ಹುಬ್ಬಳ್ಳಿ ಕಾಂಗ್ರೆಸ್​ ಕಚೇರಿ ಮುಂದೆ ಯುವಕನ ಬರ್ಬರ ಕೊಲೆ; ತಲೆ ಮೇಲೆ ಕಲ್ಲು ಎತ್ತಿಹಾಕಿ‌, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಹಂತಕರು

ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂದೆ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿ‌, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕಿಡಿಗೇಡಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ. ರಾತ್ರಿ ಸ್ನೇಹಿತರೆಲ್ಲ ಪಾರ್ಟಿ ಮಾಡಿ ನಂತರ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಮೃತ ಯುವಕನ ಗುರುತು ಪತ್ತೆಯಾಗಿಲ್ಲ.

ಹುಬ್ಬಳ್ಳಿ ಕಾಂಗ್ರೆಸ್​ ಕಚೇರಿ ಮುಂದೆ ಯುವಕನ ಬರ್ಬರ ಕೊಲೆ; ತಲೆ ಮೇಲೆ ಕಲ್ಲು ಎತ್ತಿಹಾಕಿ‌, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಹಂತಕರು
ಕೊಲೆಯಾದ ಯುವಕ
Follow us
| Updated By: ಆಯೇಷಾ ಬಾನು

Updated on:Jan 31, 2024 | 10:14 AM

ಹುಬ್ಬಳ್ಳಿ, ಜ.31: ಕಾಂಗ್ರೆಸ್​ ಕಚೇರಿ ಮುಂದೆ 28 ವರ್ಷದ ಯುವಕನ ಬರ್ಬರ ಹತ್ಯೆ (Murder) ನಡೆದಿದೆ. ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂದೆ 28 ವರ್ಷದ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿ‌, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ರಾತ್ರಿ ಸ್ನೇಹಿತರೆಲ್ಲ ಪಾರ್ಟಿ ಮಾಡಿ ನಂತರ ಭೀಕರವಾಗಿ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಮೃತ ಯುವಕನ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಹಳೇ‌ ಹುಬ್ಬಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರ್ತವ್ಯ ಲೋಪ.. ಡಿಡಿಪಿಐ, ಉಪನ್ಯಾಸಕರು ಅಮಾನತು

ಇನ್ನು ಮತ್ತೊಂದೆಡೆ IEDSS ಯೋಜನೆ ಅನುಷ್ಠಾನದ ವೇಳೆ ಕರ್ತವ್ಯ ನಿರ್ಲಕ್ಷ್ಯ ಆರೋಪದಲ್ಲಿ ವಿಜಯಪುರ ಡಿಡಿಪಿಐ ಎನ್.ಹೆಚ್​.ನಾಗೂರರನ್ನ ಅಮಾನತು ಮಾಡಲಾಗಿದೆ. ಇವರ ಜೊತೆಗೆ ಡಯಟ್​ನ ಹಿರಿಯ ಉಪನ್ಯಾಸಕರಾದ ಎಸ್.ಎ. ಮುಜಾವರ ಮತ್ತು ಎ.ಎಸ್.ಹತ್ತಳ್ಳಿ ಅಮಾನತುಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ. ಸ್ವಯಂ ಸೇವಾ ಸಂಸ್ಥೆಗಳಿಗೆ ಅನುದಾನ ಬಿಡುಗಡೆಗೆ ಅಧಿಕಾರಿಗಳಿಂದ ಶಿಫಾರಸು ಮಾಡಲಾಗಿತ್ತು. ನಿಯಮಬಾಹಿರವಾಗಿ ಅಸ್ತಿತ್ವದಲ್ಲಿರದ ಎನ್​ಜಿಒಗಳಿಗೆ ಹಣ ಬಿಡುಗಡೆ ಆರೋಪ ಮಾಡಲಾಗಿತ್ತು.

ಇದನ್ನೂ ಓದಿ: ಬೆಂಗಳೂರಿನ ಮತ್ತೊಂದು ಕಡೆ ಹಸಿರು ಧ್ವಜ ಹಾರಾಟ, ಟ್ವೀಟ್ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ

ಮುಖ್ಯ ಶಿಕ್ಷಕನಿಗೆ ಸಪೋರ್ಟ್, ಕ್ಲರ್ಕ್ ಅರೆಸ್ಟ್​

ವಿದ್ಯಾರ್ಥಿಗಳಿಗೆ ಮುಖ್ಯ ಶಿಕ್ಷಕನಿಂದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಶಾಲಾ ಕ್ಲರ್ಕ್ ಬಂಧನವಾಗಿದೆ. ಯಾದಗಿರಿ ಜಿಲ್ಲೆ ಗುರುಮಠಕಲ್‌ ಪೊಲೀಸರು ಕ್ಲರ್ಕ್ ಫ್ರಾನ್ಸಿಸ್​​​​ನನ್ನು ಅರೆಸ್ಟ್ ಮಾಡಲಾಗಿದ್ದು, ಈತ ಮುಖ್ಯ ಶಿಕ್ಷಕನ ಕೃತ್ಯಕ್ಕೆ ಬೆಂಗಾವಲಾಗಿದ್ದನಂತೆ. ಮುಖ್ಯ ಶಿಕ್ಷಕ ಹನುಮೇಗೌಡ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಪೊಲೀಸರ ವಿಚಾರಣೆ ವೇಳೆ ಮುಖ್ಯ ಶಿಕ್ಷಕನು ಕ್ಲರ್ಕ್ ಹೆಸರು ಬಾಯ್ಬಿಟ್ಟಿದ್ದ. ಹನುಮೇಗೌಡ ಹೇಳಿಕೆ ಆಧರಿಸಿ ಕ್ಲರ್ಕ್ ಫ್ರಾನ್ಸಿಸ್​​​​ನನ್ನು ಬಂಧಿಸಿದ್ದಾರೆ.

ಮೀನು ಹಿಡಿಯುವಾಗ ವ್ಯಕ್ತಿ ಕೆರೆ ಪಾಲು

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ಕೆರೆ ಪಾಲಾಗಿದ್ದಾನೆ. ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಪೈಯಲಗುರ್ಕಿ ಗ್ರಾಮದಲ್ಲಿ ಘಟನೆ ನಡೆದಿದ್ದು, ನೀರಲ್ಲಿ ಮುಳುಗಿ 55 ವರ್ಷದ ಮುನಿಯಪ್ಪ ಎಂಬುವವರು ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ಪೆರೇಸಂದ್ರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ರು. ಇನ್ನೂ ಮುನಿಯಪ್ಪ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:09 am, Wed, 31 January 24

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ