AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿನಲ್ಲಿ ಅನುಮಾನಾಸ್ಪದವಾಗಿ ಉದ್ಯಮಿ ಶವಪತ್ತೆ; ಕೊಲೆ ಮಾಡಿ ಕಾರಿನಲ್ಲಿ ಶವ ಇಟ್ಟು ಹೋಗಿರುವ ಶಂಕೆ

ರಿಯಲ್‌ಎಸ್ಟೇಟ್ ಉದ್ಯಮಿ ಕೃಷ್ಣ ಯಾದವ್ ಎಂಬುವವರ ಶವ ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲಿ ಪತ್ತೆಯಾಗಿದೆ. ಶವದ ಮೇಲೆ ಗಾಯದ ಗುರುತುಗಳಿದ್ದು ಕೊಲೆ ಮಾಡಿ ಕಾರಿನಲ್ಲಿ ಶವ ಇಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾರಿನಲ್ಲಿ ಅನುಮಾನಾಸ್ಪದವಾಗಿ ಉದ್ಯಮಿ ಶವಪತ್ತೆ; ಕೊಲೆ ಮಾಡಿ ಕಾರಿನಲ್ಲಿ ಶವ ಇಟ್ಟು ಹೋಗಿರುವ ಶಂಕೆ
ಕಾರಿನಲ್ಲಿ ಅನುಮಾನಾಸ್ಪದವಾಗಿ ಉದ್ಯಮಿ ಶವಪತ್ತೆ
TV9 Web
| Updated By: ಆಯೇಷಾ ಬಾನು|

Updated on: Mar 12, 2024 | 12:12 PM

Share

ದೇವನಹಳ್ಳಿ, ಮಾರ್ಚ್.12: ಬೆಂಗಳೂರಿನ ಬಾಗಲೂರು ಕ್ರಾಸ್​​ ಬಳಿ ಕಾರಿನಲ್ಲಿ ಅನುಮಾನಾಸ್ಪದವಾಗಿ ಉದ್ಯಮಿಯ ಶವಪತ್ತೆಯಾಗಿದೆ (Dead Body Found). ರಿಯಲ್‌ಎಸ್ಟೇಟ್ ಉದ್ಯಮಿ ಕೃಷ್ಣ ಯಾದವ್ ಎಂಬುವವರ ಶವಪತ್ತೆಯಾಗಿದೆ. ಶವದ ಮೇಲೆ ಗಾಯದ ಗುರುತುಗಳಿದ್ದು ಕೊಲೆ ಮಾಡಿ ಕಾರಿನಲ್ಲಿ ಶವ ಇಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಉದ್ಯಮಿ ಕೃಷ್ಣ ಯಾದವ್ ನಿನ್ನೆ ರಾತ್ರಿಯಿಂದ ಕಾಣೆಯಾಗಿದ್ದರು. ಕೆಲಸಕ್ಕೆಂದು ಹೊರ ಹೋಗಿದ್ದವರು ರಾತ್ರಿ ಕಳೆದರೂ ಮನೆಗೆ ಹಿಂತಿರುಗಿರಲಿಲ್ಲ. ಇಂದು ಬೆಳಗ್ಗೆ ತನ್ನದೆ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮಾರುತಿ ಶಿಫ್ಟ್​ ಕಾರು ರಕ್ತ ಸಿಕ್ತವಾಗಿದೆ. ಹಂತಕರು ಕೊಲೆ ಮಾಡಿ ಬಾಗಲೂರು ಕ್ರಾಸ್ ಬಸ್ ನಿಲ್ದಾಣದ‌ ಬಳಿ ಕಾರು ಬಿಟ್ಟು ಹೋಗಿದ್ದಾರೆ. ಸದ್ಯ ಪೊಲೀಸರು ತೀವ್ರ ತನಿಖೆ ಶುರು ಮಾಡಿದ್ದಾರೆ.

ಖಾಲಿ ಜಾಗದಲ್ಲಿ ಇಟ್ಟಿದ್ದ ವಸ್ತುಗಳಿಗೆ ಬೆಂಕಿ

ಖಾಲಿ ಜಾಗದಲ್ಲಿಟ್ಟಿದ್ದ ವಸ್ತುಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ದೌಡಾಯಿಸಿವೆ. ಕ್ಷಣಕ್ಷಣಕ್ಕೂ ವ್ಯಾಪಿಸುತ್ತಿದ್ದ ಬೆಂಕಿಯನ್ನು ನಂದಿಸುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಗಲಾಟೆ: ಆರೋಪಿ ನಾಶಿಪುಡಿಗೂ ಇದಕ್ಕೂ ಸಂಬಂಧವಿಲ್ಲ; ಪರಮೇಶ್ವರ್​​

ಬ್ಯಾಂಕ್​ಗೆ ಕನ್ನ, ಆರೋಪಿಗಳು ಲಾಕ್

ಮಂಗಳೂರಿನ ಕರ್ನಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆಯಲ್ಲಿ ನಗದು, ಚಿನ್ನ ದೋಚಿ ಪರಾರಿಯಾದ ಖದೀಮರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳದ ಮಹಮ್ಮದ್ ರಫೀಕ್, ಮಂಜೇಶ್ವರದ ಇಬ್ರಾಹಿಂ ಕಲಂದರ್, ಹಾಗೂ ಮಂಜೇಶ್ವರದ ದಯಾನಂದ ಎಸ್ ಬಂಧಿತ ಆರೋಪಿಗಳಾಗಿದ್ದಾರೆ. ಕಿಟಕಿ ಮುರಿದು ಒಳನುಗ್ಗಿದ್ದ ಈ ಕಳ್ಳರು ನಗದು ಮತ್ತು ಚಿನ್ನಾಭರಣ ದೋಚಿ ಪರಾರಿಯಾಗಿದ್ರು. ಒಂದು ತಿಂಗಳ ಬಳಿಕ ಆರೋಪಿಗಳು ಅರೆಸ್ಟ್ ಆಗಿದ್ದಾರೆ. ‌

ಶಿವಾಜಿ ಜಯಂತಿ ಮೆರವೇಣಿಗೆ ವೇಳೆ ಹೊಡೆದಾಟ ಯಾದಿಗಿರಿ

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ ವೇಳೆ ಯುವಕರ ಹೊಡೆದಾಟ ನಡೆದಿದೆ. ಯಾದಗಿರಿಯಲ್ಲಿ ವೀರ ಸಾವರ್ಕರ್ ಸೇನಾ ನೇತೃತ್ವದಲ್ಲಿ ನಗರದ ಹಿರೇಅಗಸಿ ಬಳಿ ಬೃಹತ್ ಶೋಭಾಯಾತ್ರೆ ಆಯೋಜಿಸಲಾಗಿತ್ತು. ಈ ವೇಳೆ ಯುವಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಡಿಜೆ ಸದ್ದಿಗೆ ಹೆಜ್ಜೆ ಹಾಕುವಾಗ ಕಾಲ್ತುಳಿತ ಉಂಟಾಗಿದೆ. ಇದ್ರಿಂದ ಮಾತಿಗೆ ಮಾತು ಬೆಳೆದು ಯುವಕರ ನಡುವೆ ಹೊಡೆದಾಟ ನಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ