ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ಕಾರು ಚಾಲಕ, ಇಬ್ಬರು ಸಾವು

ಟ್ರಾಫಿಕ್ ಪೊಲೀಸರು ತಡೆದಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಬಂದು  ಪೊಲೀಸರ ವಾಹನಕ್ಕೆ   ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಪೊಲೀಸ್ ಅಧಿಕಾರಿ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ರಾಜಸ್ಥಾನದ ಜೋಧ್​ಪುರದಲ್ಲಿ ನಡೆದಿದೆ. ಟ್ರಾಫಿಕ್ ಪೊಲೀಸರು ತಡೆದಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ತನ್ನ ವಾಹನವನ್ನು ಪೊಲೀಸ್ ಕಾರಿಗೆ ಡಿಕ್ಕಿ ಹೊಡೆದು ಪೊಲೀಸ್ ಸಿಬ್ಬಂದಿಯನ್ನು ಹತ್ಯೆ ಮಾಡಿರುವುದಷ್ಟೇ ಅಲ್ಲದೇ ಘಟನೆಯಲ್ಲಿ ಆ ವ್ಯಕ್ತಿಯೂ ಸಾವನ್ನಪ್ಪಿದ್ದಾನೆ.

ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ಕಾರು ಚಾಲಕ, ಇಬ್ಬರು ಸಾವು
ಅಪಘಾತ
Image Credit source: India Today

Updated on: Aug 16, 2023 | 3:04 PM

ಟ್ರಾಫಿಕ್ ಪೊಲೀಸರು ತಡೆದಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಬಂದು  ಪೊಲೀಸರ ವಾಹನಕ್ಕೆ   ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಪೊಲೀಸ್ ಅಧಿಕಾರಿ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ರಾಜಸ್ಥಾನದ ಜೋಧ್​ಪುರದಲ್ಲಿ ನಡೆದಿದೆ. ಟ್ರಾಫಿಕ್ ಪೊಲೀಸರು ತಡೆದಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ತನ್ನ ವಾಹನವನ್ನು ಪೊಲೀಸ್ ಕಾರಿಗೆ ಡಿಕ್ಕಿ ಹೊಡೆದು ಪೊಲೀಸ್ ಸಿಬ್ಬಂದಿಯನ್ನು ಹತ್ಯೆ ಮಾಡಿರುವುದಷ್ಟೇ ಅಲ್ಲದೇ ಘಟನೆಯಲ್ಲಿ ಆ ವ್ಯಕ್ತಿಯೂ ಸಾವನ್ನಪ್ಪಿದ್ದಾನೆ.

ಕಾರ್ವಾರ ಪೊಲೀಸ್ ಠಾಣಾ ವ್ಯಾಪ್ತಿಯ ಜೋಧಪುರ-ನಾಗೌರ್ ಹೆದ್ದಾರಿಯಲ್ಲಿ ಮಂಗಳವಾರ ಸಂಜೆ 6.30ರ ಸುಮಾರಿಗೆ ಈ ಘಟನೆ ನಡೆದಿದೆ.
ನಗೌರ್‌ನ ಜಲಸು ನಾನಕ್‌ನ ನಿವಾಸಿ ಹರಿಶಂಕರ್ ವೈಷ್ಣವ್ ಎಂದು ಗುರುತಿಸಲಾದ ಎಸ್‌ಯುವಿ ಚಾಲಕ, ಅತಿವೇಗದಲ್ಲಿ ಚಾಲನೆ ಮಾಡುವಾಗ ಫೋನ್‌ನಲ್ಲಿ ಯಾರೊಂದಿಗೋ ಜಗಳವಾಡುತ್ತಿದ್ದ ಮತ್ತು ಮದ್ಯದ ಅಮಲಿನಲ್ಲಿದ್ದನು ಎಂದು ವರದಿಯಾಗಿದೆ.

ಹಿರಿಯ ಪೊಲೀಸ್ ಅಧಿಕಾರಿ ಭವರ್‌ಲಾಲ್ ಬಿಷ್ಣೋಯ್ ಅವರನ್ನು ತಡೆದಾಗ ವಾಗ್ವಾದ ನಡೆಯಿತು. ಪೊಲೀಸರು ಚಲನ್ ನೀಡಲು ಮುಂದಾದಾಗ, ಚಾಲಕನು ಸ್ಥಳದಿಂದ ಓಡಿಹೋದನು, ರಾಂಗ್ ಸೈಡ್‌ನಿಂದ ಹೆಚ್ಚಿನ ವೇಗದಲ್ಲಿ ಹೋಗಿ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆಸಿದ್ದಾನೆ.

ಮತ್ತಷ್ಟು ಓದಿ: Tumakuru News: ಪ್ರತ್ಯೇಕ ಘಟನೆ: ತುಮಕೂರಿನಲ್ಲಿ 3 ಅಪಘಾತ, ಮೂವರು ಸಾವು

ಘಟನೆಯಲ್ಲಿ ವ್ಯಕ್ತಿ ಮತ್ತು ಭವರ್‌ಲಾಲ್ ಬಿಷ್ಣೋಯ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅಶೋಕ್ ಸಿಂಗ್ ಎಂಬ ಕಾನ್‌ಸ್ಟೆಬಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಪೊಲೀಸ್ ವಾಹನವೂ ಸಂಪೂರ್ಣ ಜಖಂಗೊಂಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us