ನಡುರಸ್ತೆಯಲ್ಲಿ ಚಾಕುವಿನಿಂದ ಇರಿದು ಕಾರು ಚಾಲಕನ ಹತ್ಯೆ

ಬೆಂಗಳೂರು: ಹಳೆ ದ್ವೇಷದ ಹಿನ್ನೆಲೆಯಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಂದಿನಿ ಲೇಔಟ್ ಬಳಿಯ ರಾಜೀವ್‌ ಗಾಂಧಿ ನಗರದಲ್ಲಿ ನಡೆದಿದೆ. ವೃತ್ತಿಯಲ್ಲಿ ಚಾಲಕನಾಗಿರುವ ಲಗ್ಗೆರೆ ನಿವಾಸಿ ರಘು ತಡರಾತ್ರಿ 9 ಗಂಟೆ ಸುಮಾರಿಗೆ ಕಾರಿನಲ್ಲಿ ಬಂದು ರಾಜೀವ್ ಗಾಂಧಿ ನಗರದ ಮುಖ್ಯರಸ್ತೆಯಲ್ಲಿ ನಿಂತಿದ್ದ. ಈ ವೇಳೆ ಎಂಟ್ರಿ ಕೊಟ್ಟ ಗ್ಯಾಂಗ್ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದ್ದು, ಸ್ಥಳಕ್ಕೆ ನಂದಿನಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. […]

ನಡುರಸ್ತೆಯಲ್ಲಿ ಚಾಕುವಿನಿಂದ ಇರಿದು ಕಾರು ಚಾಲಕನ ಹತ್ಯೆ
ಸಾಧು ಶ್ರೀನಾಥ್​

Updated on: Dec 12, 2019 | 11:57 AM

ಬೆಂಗಳೂರು: ಹಳೆ ದ್ವೇಷದ ಹಿನ್ನೆಲೆಯಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಂದಿನಿ ಲೇಔಟ್ ಬಳಿಯ ರಾಜೀವ್‌ ಗಾಂಧಿ ನಗರದಲ್ಲಿ ನಡೆದಿದೆ.

ವೃತ್ತಿಯಲ್ಲಿ ಚಾಲಕನಾಗಿರುವ ಲಗ್ಗೆರೆ ನಿವಾಸಿ ರಘು ತಡರಾತ್ರಿ 9 ಗಂಟೆ ಸುಮಾರಿಗೆ ಕಾರಿನಲ್ಲಿ ಬಂದು ರಾಜೀವ್ ಗಾಂಧಿ ನಗರದ ಮುಖ್ಯರಸ್ತೆಯಲ್ಲಿ ನಿಂತಿದ್ದ. ಈ ವೇಳೆ ಎಂಟ್ರಿ ಕೊಟ್ಟ ಗ್ಯಾಂಗ್ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದ್ದು, ಸ್ಥಳಕ್ಕೆ ನಂದಿನಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಘುನನ್ನು ಪರಿಚಯಸ್ಥರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us