Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಪತ್ನಿಗೆ ವಿಚ್ಛೇದನ ನೀಡದೆ ಎರಡನೇ ಮದುವೆಗೆ ಮುಂದಾದ ವರ; ಮದುವೆ ಮಂಟಪದಲ್ಲೇ ಜಗಳ, ಕೇಸು ದಾಖಲು

ವಿಶಾಲ್ ಪವಾರ್ ಈಗಾಗಲೇ ಮದುವೆಯಾಗಿದ್ದು, ಒಬ್ಬ ಮಗನಿದ್ದಾನೆ. ವಿಶಾಲ್ ತನ್ನ ಮೊದಲ ಪತ್ನಿಗೆ ವಿಚ್ಛೇದನ ನೀಡದೆ ಎರಡನೇ ಮದುವೆಯಾಗುತ್ತಿದ್ದ. ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಮದುವೆ ಮಾಡಿಸಿ ಹೋಟೆಲ್‌ನಲ್ಲಿ ಮದುವೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಛತ್ರಪತಿ ಸಂಭಾಜಿ ನಗರದಲ್ಲಿ ವಾಸವಾಗಿರುವ ಪತ್ನಿಗೆ ಪತಿಯ ಎರಡನೇ ಮದುವೆ ವಿಷಯ ತಿಳಿಯಿತು

ಮೊದಲ ಪತ್ನಿಗೆ ವಿಚ್ಛೇದನ ನೀಡದೆ ಎರಡನೇ ಮದುವೆಗೆ ಮುಂದಾದ ವರ; ಮದುವೆ ಮಂಟಪದಲ್ಲೇ ಜಗಳ, ಕೇಸು ದಾಖಲು
ಮದುವೆ Image Credit source: Tv9 Marathi
Follow us
ರಶ್ಮಿ ಕಲ್ಲಕಟ್ಟ
|

Updated on: Aug 23, 2023 | 5:02 PM

ಅಹಮದ್‌ನಗರ ಆಗಸ್ಟ್ 23: ಅಹಮದ್‌ನಗರದಲ್ಲಿರುವ (Ahmednagar) ಕುಟುಂಬವೊಂದು ಮದುವೆಯ (Wedding) ಎಲ್ಲ ಸಿದ್ಧತೆ ನಡೆಸಿತ್ತು. ಕಲ್ಯಾಣ ಮಂಟಪ ಸಿಂಗಾರಗೊಂಡಿದ್ದ ವಧು-ವರರು ಇನ್ನೇನು ಹಾರ ಹಾಕಿಕೊಳ್ಳಲು ಮುಂದಾದಾಗ ಏಕಾಏಕಿ ಮದುಮಗನ ಮೊದಲ ಪತ್ನಿ ಮಂಟಪದಲ್ಲಿ ಕಾಣಿಸಿಕೊಂಡಿದ್ದಾಳೆ. ಇದಾದ ಬಳಿಕ ವರ ನೇರವಾಗಿ ಪೊಲೀಸ್ ಠಾಣೆಗೆ ತೆರಳಿದ್ದಾರೆ. ಈ ಸಂಬಂಧ ವರನ ವಿರುದ್ಧ ತೋಫಖಾನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ವರನ ಹೆಸರು ವಿಶಾಲ್ ಪವಾರ್. ವಿಶಾಲ್ ತನ್ನ ಮೊದಲ ಪತ್ನಿಗೆ ವಿಚ್ಛೇದನ ನೀಡದೆ ಎರಡನೇ ಮದುವೆಯಾಗುತ್ತಿದ್ದ.

ವಿಶಾಲ್ ಪವಾರ್ ಈಗಾಗಲೇ ಮದುವೆಯಾಗಿದ್ದು, ಒಬ್ಬ ಮಗನಿದ್ದಾನೆ. ವಿಶಾಲ್ ತನ್ನ ಮೊದಲ ಪತ್ನಿಗೆ ವಿಚ್ಛೇದನ ನೀಡದೆ ಎರಡನೇ ಮದುವೆಯಾಗುತ್ತಿದ್ದ. ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಮದುವೆ ಮಾಡಿಸಿ ಹೋಟೆಲ್‌ನಲ್ಲಿ ಮದುವೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಛತ್ರಪತಿ ಸಂಭಾಜಿ ನಗರದಲ್ಲಿ ವಾಸವಾಗಿರುವ ಪತ್ನಿಗೆ ಪತಿಯ ಎರಡನೇ ಮದುವೆ ವಿಷಯ ತಿಳಿಯಿತು. ಹೆಂಡತಿ ತಕ್ಷಣ ತನ್ನ ತಂದೆ ತಾಯಿ ಮತ್ತು ಇತರ ಸಂಬಂಧಿಕರೊಂದಿಗೆ ಮದುವೆ ಮಂಟಪಕ್ಕೆ ತಲುಪಿದ್ದಾರೆ.

ಮದುವೆ ನಡೆಯುವ ಸ್ಥಳ ಪತ್ತೆ ಮಾಡಿದ ಮೊದಲ ಪತ್ನಿ, ಅಲ್ಲಿಗೆ ಬಂದು ಜಗಳವಾಡಿದ್ದಾಳೆ. ಈ ದಿಢೀರ್ ಘಟನೆಯಿಂದ ವಧುವಿನ ಸಂಬಂಧಿಕರೂ ಗೊಂದಲಕ್ಕೀಡಾಗಿದ್ದರು. ಮದುಮಗನಿಂದ ಯಾರೋ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಅಲ್ಲಿಗೆ ಬಂದು ವರನನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ: ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ, ದಂಪತಿ ಮಧ್ಯೆ ಜಗಳ: ಸಾವು

ಮೊದಲ ಪತ್ನಿ ದೂರಿನ ಮೇರೆಗೆ ತೋಫ್ಖಾನಾ ಪೊಲೀಸ್ ಠಾಣೆಯಲ್ಲಿ ವಿಶಾಲ್ ಪವಾರ್ ವಿರುದ್ಧ ಸೆಕ್ಷನ್ 494 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ವಿಶಾಲ್ ಜಲ್ನಾ ಜಿಲ್ಲೆಯ ನಿವಾಸಿಯಾಗಿದ್ದು, ಆತನ ಮದುವೆಯಾಗಲಿದ್ದ ವಧು ಛತ್ರಪತಿ ಸಂಭಾಜಿ ನಗರದ ನಿವಾಸಿಯಾಗಿದ್ದಾರೆ. ಆದರೆ ಎರಡನೇ ಮದುವೆಯನ್ನು ಮೊದಲ ಪತ್ನಿಯಿಂದ ಮರೆಮಾಚಲು ಎರಡೂ ಕುಟುಂಬದವರು ನಗರದಲ್ಲಿ ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಅಂತಿಮವಾಗಿ ಅವರ ಯೋಜನೆ ವಿಫಲವಾಯಿತು.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!
ಹನಿಟ್ರ್ಯಾಪ್ ಕೇಸ್ ಉನ್ನತ ಮಟ್ಟದ ತನಿಖೆಗೆ: ಸದನದಲ್ಲೇ ಘೋಷಿಸಿದ ಗೃಹ ಸಚಿವ
ಹನಿಟ್ರ್ಯಾಪ್ ಕೇಸ್ ಉನ್ನತ ಮಟ್ಟದ ತನಿಖೆಗೆ: ಸದನದಲ್ಲೇ ಘೋಷಿಸಿದ ಗೃಹ ಸಚಿವ
ಯಾರು ಮಾಡಿಸುತ್ತಿದ್ದಾರೆ ಅಂತ ಹೇಳಿದರೆ ರಾಜಕೀಯ ಆರೋಪವಾಗುತ್ತದೆ: ಸಚಿವ
ಯಾರು ಮಾಡಿಸುತ್ತಿದ್ದಾರೆ ಅಂತ ಹೇಳಿದರೆ ರಾಜಕೀಯ ಆರೋಪವಾಗುತ್ತದೆ: ಸಚಿವ