ಅಪಘಾತದಲ್ಲಿ ಗಾಯಗೊಂಡವನನ್ನು ತಮ್ಮ ಕಾರಿನಲ್ಲಿ ಕೊಂಡೊಯ್ದು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಶಾಸಕ ಪುಟ್ಟರಂಗಶೆಟ್ಟಿ

ಅಪಘಾತದಲ್ಲಿ ಗಾಯಗೊಂಡಿದ್ದ ಸವಾರನನ್ನು ಶಾಸಕ ಪುಟ್ಟರಂಗಶೆಟ್ಟಿ ಅವರು ತನ್ನ ಕಾರಿನಲ್ಲೇ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದರು.

ಅಪಘಾತದಲ್ಲಿ ಗಾಯಗೊಂಡವನನ್ನು ತಮ್ಮ ಕಾರಿನಲ್ಲಿ ಕೊಂಡೊಯ್ದು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಶಾಸಕ ಪುಟ್ಟರಂಗಶೆಟ್ಟಿ
ಸಾಂಕೇತಿಕ ಚಿತ್ರ
Follow us
| Updated By: Rakesh Nayak Manchi

Updated on:May 22, 2022 | 6:52 PM

ಚಾಮರಾಜನಗರ: ಅಪಘಾತದಲ್ಲಿ ಗಾಯಗೊಂಡಿದ್ದ ಸವಾರನನ್ನು ಶಾಸಕ ಪುಟ್ಟರಂಗಶೆಟ್ಟಿ (Puttaranga Shetty) ಅವರು ತನ್ನ ಕಾರಿನಲ್ಲೇ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಘಟನೆ ನಡೆದಿದೆ. ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ನರೀಪುರ ಬಳಿ ಕಾರು ಹಾಗು ಬೈಕ್ ನಡುವೆ ಅಪಘಾತ (Accident) ಸಂಭವಿಸಿದೆ. ಈ ದುರ್ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ. ಮೃತನನ್ನು ಚಾಮರಾಜನಗರ ತಾಲ್ಲೂಕಿನ ಉಮ್ಮತ್ತೂರು ಗ್ರಾಮದ ಮಹದೇವಸ್ವಾಮಿ ಎಂದು ಗುರುತಿಸಲಾಗಿದೆ. ಕಾರು ಗುದ್ದಿದ ರಭಸಕ್ಕೆ ಬೈಕ್ ಸವಾರದ ದೇಹ ಕಾರಿನ ಮೇಲ್ಭಾಗಕ್ಕೆ ಹಾರಿ ಕೆಳಗೆ ಬಿದ್ದಿದೆ. ಘಟನೆಯಲ್ಲಿ ಬೈಕ್​ ಹಿಂಬದಿ ಕುಳಿತಿದ್ದ ಸವಾರ ಗಾಯಗೊಂಡಿದ್ದನು. ಈ ವೇಳೆ ಅದೇ ರಸ್ತೆ ಮೂಲಕ ಹೋಗುತ್ತಿದ್ದ ಶಾಸಕ ಪುಟ್ಟರಂಗಶೆಟ್ಟಿ, ಗಾಯಾಳುವನ್ನು ತಮ್ಮ ಕಾರಿನಲ್ಲಿ ಕೊಂಡೊಯ್ದು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಘಟನಾ ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಟೆಂಪೋ ಟ್ರಾವಲರ್ ವಾಹನ ಪಲ್ಟಿ: ಮನೆ ಬಾಗಿಲು ಮುರಿದು ಚಿನ್ನಾಭರಣ ಕಳವು, ಧರೆಗುರುಳಿದ ಬೃಹತ್ ಗಾತ್ರದ ಬೇವಿನ ಮರ

ಕಸಾಯಿಖಾನೆ ಮೇಲೆ ದಾಳಿ

ಚಿತ್ರದುರ್ಗ: ಕಸಾಯಿಖಾನೆ ಮೇಲೆ ಪೊಲೀಸರು ದಾಳಿ ನಡೆಸಿ ಒಂದು ಹಸುವನ್ನು ರಕ್ಷಣೆ ಮಾಡಿದ ಘಟನೆ ಚಳ್ಳಕೆರೆ ಪಟ್ಟಣದ ರಹೀಂ‌ನಗರದ ಕಸಾಯಿಖಾನೆಯಲ್ಲಿ ನಡೆದಿದೆ. ಗೋ ಮಾಂಸ ಮಾರಾಟ ಹಾಗೂ ಗೋ ಹತ್ಯೆ ಬಗ್ಗೆ ಗೌ ಗ್ಯಾನ್ ಸಂಸ್ಥೆಯಿಂದ ಚಳ್ಳಕೆರೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ದೂರು ಆಧರಿಸಿ ಪೊಲೀಸರು ಕಸಾಯಿಖಾನೆಗೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ನಾಲ್ವರು ಆರೋಪಿಗಳು ಪೊಲೀಸರು ಕೈಗೆ ಸಿಕ್ಕಿಬಿದ್ದಿದ್ದು, ಪ್ರಕರಣ ದಾಖಲಿಸಿದ್ದಾರೆ. ದಾಳಿ ವೇಳೆ ಒಂದು ಹಸುವನ್ನು ರಕ್ಷಿಸಲಾಗಿದ್ದು, ಗೋಮಾಂಸವನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಮುಸ್ಲಿಮರು ಮಾತ್ರವಲ್ಲ ಹಿಂದೂಗಳು ಕೂಡ ಗೋಮಾಂಸ ತಿನ್ನುತ್ತಾರೆ: ಸಿದ್ದರಾಮಯ್ಯ

ಖಾಕಿ ಬಲೆಗೆ ಬಿದ್ದ ಮನೆಗಳ್ಳರು

ನೆಲಮಂಗಲ: ಚಿಂದಿ ಆಯುವ ನೆಪದಲ್ಲಿ ಬೀಗ ಹಾಕಿದ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರನ್ನು ಪೊಲೀಸರು ಬಂಧಿಸಿದ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೊಹಮ್ಮದ್ ಅಲಿಯಾಸ್‌ ದಿಲ್‌(22), ಸಮೀರ್ ಏರೋನ್(25) ಬಂಧಿತ ಆರೋಪಿಗಳು. ಬಂಧಿತರಿಂದ 450ಗ್ರಾಂ ಚಿನ್ನ, ಒಂದು ರಾಡ್, ಆಟೋ, ಕೃತ್ಯಕ್ಕೆ ಬಳಸಿದ ಮೊಬೈಲ್ ಅನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಆರೋಪಿಗಳು ಚಿಂದಿ ಆಯುವ ನೆಪದಲ್ಲಿ ಬೀಗ ಹಾಕಿದ ಮನೆಗಳನ್ನ ಗುರುತಿಸಿ ರಾತ್ರಿ ವೇಳೆಯಲ್ಲಿ ಕಳ್ಳತನ ಮಾಡುತ್ತಿದ್ದರು. ವೇಸ್ಟ್‌ ತುಂಬಿಕೊಂಡು ಹೋಗುವ ಅಟೋದಲ್ಲಿ ಬಂದು ಬೀಗ ಹಾಕಿದ ಮನೆಗಳನ್ನು ಗುರುತಿಸುತ್ತಿದ್ದರು. ಸದ್ಯ ಆರೋಪಿಗಳ ವಿರುದ್ಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Vijayanagara Rains: ವಿಜಯನಗರ ಜಿಲ್ಲೆಗೆ ತಕ್ಷಣ ಅಧಿಕಾರಿಗಳನ್ನು ನೇಮಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ

ಮತ್ತಷ್ಟು ಸುದ್ದಿಗಳಿಗಾಗಿ ಲಿಂಕ್ ಕ್ಲಿಕ್ ಮಾಡಿ

Published On - 6:52 pm, Sun, 22 May 22