ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್‌ ದಂಪತಿಯನ್ನು ಬಂಧಿಸಿದ ಸಿಬಿಐ

ಖಾಸಗಿ ಕಂಪನಿಗಳಿಗೆ ಸಾಲ ಮಂಜೂರಾತಿಯಲ್ಲಿ ಅಕ್ರಮ ಮತ್ತು ವಂಚನೆ ಆರೋಪದ ಮೇಲೆ ಐಸಿಐಸಿ ಬ್ಯಾಂಕ್​​ನ ಮಾಜಿ ಮುಖ್ಯ ಕಾರ್ಯನಿರ್ವಹಣಧಿಕಾರಿ ಚಂದಾ ಕೊಚ್ಚರ್ ಹಾಗೂ ಅವರ ಗಂಡನನ್ನು ಸಿಬಿಐ ಅರೆಸ್ಟ್ ಮಾಡಿದೆ.

ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್‌ ದಂಪತಿಯನ್ನು ಬಂಧಿಸಿದ ಸಿಬಿಐ
ಚಂದಾ ಕೊಚ್ಚರ್
Updated By: ರಮೇಶ್ ಬಿ. ಜವಳಗೇರಾ

Updated on: Dec 23, 2022 | 11:11 PM

ನವದೆಹಲಿ: ಐಸಿಐಸಿ ಬ್ಯಾಂಕ್​​ನ ಮಾಜಿ ಮುಖ್ಯ ಕಾರ್ಯನಿರ್ವಹಣಧಿಕಾರಿ (CEO) ಮತ್ತು ವ್ಯವಸ್ಥಾಪಕ ನಿರ್ದೆಶಕಿ ಚಂದಾ ಕೊಚ್ಚರ್ (Chanda Kochha) ಹಾಗೂ ಅವರ ಗಂಡ ದೀಪಕ್ ಕೊಚ್ಚರ್​ ಅವರನ್ನು ಸಿಬಿಐ ಬಂಧಿಸಿದೆ. ಸಾಲ ಮಂಜೂರಾತಿಯಲ್ಲಿ ಅಕ್ರಮ, ವಂಚನೆ ಪ್ರಕರಣದಲ್ಲಿ ಚಂದಾ ಕೊಚ್ಚರ್ ದಂಪತಿಯನ್ನು ಇಂದು(ಡಿಸೆಂಬರ್ 23) ಸಿಬಿಐ (CBI)ಅರೆಸ್ಟ್ ಮಾಡಿದೆ.

ಚಂದಾ ಕೊಚ್ಚರ್ ಖಾಸಗಿ ಕಂಪನಿಗಳಿಗೆ ಸಾಲ ಮಂಜೂರಾತಿಯಲ್ಲಿ ಅಕ್ರಮ ಮತ್ತು ವಂಚನೆ ಆರೋಪದ ಮೇಲೆ ಐಸಿಐಸಿಐ ಬ್ಯಾಂಕ್‌ಗೆ ವಂಚನೆ ಮಾಡುವ ದೃಷ್ಟಿಯಿಂದ ಇತರರ ಜೊತೆ ಸೇರಿಕೊಂಡು ಖಾಸಗಿ ಕಂಪನಿಗಳಿಗೆ ಸಾಲ ಮಂಜೂರಾತಿ ಮಾಡಿದ್ದಾರೆ ಎನ್ನುವ ಆರೋಪ ಚಂದಾ ಕೊಚ್ಚರ್ ದಂಪತಿ ಮೇಲಿದೆ.

2012 ರಲ್ಲಿ ಐಸಿಐಸಿಐ ಬ್ಯಾಂಕ್‌ನಿಂದ ವಿಡಿಯೋಕಾನ್ ಗ್ರೂಪ್ 3,250 ಕೋಟಿ ರೂಪಾಯಿ ಸಾಲ ಪಡೆದು, ಕೆಲ ತಿಂಗಳ ನಂತರ ವಿಡಿಯೋಕಾನ್ ಪ್ರವರ್ತಕ ವೇಣುಗೋಪಾಲ್ ಧೂತ್ ಅವರು ನ್ಯೂಪವರ್‌ನಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಪ್ರಕರಣ ತನಿಖೆ ಪ್ರಾರಂಭವಾದ ನಂತರ 2018ರಲ್ಲಿ ಚಂದಾ ಅವರು ತಮ್ಮ ಸ್ಥಾನದಿಂದ ಕೆಳಗಿಳಿಯಬೇಕಾಯಿತು.


ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಗೆ ಸಂಬಂಧಿಸಿದ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಚಂದಾ ಕೊಚ್ಚರ್, ಅವರ ಪತಿ ಮತ್ತು ವಿಡಿಯೋಕಾನ್ ಗ್ರೂಪ್‌ನ ವೇಣುಗೋಪಾಲ್ ಧೂತ್, ನ್ಯೂಪವರ್ ರಿನ್ಯೂವಬಲ್ಸ್, ಸುಪ್ರೀಂ ಎನರ್ಜಿ, ವಿಡಿಯೋಕಾನ್ ಇಂಟರ್‌ನ್ಯಾಶನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ