ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಸಿನಿಮೀಯ ಶೈಲಿಯಲ್ಲಿ ಅಟ್ಯಾಕ್!
ಹೊಸಕೋಟೆ: ಹಾಡಹಗಲೇ ಸಿನಿಮೀಯ ರೀತಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯನನ್ನು ಅಡ್ಡಗಟ್ಟಿ ಲಾಂಗು ಮಚ್ಚುಗಳಿಂದ ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಹೆಚ್.ಕ್ರಾಸ್ ಬಳಿ ನಡೆದಿದೆ. ತ್ಯಾಗರಾಜ್ ಹಲ್ಲೆಗೊಳಗಾದ ಗ್ರಾಮ ಪಂಚಾಯತಿ ಸದಸ್ಯ. ಬೆಳಗ್ಗೆ 8 ಗಂಟೆ ಸುಮಾರಿಗೆ ಬೈಕ್ನಲ್ಲಿ ಹೋಗುತ್ತಿದ್ದ ಹೊಸಕೋಟೆ ತಾಲೂಕಿನ ತರಬಹಳ್ಳಿ ಗ್ರಾ.ಪಂ ಸದಸ್ಯ ತ್ಯಾಗರಾಜ್ನನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಲಾಂಗು ಮಚ್ಚುಗಳಿಂದ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ತ್ಯಾಗರಾಜ್ನನ್ನು ಹೊಸಕೋಟೆಯ ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಹಳೇ ವೈಷಮ್ಯ ಹಿನ್ನೆಲೆಯಲ್ಲಿ […]
ಹೊಸಕೋಟೆ: ಹಾಡಹಗಲೇ ಸಿನಿಮೀಯ ರೀತಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯನನ್ನು ಅಡ್ಡಗಟ್ಟಿ ಲಾಂಗು ಮಚ್ಚುಗಳಿಂದ ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಹೆಚ್.ಕ್ರಾಸ್ ಬಳಿ ನಡೆದಿದೆ. ತ್ಯಾಗರಾಜ್ ಹಲ್ಲೆಗೊಳಗಾದ ಗ್ರಾಮ ಪಂಚಾಯತಿ ಸದಸ್ಯ.
ಬೆಳಗ್ಗೆ 8 ಗಂಟೆ ಸುಮಾರಿಗೆ ಬೈಕ್ನಲ್ಲಿ ಹೋಗುತ್ತಿದ್ದ ಹೊಸಕೋಟೆ ತಾಲೂಕಿನ ತರಬಹಳ್ಳಿ ಗ್ರಾ.ಪಂ ಸದಸ್ಯ ತ್ಯಾಗರಾಜ್ನನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಲಾಂಗು ಮಚ್ಚುಗಳಿಂದ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ತ್ಯಾಗರಾಜ್ನನ್ನು ಹೊಸಕೋಟೆಯ ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಶಿಡ್ಲಘಟ್ಟ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.