ಇನ್‌ಸ್ಟಾಗ್ರಾಂ ಮೂಲಕ ಪರಿಚಯ ಮಾಡಿಕೊಂಡು *** ಸಹಕರಿಸುವಂತೆ ಸಂದೇಶ ಕಳಿಸಿದ್ದ ಕಾಮುಕನ ವಿರುದ್ಧ ದೂರು

ಬಾಲಕಿಗೆ ಅಶ್ಲೀಲ ಆಡಿಯೋ ಕಳಿಸ್ತಿದ್ದ ವ್ಯಕ್ತಿ ವಿರುದ್ಧ ಬಾಲಕಿಯ ಪೋಷಕರಿಂದ ಇ-ಮೇಲ್ ಮೂಲಕ ಬೆಂಗಳೂರು ದಕ್ಷಿಣ ವಿಭಾಗದ ಸಿಇಎನ್ ಠಾಣೆಗೆ ದೂರು ದಾಖಲಾಗಿದೆ. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ಇನ್‌ಸ್ಟಾಗ್ರಾಂ ಮೂಲಕ ಪರಿಚಯ ಮಾಡಿಕೊಂಡು *** ಸಹಕರಿಸುವಂತೆ ಸಂದೇಶ ಕಳಿಸಿದ್ದ ಕಾಮುಕನ ವಿರುದ್ಧ ದೂರು
ಇನ್‌ಸ್ಟಾಗ್ರಾಂ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Dec 21, 2020 | 12:12 PM

ಬೆಂಗಳೂರು: ಅನುಕೂಲ ಎಲ್ಲಿರುತ್ತೋ ಅಲ್ಲಿ ಅನಾನುಕೂಲ ಸಹ ಇದ್ದೇ ಇರುತ್ತೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಎಲ್ಲೇ ಮೀರಿ ಹೋಗುತ್ತಿವೆ. ಇನ್‌ಸ್ಟಾಗ್ರಾಂನಲ್ಲಿ ಬಾಲಕಿಗೆ ಅಶ್ಲೀಲ ಆಡಿಯೋ ಕಳಿಸ್ತಿದ್ದ ವ್ಯಕ್ತಿ ವಿರುದ್ಧ ಬಾಲಕಿಯ ಪೋಷಕರು ಇ-ಮೇಲ್ ಮೂಲಕ ದೂರು‌ ಸಲ್ಲಿಸಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ.

ಘಟನೆ ವಿವರ: ಆನ್‌ಲೈನ್ ಕ್ಲಾಸ್ ವೇಳೆ ಇನ್‌ಸ್ಟಾಗ್ರಾಂನಲ್ಲಿ ಖಾತೆ ಓಪನ್ ಮಾಡಿದ್ದ 13 ವರ್ಷದ ಸಂತ್ರಸ್ತೆಗೆ ಅಪರಿಚಿತ ವ್ಯಕ್ತಿಯ ಪರಿಚಯವಾಗುತ್ತೆ. ಇನ್‌ಸ್ಟಾಗ್ರಾಂನಲ್ಲಿ ಬಾಲಕಿಗೆ ಪ್ರತಿ ದಿನ ಚಾಟಿಂಗ್ ಮಾಡುತ್ತ ಆ ಅಪರಿಚಿತ ವ್ಯಕ್ತಿ ಆಪ್ತನಾಗಿದ್ದ. ಹೀಗೆ ಪರಿಚಯ ಮಾಡಿಕೊಂಡು ತನ್ನ ಅಶ್ಲೀಲ ಫೋಟೋ ಹಾಗೂ ವಿಡಿಯೋ ಕಳಿಸಿ ವಿಕೃತಿ ಮೆರೆಯಲು ಶುರು ಮಾಡಿದ್ದ.

ಅಷ್ಟಕ್ಕೆ ಸುಮ್ಮನಾಗದೆ ಬಾಲಕಿಗೂ ಅಶ್ಲೀಲ ಫೋಟೋ ಕಳಿಸುವಂತೆ ಒತ್ತಡ ಹಾಕಿದ್ದಾನೆ. ಇದರಿಂದ ಹೆದರಿದ ಬಾಲಕಿ ವ್ಯಕ್ತಿ ಕಳಿಸಿದ್ದ ಅಶ್ಲೀಲ ಫೋಟೋ ಡಿಲೀಟ್ ಮಾಡಿದ್ದಳು. ಇದಾದ ಬಳಿಕವೂ ನಿರಂತರವಾಗಿ ಆ ಅಪರಿಚಿತ ವ್ಯಕ್ತಿ ಸಂದೇಶ ಕಳುಹಿಸಿ ನಗ್ನ ಫೋಟೋ ಕಳಿಸುವಂತೆ ಬೆದರಿಕೆ ಹಾಕಿದ್ದಾನೆ.

ಬಳಿಕ ಬಾಲಕಿ ಆರೋಪಿಯ ಇನ್‌ಸ್ಟಾಗ್ರಾಂ ಖಾತೆ ಬಗ್ಗೆ ರಿಪೋರ್ಟ್ ಮಾಡಿ ಸುಮ್ಮನಾಗಿದ್ದಳು. ಇಷ್ಟೆಲ್ಲಾ ಆದ ಬಳಿಕವೂ ಅಪರಿಚಿತ ವ್ಯಕ್ತಿ ನಕಲಿ ಖಾತೆ ಸೃಷ್ಟಿಸಿ ಮತ್ತೆ ಮೆಸೇಜ್ ಮಾಡಲು ಶುರು ಮಾಡಿದ್ದ. ಲೈಂಗಿಕವಾಗಿ ಸಹಕರಿಸುವಂತೆ ಬಾಲಕಿಗೆ ಆಡಿಯೋ ಸಂದೇಶಗಳನ್ನು ಕಳುಹಿಸಿದ್ದ.

ಹೀಗಾಗಿ ಇ-ಮೇಲ್ ಮೂಲಕ ಬಾಲಕಿ ಪೋಷಕರು ಈ ಬಗ್ಗೆ ಬೆಂಗಳೂರು ದಕ್ಷಿಣ ವಿಭಾಗದ ಸಿಇಎನ್ (Cyber Crime, Economic Offences & Narcotics –CEN) ಠಾಣೆಗೆ ದೂರು ನೀಡಿದ್ದಾರೆ. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಈ ರೀತಿ ವಿಕೃತಿ ಮೆರೆಯುವವರಿಗೆ ಕಠಿಣ ಶಿಕ್ಷೆ ನೀಡಬೇಕಿದೆ.

Dating Appನಲ್ಲಿ ಟೈಂ ಪಾಸ್ ಮಾಡೊ ಯುವಕರೇ ಹುಷಾರ್! ಇಲ್ಲ ಅಂದ್ರೆ ಮಾನ ಮರ್ಯಾದೆ ಹರಾಜ್..

Published On - 11:32 am, Mon, 21 December 20

ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ