬಳಿಯ ಹೆಗ್ಗನಹಳ್ಳಿ ಕ್ರಾಸ್ ಬಳಿ ತಡರಾತ್ರಿ ಬೈಕ್ನಲ್ಲಿ ತೆರಳುತ್ತಿದ್ದ ಮಹೇಶ್ ಕುಮಾರ್ನನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದ್ದಾರೆ. ಕೃತ್ಯದ ನಂತರ ಆರೋಪಿಗಳು ಪರಾರಿಯಾಗಿದ್ದಾರೆ. ಇನ್ನು ಹತ್ಯೆಯಾಗಿರುವ ಮಹೇಶ್ ಸಹ ಕೊಲೆ ಪ್ರಕರಣವೊಂದರಲ್ಲಿ ಜೈಲು ಸೇರಿ ಇತ್ತೀಚೆಗೆ ಬಿಡುಗಡೆಯಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹತ್ಯೆ ನಡೆದ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
Follow us
ಒಬ್ಬ ಯುವಕನನ್ನು ನಾಲ್ವರ ಗ್ಯಾಂಗ್ ಅಟ್ಟಾಡಿಸಿಕೊಂಡು ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸುಂಕದಕಟ್ಟೆ ಬಳಿಯ ಹೆಗ್ಗನಹಳ್ಳಿ ಕ್ರಾಸ್ ಬಳಿ ತಡರಾತ್ರಿ ಬೈಕ್ನಲ್ಲಿ ತೆರಳುತ್ತಿದ್ದ ಮಹೇಶ್ ಕುಮಾರ್ನನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದ್ದಾರೆ.
ಕೃತ್ಯದ ನಂತರ ಆರೋಪಿಗಳು ಪರಾರಿಯಾಗಿದ್ದಾರೆ. ಇನ್ನು ಹತ್ಯೆಯಾಗಿರುವ ಮಹೇಶ್ ಸಹ ಕೊಲೆ ಪ್ರಕರಣವೊಂದರಲ್ಲಿ ಜೈಲು ಸೇರಿ ಇತ್ತೀಚೆಗೆ ಬಿಡುಗಡೆಯಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹತ್ಯೆ ನಡೆದ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.