ನಡುರಸ್ತೆಯಲ್ಲಿ ಚಾಕುವಿನಿಂದ ಇರಿದು ಕಾರು ಚಾಲಕನ ಹತ್ಯೆ
ಬೆಂಗಳೂರು: ಹಳೆ ದ್ವೇಷದ ಹಿನ್ನೆಲೆಯಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಂದಿನಿ ಲೇಔಟ್ ಬಳಿಯ ರಾಜೀವ್ ಗಾಂಧಿ ನಗರದಲ್ಲಿ ನಡೆದಿದೆ. ವೃತ್ತಿಯಲ್ಲಿ ಚಾಲಕನಾಗಿರುವ ಲಗ್ಗೆರೆ ನಿವಾಸಿ ರಘು ತಡರಾತ್ರಿ 9 ಗಂಟೆ ಸುಮಾರಿಗೆ ಕಾರಿನಲ್ಲಿ ಬಂದು ರಾಜೀವ್ ಗಾಂಧಿ ನಗರದ ಮುಖ್ಯರಸ್ತೆಯಲ್ಲಿ ನಿಂತಿದ್ದ. ಈ ವೇಳೆ ಎಂಟ್ರಿ ಕೊಟ್ಟ ಗ್ಯಾಂಗ್ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದ್ದು, ಸ್ಥಳಕ್ಕೆ ನಂದಿನಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. […]
ಬೆಂಗಳೂರು: ಹಳೆ ದ್ವೇಷದ ಹಿನ್ನೆಲೆಯಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಂದಿನಿ ಲೇಔಟ್ ಬಳಿಯ ರಾಜೀವ್ ಗಾಂಧಿ ನಗರದಲ್ಲಿ ನಡೆದಿದೆ.
ವೃತ್ತಿಯಲ್ಲಿ ಚಾಲಕನಾಗಿರುವ ಲಗ್ಗೆರೆ ನಿವಾಸಿ ರಘು ತಡರಾತ್ರಿ 9 ಗಂಟೆ ಸುಮಾರಿಗೆ ಕಾರಿನಲ್ಲಿ ಬಂದು ರಾಜೀವ್ ಗಾಂಧಿ ನಗರದ ಮುಖ್ಯರಸ್ತೆಯಲ್ಲಿ ನಿಂತಿದ್ದ. ಈ ವೇಳೆ ಎಂಟ್ರಿ ಕೊಟ್ಟ ಗ್ಯಾಂಗ್ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದ್ದು, ಸ್ಥಳಕ್ಕೆ ನಂದಿನಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಘುನನ್ನು ಪರಿಚಯಸ್ಥರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.