AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜಿಗೆ ತೆರಳುತ್ತಿದ್ದ ತಂದೆ ಮಗನ ಬೈಕ್​ಗೆ ಕ್ಯಾಂಟರ್ ಡಿಕ್ಕಿ; ಸ್ಥಳದಲ್ಲೇ ಮಗನ ದರ್ಮರಣ

ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ಕ್ಯಾಂಟರ್ ಅಡ್ಡಾದಿಡ್ಡಿ ಬಂದು ಡಿಕ್ಕಿ ಹೊಡೆದಿದೆ. ಅಪಘಾತದ ರಬಸಕ್ಕೆ ವಿದ್ಯಾರ್ಥಿ ಮೇಲೆ ಕ್ಯಾಂಟರ್ ಹರಿದು ದುರ್ಮರಣ ಹೊಂದಿದ್ದಾನೆ. ವಿದ್ಯಾರ್ಥಿಯ ತಂದೆ ಅಪಾಯದಿಂದ ಪಾರಾಗಿದ್ದು, ಗಾಯಗೊಂಡಿದ್ದಾರೆ.

ಕಾಲೇಜಿಗೆ ತೆರಳುತ್ತಿದ್ದ ತಂದೆ ಮಗನ ಬೈಕ್​ಗೆ ಕ್ಯಾಂಟರ್ ಡಿಕ್ಕಿ; ಸ್ಥಳದಲ್ಲೇ ಮಗನ ದರ್ಮರಣ
ಪ್ರಾತಿನಿಧಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Mar 14, 2022 | 11:05 AM

Share

ಬೆಂಗಳೂರು ಗ್ರಾಮಾಂತರ: ಕಾಲೇಜಿಗೆ ಹೋಗುತ್ತಿದ್ದ ತಂದೆ ಮಗನ ಬೈಕ್ (Bike Accident) ​ಗೆ ಕ್ಯಾಂಟರ್ ಡಿಕ್ಕಿ ಹೊಡೆದು ಮಗ ಸ್ಥಳದಲ್ಲೇ ದರ್ಮರಣ ಹೊಂದಿರುವಂತಹ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಚುಂಚೇಗೌಡನ ಹೊಸಹಳ್ಳಿ ಬಳಿ ಘಟನೆ ಸಂಭವಿಸಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಅಂಬಲಗೆರೆ ನಿವಾಸಿ ವರುಣ್ ( 18 ) ಮೃತ ವಿದ್ಯಾರ್ಥಿ. ಇಂದು ಬೆಳಗ್ಗೆ ಗ್ರಾಮದಿಂದ ಕಾಲೇಜಿಗೆ ತಂದೆಯ ಜೊತೆ ಬೈಕ್ನಲ್ಲಿ ಬರ್ತಿದ್ದ ವಿದ್ಯಾರ್ಥಿ, ಈ ವೇಳೆ ಎದುರಿನಿಂದ ಅತಿವೇಗವಾಗಿ ಬಂದ ಕ್ಯಾಂಟರ್ ಬಸ್​ಗೆ ಡಿಕ್ಕಿ ಹೊಡೆಯೋದನ್ನ ತಪ್ಪಿಸಲು ಹೋಗಿ ಬೈಕ್​ಗೆ ಡಿಕ್ಕಿ ಹೊಡೆದಿದೆ. ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ಕ್ಯಾಂಟರ್ ಅಡ್ಡಾದಿಡ್ಡಿ ಬಂದು ಡಿಕ್ಕಿ ಹೊಡೆದಿದೆ. ಅಪಘಾತದ ರಬಸಕ್ಕೆ ವಿದ್ಯಾರ್ಥಿ ಮೇಲೆ ಕ್ಯಾಂಟರ್ ಹರಿದು ದುರ್ಮರಣ ಹೊಂದಿದ್ದಾನೆ. ವಿದ್ಯಾರ್ಥಿಯ ತಂದೆ ಅಪಾಯದಿಂದ ಪಾರಾಗಿದ್ದು, ಗಾಯಗೊಂಡಿದ್ದಾರೆ. ಅಪಘಾತದ ನಂತರ ಕ್ಯಾಂಟರ್ ಸಮೇತ ಚಾಲಕ ಎಸ್ಕೇಪ್​ಗೆ ಯತ್ನಿಸಿದ್ದು, ಕ್ಯಾಂಟರ್ ಚೇಸ್ ಮಾಡಿ ಚಾಲಕನನ್ನ ದೊಡ್ಡಬೆಳವಂಗಲ ಪಿಎಸ್ಐ ಜ್ಞಾನಮೂರ್ತಿ ಬಂದಿಸಿದ್ದಾರೆ. ದೊಡ್ಡಬೆಳವಂಗಲ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರೆಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ:

ಮೈಸೂರು: ಮೈಸೂರಿನ ಕುಕ್ಕರಹಳ್ಳಿ ಕೆರೆಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿದೆ. ಬೋಟ್ ನಿಲುಗಡೆ ಸ್ಥಳದಲ್ಲಿ ತೇಲುತ್ತಿದ್ದ ಮೃತದೇಹ ಕಂಡುಬಂದಿದ್ದು, ಬೆಳಗ್ಗೆ ವಾಯು ವಿಹಾರಕ್ಕೆ ತೆರಳಿದ್ದವರಿಂದ ಈ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಸರಸ್ವತಿಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಶಿ ಮಾಡುವ ಯಂತ್ರಕ್ಕೆ ಸಿಲುಕಿ ಯುವತಿ ಸಾವು:

ಕಲಬುರಗಿ: ರಾಶಿ ಮಾಡುವ ಯಂತ್ರಕ್ಕೆ ಸಿಲುಕಿ ಯುವತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಶೀಲವಂತಿ ಸಾಲಿ (18) ಮೃತ ಯುವತಿ. ಶಿಲವಂತಿ, ದ್ವಿತೀಯ ಪಿಯು ವಿದ್ಯಾರ್ಥಿನಿಯಾಗಿದ್ದು, ನಿನ್ನೆ ಕಾಲೇಜಿಗೆ ರಜೆ ಹಿನ್ನೆಲೆಯಲ್ಲಿ ಪಾಲಕರ ಜೊತೆ ಜಮೀನಿಗೆ ಹೋಗಿದ್ದಳು. ಕೊರಳಲ್ಲಿದ್ದ ವೇಲ್ ಯಂತ್ರಕ್ಕೆ ಸಿಲುಕಿದ್ದು, ಇದರಿಂದ ಶಿಲವಂತಿ ಯಂತ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾಳೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲಾ. ಮಾದನಹಿಪ್ಪರಗಾ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:

ಚೀನಾದಲ್ಲಿ ಮತ್ತೆ ಕೊವಿಡ್: ದೊಡ್ಡ ನಗರಗಳಲ್ಲಿ ಮತ್ತೆ ಲಾಕ್​ಡೌನ್ ಘೋಷಣೆ, ವಿಶ್ವದಲ್ಲಿ ಮರುಕಳಿಸಿದ ಆತಂಕ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ