AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕ ಬಡ್ಡಿ ವಸೂಲಿ ಮಾಡುತ್ತಿದ್ದ ಕಪಾಲಿ ಮೋಹನ್ ಆಪ್ತ ಸಿಸಿಬಿ ಬಲೆಗೆ

ಅಕ್ರಮ ಹಣ ವರ್ಗಾವಣೆ ಮತ್ತು ಅಧಿಕ ಬಡ್ಡಿ ವಸೂಲಿ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಾಗರಾಜ ಶೆಟ್ಟಿ ಬಂಧಿತ ಆರೋಪಿ.

ಅಧಿಕ ಬಡ್ಡಿ ವಸೂಲಿ ಮಾಡುತ್ತಿದ್ದ ಕಪಾಲಿ ಮೋಹನ್ ಆಪ್ತ ಸಿಸಿಬಿ ಬಲೆಗೆ
ನಾಗರಾಜ ಶೆಟ್ಟಿ
ಆಯೇಷಾ ಬಾನು
|

Updated on:Dec 06, 2020 | 11:13 AM

Share

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಮತ್ತು ಅಧಿಕ ಬಡ್ಡಿ ವಸೂಲಿ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಾಗರಾಜ ಶೆಟ್ಟಿ ಬಂಧಿತ ಆರೋಪಿ.

ಅಧಿಕ ಬಡ್ಡಿಗಾಗಿ ಕಿರುಕುಳ ನೀಡುತ್ತಿರುವುದಾಗಿ ನಾಗರಾಜ ಶೆಟ್ಟಿ ವಿರುದ್ಧ ಸಿಸಿಬಿಗೆ ಹಲವು ದೂರುಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ವೈಯಾಲಿಕಾವಲ್‌ನ ನಾಗರಾಜ ಶೆಟ್ಟಿಯನ್ನು ಬಂಧಿಸಿದ್ದಾರೆ. ಹಾಗೂ ಸಾಲ ಪಡೆದವರಿಂದ ಪಡೆದಿದ್ದ ದಾಖಲೆಗಳನ್ನೂ ವಶಕ್ಕೆ ಪಡೆಯಲಾಗಿದೆ. 22 ಲಕ್ಷ ನಗದು, 164 ಚೆಕ್, 84 ಪ್ರಾಮಿಸರಿ ನೋಟ್ ಸೇರಿದಂತೆ ಆಸ್ತಿ ದಾಖಲೆಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಪಾಲಿ ಮೋಹನ್ ಆಪ್ತ ನಾಗರಾಜ ಶೆಟ್ಟಿ: ಮೂಲತಃ ಶಿವಮೊಗ್ಗದ ನಾಗರಾಜ ಶೆಟ್ಟಿ ವೈಯಾಲಿಕಾವಲ್​ನಲ್ಲಿ ಬಾಲಾಜಿ ಫೈನಾನ್ಸ್ ನಡೆಸುತಿದ್ದ. ಈತ ಮೃತ ಕಪಾಲಿ ಮೋಹನ್ ಆಪ್ತ. ವೈಯಾಲಿಕಾವಲ್, ಮಲ್ಲೇಶ್ವರಂ ಸುತ್ತಮುತ್ತಲಿನ ಉದ್ಯಮಿಗಳು ಮತ್ತು ವ್ಯಾಪಾರಸ್ಥರಿಗೆ ಸಾಲ ನೀಡಿದ್ದ. ದಿನದ ಲೆಕ್ಕದಲ್ಲಿ ಹೆಚ್ಚು ಬಡ್ಡಿ ವಸೂಲಿ ಮಾಡುತಿದ್ದ. ಒಂದು ವರ್ಷಕ್ಕೆ ಪಡೆದ ಸಾಲಕ್ಕೆ ಸುಮಾರು 60% ರಷ್ಟು ಬಡ್ಡಿ ಪಡೆಯುತಿದ್ದ. ಅಲ್ಲದೆ ಕನ್ನಡದ ಕೆಲ ಸಿನಿಮಾದಲ್ಲೂ ನಾಗರಾಜದ ಶೆಟ್ಟಿ ನಟಿಸಿದ್ದಾನೆ. ಇನ್ನು ಬಡ್ಡಿ ದಂಧೆಕೋರರ ವಿರುದ್ಧ ಸಿಸಿಬಿ ಕಾರ್ಯಾಚರಣೆ ನಡೆಸುತ್ತಿದ್ದು ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದೆ. ಈತನ ಬಗ್ಗೆ ಮತ್ತಷ್ಟು ಮಾಹಿತಿ ಹೊರ ಬೀಳುವ ಸಾಧ್ಯತೆ ಇದೆ.

Published On - 9:07 am, Sun, 6 December 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ