AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲವ್ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಿಯತಮೆ ಬೆಂಕಿ ಹಚ್ಚಿದ ಪ್ರಕರಣ: ಚಿಕಿತ್ಸೆ ಫಲಿಸದೆ ಕಾನ್​ಸ್ಟೇಬಲ್ ಸಾವು

ಎರಡನೇ ಲವ್ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಿಯಕರ ಕಾನ್​ಸ್ಟೇಬಲ್ ಮೇಲೆ ಹೋಮ್​ಗಾರ್ಡ್ ಆಗಿರುವ ಪ್ರಿಯತಮೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಘಟನೆಯಲ್ಲಿ ಗಂಭಿರವಾಗಿ ಗಾಯಗೊಂಡಿದ್ದ ಕಾನ್​ಸ್ಟೇಬಲ್ ಸಂಜಯ್ ಇದೀಗ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆಕಸ್ಮಿಕವಾಗಿ ಘಟನೆ ನಡೆದಿದೆ ಎಂದು ಹೋಮ್​ಗಾರ್ಡ್ ರಾಣಿ ಹೇಳಿದ್ದಾಳೆ. ಆದರೆ ರಾಣಿಯೇ ಸಂಜಯ್​ನನ್ನು ಕೊಲೆ ಮಾಡಿದ್ದಾಳೆ ಎಂದು ಮೃತನ ಸಂಬಂಧಿ ಆರೋಪಿಸಿದ್ದಾರೆ.

ಲವ್ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಿಯತಮೆ ಬೆಂಕಿ ಹಚ್ಚಿದ ಪ್ರಕರಣ: ಚಿಕಿತ್ಸೆ ಫಲಿಸದೆ ಕಾನ್​ಸ್ಟೇಬಲ್ ಸಾವು
ಎರಡನೇ ಲವ್ ಬಗ್ಗೆ ಪ್ರಶ್ನಿಸಿದ್ದಕ್ಕೆ ಬೆಂಕಿ ಹಚ್ಚಿದ ಪ್ರಿಯತಮೆ, ಗಂಭೀರವಾಗಿ ಗಾಯಗೊಂಡ ಕಾನ್​ಸ್ಟೇಬಲ್ ಸಾವು
Shivaprasad B
| Edited By: |

Updated on:Dec 21, 2023 | 11:44 AM

Share

ಬೆಂಗಳೂರು, ಡಿ.21: ಎರಡನೇ ಲವ್ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಿಯಕರ ಕಾನ್​ಸ್ಟೇಬಲ್ ಮೇಲೆ ಹೋಮ್​ಗಾರ್ಡ್ ಆಗಿರುವ ಪ್ರಿಯತಮೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿತ್ತು. ಘಟನೆಯಲ್ಲಿ ಗಂಭಿರವಾಗಿ ಗಾಯಗೊಂಡಿದ್ದ ಕಾನ್​ಸ್ಟೇಬಲ್ ಸಂಜಯ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಪುಟ್ಟೇನಹಳ್ಳಿ ಠಾಣಾ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಆಕಸ್ಮಿಕವಾಗಿ ಘಟನೆ ನಡೆದಿದೆ ಎಂದ ಪ್ರಿಯತಮೆ ರಾಣಿ

ಮನೆಗೆ ಬಂದು ಜಗಳ ಮಾಡಿಕೊಂಡ ಸಂಜಯ್​ ಮೇಲೆ ರಾಣಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಳು ಎಂದು ಆರೋಪಿಸಲಾಗಿದೆ. ಸಂಜಯ್ ಬಂಕ್​ಗೆ ತೆರಳಿ ಒಂದು ಲೀಟರ್ ಪೆಟ್ರೋಲ್ ತಂದಿದ್ದನು. ಪೆಟ್ರೋಲ್ ಹಾಕ್ತಿಯ ಹಾಕು ನೋಡೋಣ ಎಂದಿದ್ದನು. ಈ ವೇಳೆ ಸಂಜಯ್ ಹೊಟ್ಟೆ ಬೆನ್ನಿನ‌ ಮೇಲೆ ಪೆಟ್ರೋಲ್ ಸುರಿದಿದ್ದು, ನಂತರ ನೀರು ಹಾಕಿ ಬೆಂಕಿ ಆರಿಸಿ, ಸಂಜಯ್​ನನ್ನ ತನ್ನದೇ ಗಾಡಿಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಳು. ಪೊಲೀಸರ ತನಿಖೆ ವೇಳೆ ಆಕಸ್ಮಿಕವಾಗಿ ಘಟನೆ ನಡೆದಿದೆ ಎಂದು ರಾಣಿ ಹೇಳಿಕೆ ನೀಡಿದ್ದಾಳೆ.

ಬದುಕಲ್ಲ ಎಂದು ತಿಳಿಯುತ್ತಿದ್ದಂತೆ ತಾಯಿ ಜೊತೆ ವಿಷಯ ಹೇಳಿದ ಕಾನ್​ಸ್ಟೇಬಲ್

ಟಿವಿ9 ಜೊತೆ ಮಾತನಾಡಿದ ಮೃತ ಸಂಜಯ್ ಸಂಬಂಧಿಕ ಹರೀಶ್, ಬೆಂಗಳೂರಿನಲ್ಲಿ ಅವನೊಬ್ಬನೇ ಇದ್ದ. ಈ ರೀತಿ ತೊಂದರೆ ಆಗಿದೆ ಅಂತಾ ಗೊತ್ತಾಯ್ತು. ರಾಣಿ ಎಂಬಾಕೆಗೆ ಕಾಲ್ ಮಾಡಿದಾಗ ಬೆಂಕಿ ಹಚ್ಚಿಕೊಂಡಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾಗಿ ಹೇಳಿದ್ದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಪಿಂಚಣಿ ಹಣ ಪಡೆಯಲು ಪತಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತ್ನಿ

ಅಲ್ಲದೆ, ತಾನು ಉಳಿಯಲ್ಲ ಅಂತಾ ಗೊತ್ತಾದಾಗ ತಾಯಿಗೆ ಎಲ್ಲವನ್ನೂ ಸಂಜಯ್ ಹೇಳಿದ್ದಾನೆ. ರಾಣಿ ಅನ್ನೋಳು ಪೆಟ್ರೋಲ್ ಎರಚಿ ಜೀವ ತೆಗೆದಿದ್ದಾಳೆ. ನನ್ನ ಆತ್ಮಕ್ಕೆ ಶಾಂತಿ ಸಿಗಬೇಕು ಅಂದರೆ ಅವಳಿಗೆ ಶಿಕ್ಷೆ ಕೊಡಿಸಿ ಅಂತಾ ಹೇಳಿದ್ದಾನೆ. ಇವಳು ಗ್ಯಾಸ್​ನಿಂದ ಆಗಿದೆ ಅಂತ ನಾಟಕ ಮಾಡಿದ್ದಾಳೆ. ಆತ ಕೆಲಸ ಮಾಡುತ್ತಿದ್ದ ಠಾಣೆಯವರು ಬಂದಿಲ್ಲ. ಅವನ ಜೀವಕ್ಕೆ ಬೆಲೆನೇ ಇಲ್ವಾ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಏನಿದು ಪ್ರಕರಣ?

ಕಾನ್​ಸ್ಟೇಬಲ್ ಸಂಜಯ್ ಮತ್ತು ಹೋಂಗಾರ್ಡ್ ರಾಣಿ ಇಬ್ಬರೂ ಕೂಡ ಬಸವನಗುಡಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಇಬ್ಬರ ಮಧ್ಯೆ ಪ್ರೇಮ ಬೆಳೆದಿತ್ತು. ಮದುವೆಯಾಗಿದ್ದರೂ ಕಾನ್​​ಸ್ಟೇಬಲ್ ಜೊತೆ ಕೆಲವು ತಿಂಗಳಿಂದ ರಾಣಿ ಪ್ರೀತಿಸುತ್ತಿದ್ದಳು.

ಇತ್ತೀಚೆಗೆ ಸಂಜಯ್​ನನ್ನು ರಾಣಿ ನಿರ್ಲಕ್ಷ್ಯಿಸಲು ಆರಂಭಿಸಿದ್ದಾಳೆ. ಹೀಗಾಗಿ ಎರಡು ದಿನಗಳ ಹಿಂದೆ ಆಕೆ ಮನೆಗೆ ಹೋಗಿದ್ದಾಗ ಸಂಜಯ್ ಮತ್ತು ರಾಣಿ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆದಿತ್ತು. ಈ ವೇಳೆ ಮತ್ತೊಬ್ಬನೊಂದಿಗೆ ಪ್ರೀತಿಯಲ್ಲಿರುವ ವಿಚಾರವನ್ನು ಪ್ರಶ್ನಿಸಿದ್ದಕ್ಕೆ ಸಂಜಯ್​ಗೆ ರಾಣಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ಕೂಡಲೇ ಸಂಜಯ್​ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಘಟನೆ ಸಂಬಂಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:34 am, Thu, 21 December 23

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು