ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಬಲೆಗೆ ಬಿದ್ದ ಉದ್ಯಮಿ: ದಂಪತಿ ಸಹಿತ ನಾಲ್ವರನ್ನು ಬಂಧಿಸಿದ ಸಿಸಿಬಿ

ಉದ್ಯಮಿಯನ್ನ ಟ್ರ್ಯಾಪ್ ಮಾಡಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತನ್ನ ಪತ್ನಿಯನ್ನೇ ವಿಧವೆ ಎಂದು ಹೇಳಿ ಉದ್ಯಮಿಯೊಂದಿಗೆ ಬಿಟ್ಟು ಹನಿಟ್ರ್ಯಾಪ್ ನಡೆಸಿದ್ದನು. ಈ ಕೃತ್ಯವನ್ನು ತನ್ನ ಮೂವರು ಸಹಚರರು ಸೇರಿಕೊಂಡು ಮಾಡುತ್ತಿದ್ದನು. ಸದ್ಯ ದಂಪತಿ ಸಹಿತ ನಾಲ್ವರನ್ನು ಸಿಸಿಬಿ ಬಂಧಿಸಿದೆ.

ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಬಲೆಗೆ ಬಿದ್ದ ಉದ್ಯಮಿ: ದಂಪತಿ ಸಹಿತ ನಾಲ್ವರನ್ನು ಬಂಧಿಸಿದ ಸಿಸಿಬಿ
ಉದ್ಯಮಿಯನ್ನು ಹನಿಟ್ರ್ಯಾಪ್​ ಮಾಡಲು ಹೋಗಿ ಸಿಸಿಬಿ ಪೊಲೀಸರ ಕೈಗೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿಗಳು
Follow us
ರಾಚಪ್ಪಾಜಿ ನಾಯ್ಕ್
| Updated By: Rakesh Nayak Manchi

Updated on:Dec 16, 2023 | 9:57 AM

ಬೆಂಗಳೂರು, ಡಿ.16: ನಗರದಲ್ಲಿ (Bengaluru) ಮತ್ತೊಂದು ಹನಿಟ್ರ್ಯಾಪ್ ಪ್ರಕರಣ ಬೆಳಕಿಗೆ ಬಂದಿದೆ. ತನ್ನ ಪತ್ನಿಯನ್ನು ವಿಧವೆ ಎಂದು ಹೇಳಿ ನೋಡಿಕೊಳ್ಳುವಂತೆ ಉದ್ಯಮಿ ಜೊತೆ ಬಿಟ್ಟು ಹನಿಟ್ಯ್ರಾಪ್ (Honeytrap) ನಡೆಸಿದ ಪ್ರಕರಣ ಸಂಬಂಧ ದಂಪತಿ ಸಹಿತ ನಾಲ್ವರು ಆರೋಪಿಗಳನ್ನು ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ.

ಖಲೀಮ್, ಸಭಾ, ಓಬೆದ್ ರಕೀಮ್, ಅತೀಕ್ ಬಂಧಿತ ಆರೋಪಿಗಳಾಗಿದ್ದು, ಈ ಪೈಕಿ ಖಲೀಮ್ ಮತ್ತು ಸಭಾ ದಂಪತಿಯಾಗಿದ್ದಾರೆ. ಈ ಗ್ಯಾಂಗ್ ಅತೀವುಲ್ಲಾ ಎಂಬ ಉದ್ಯಮಿಯನ್ನ ಟ್ರ್ಯಾಪ್ ಮಾಡಿದ್ದ ಹನಿಟ್ರ್ಯಾಪ್ ಮಾಡಿತ್ತು.

ಅತೀವುಲ್ಲಾಗೆ ಪತ್ನಿ ಸಭಾಳನ್ನ ವಿಧವೆ ಅಂತಾ ಪರಿಚಯ ಮಾಡಿಸಿಕೊಟ್ಟು ಆಕೆಯನ್ನು ನೋಡಿಕೊಳ್ಳುವಂತೆ ಹೇಳಿದ್ದ. ನಂತರ ಸಭಾ ಮತ್ತು ಅತೀವುಲ್ಲಾ ನಡುವೆ ದೈಹಿಕ ಸಂಪರ್ಕ ನಡೆದಿತ್ತು. ಕೆಲ ದಿನಗಳ ನಂತರ ಆರ್ ಆರ್ ನಗರದಲ್ಲಿ ರೂಮ್ ಬುಕ್ ಮಾಡಲು ಆಧಾರ್ ಕಾರ್ಡ್ ಜೊತೆ ಬಾ‌ ಎಂದು ಅತೀವುಲ್ಲಾನನ್ನು ಕರೆದಿದ್ದಾಳೆ.

ಇದನ್ನೂ ಓದಿ: ಅನೈತಿಕ ಸಂಬಂಧಕ್ಕೆ ಪತ್ನಿ ಅಡ್ಡಿ ಎಂದು ವಿಷದ ಇಂಜೆಕ್ಷನ್ ಚುಚ್ಚಿ ಕೊಲೆ ಆರೋಪ, ಪತಿಯ ಲವರ್ ಜೊತೆ ಪತ್ನಿ ಮಾತನಾಡಿದ ಆಡಿಯೋ ಪತ್ತೆ

ಅದರಂತೆ, ಆರ್​ಅರ್​ ನಗರಕ್ಕೆ ಬಂದಿದ್ದ ಅತೀವುಲ್ಲಾ, ರೂಮ್ ಬುಕ್ ಮಾಡಿ ಒಳಗಡೆ ಹೋದ ಕೆಲ ಹೊತ್ತಲ್ಲೇ ಖಲೀಮ್, ರಕೀಬ್, ಅತೀಕ್ ಎಂಟ್ರಿ ಕೊಟ್ಟಿದ್ದಾರೆ. ಬಳಿಕ ಸೀನ್ ಕ್ರಿಯೇಟ್ ಮಾಡಿದ್ದ ಆರೋಪಿಗಳು, ಆರು ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಇಲ್ಲವಾದರೆ ಈ ವಿಚಾರ ನಿಮ್ಮ ಮನೆಯವರಿಗೆ ಹೇಳುತ್ತೇವೆ ಅಂತ ಬೆದರಿಕೆ ಹಾಕುತ್ತಾರೆ.

ಅಷ್ಟರಲ್ಲೇ ಮಾಹಿತಿ ತಿಳಿದು ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳನ್ನು ರೆಡ್​ಹ್ಯಾಂಡ್ ಆಗಿ ಹಿಡಿದಿದ್ದಾರೆ. ಇದೇ ರೀತಿ ಹಲವರಿಗೆ ಸುಲಿಗೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಆರ್​ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:48 am, Sat, 16 December 23

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್