ಟ್ರ್ಯಾಕ್ಟರ್ ಓವರ್‌ಟೇಕ್ ಮಾಡೋ ದುಸ್ಸಾಹಸ: ಕಾರಿಗೆ ಬಸ್ ಡಿಕ್ಕಿ, ಸ್ಥಳದಲ್ಲೇ 4 ಸಾವು

ಬಾಗಲಕೋಟೆ: ಕೆಎಸ್​ಆರ್​ಟಿಸಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿರೋಳ ಗ್ರಾಮದ ಬಳಿ ಮುಧೋಳ ಜಮಖಂಡಿ ಮಾರ್ಗ ಮಧ್ಯೆ ನಡೆದಿದೆ. ಬೆಳಗಾವಿಯಿಂದ ಕಲಬುರ್ಗಿಗೆ ಹೊರಟಿದ್ದ ಕೆಎ 38 ಎಫ್ 851 ನಂಬರ್​ನ ಕೆಎಸ್​ಆರ್​ಟಿಸಿ ಬಸ್ ಟ್ರ್ಯಾಕ್ಟರ್ ಓವರ್‌ಟೇಕ್ ಮಾಡುವ ವೇಳೆ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಗೋಟೆ ಗ್ರಾಮದಿಂದ ಧಾರವಾಡ ಕೋರ್ಟ್‌ಗೆ ಕಾರಿನಲ್ಲಿ ಹೋಗುತ್ತಿದ್ದ ಗೋಟೆ ಹಾಗೂ ಖಾಜಿಬೀಳಗಿ ಗ್ರಾಮದ ನಿವಾಸಿಗಳಾದ ಹನುಮಂತ ಗನಗಾರ(21), ರಿಯಾಜ್ ಜಾಲಗೇರಿ(25) ಬಾಲಪ್ಪ […]

ಟ್ರ್ಯಾಕ್ಟರ್ ಓವರ್‌ಟೇಕ್ ಮಾಡೋ ದುಸ್ಸಾಹಸ: ಕಾರಿಗೆ ಬಸ್ ಡಿಕ್ಕಿ, ಸ್ಥಳದಲ್ಲೇ 4 ಸಾವು
ಸಾಧು ಶ್ರೀನಾಥ್​

Updated on: Jan 03, 2020 | 10:49 AM

ಬಾಗಲಕೋಟೆ: ಕೆಎಸ್​ಆರ್​ಟಿಸಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿರೋಳ ಗ್ರಾಮದ ಬಳಿ ಮುಧೋಳ ಜಮಖಂಡಿ ಮಾರ್ಗ ಮಧ್ಯೆ ನಡೆದಿದೆ. ಬೆಳಗಾವಿಯಿಂದ ಕಲಬುರ್ಗಿಗೆ ಹೊರಟಿದ್ದ ಕೆಎ 38 ಎಫ್ 851 ನಂಬರ್​ನ ಕೆಎಸ್​ಆರ್​ಟಿಸಿ ಬಸ್ ಟ್ರ್ಯಾಕ್ಟರ್ ಓವರ್‌ಟೇಕ್ ಮಾಡುವ ವೇಳೆ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.

ಘಟನೆಯಲ್ಲಿ ಗೋಟೆ ಗ್ರಾಮದಿಂದ ಧಾರವಾಡ ಕೋರ್ಟ್‌ಗೆ ಕಾರಿನಲ್ಲಿ ಹೋಗುತ್ತಿದ್ದ ಗೋಟೆ ಹಾಗೂ ಖಾಜಿಬೀಳಗಿ ಗ್ರಾಮದ ನಿವಾಸಿಗಳಾದ ಹನುಮಂತ ಗನಗಾರ(21), ರಿಯಾಜ್ ಜಾಲಗೇರಿ(25) ಬಾಲಪ್ಪ ಸೆಂಡಗಿ(34), ಸಿದ್ದರಾಯ ತೇಲಿ(36) ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮುಧೋಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 7:45 am, Fri, 3 January 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us