CCB List ನಲ್ಲಿ ಮುಂದಿನ ಹೆಸರುಗಳು ಆ ಹಿರಿಯ ಸ್ಟಾರ್ ನಟ ಮತ್ತು ಸೋದರರದ್ದು!

ಬೆಂಗಳೂರು: ಸ್ಯಾಂಡಲ್​ವುಡ್​ನಲ್ಲಿ ನಟ ನಟಿಯರ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸಿಸಿಬಿ ಇನ್ನೂ ಕೆಲವರ ಮೇಲೆ ಕಣ್ಣು ನೆಟ್ಟಿದೆ. ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸ್ಟಾರ್ ನಟ ಮತ್ತು ಸಹೋದರರು ಭಾಗಿಯಾಗಿರುವ ಬಗ್ಗೆ ಸಿಸಿಬಿ ಅಧಿಕಾರಿಗಳಿಗೆ ಮಹತ್ವದ ಸುಳಿವು ಸಿಕ್ಕಿದ್ದು, ಆ ಇಬ್ಬರನ್ನು ವಿಚಾರಣೆಗೆ ಕರೆಯುವ ಸಾಧ್ಯತೆಗಳಿವೆ. ಸ್ಯಾಂಡಲ್​ವುಡ್​ನ ಫ್ಯಾಮಿಲಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಈ ಸಹೋದರ ನಟರ ಪೈಕಿ 2017ರ ಗಾಂಜಾ ಪ್ರಕರಣ ಹಾಗೂ ಅಪಘಾತ ಸಂದರ್ಭದಲ್ಲಿ ಇದೇ ಕುಟುಂಬದ ಒಬ್ಬರನ್ನ ಜಯನಗರ ಪೊಲೀಸರು ವಿಚಾರಣೆ ನಡೆಸಿ ಹೇಳಿಕೆ ಪಡೆದಿದ್ದರು. […]

CCB List ನಲ್ಲಿ ಮುಂದಿನ ಹೆಸರುಗಳು ಆ ಹಿರಿಯ ಸ್ಟಾರ್ ನಟ ಮತ್ತು ಸೋದರರದ್ದು!
ಸಾಧು ಶ್ರೀನಾಥ್​

Updated on: Sep 17, 2020 | 10:05 AM

ಬೆಂಗಳೂರು: ಸ್ಯಾಂಡಲ್​ವುಡ್​ನಲ್ಲಿ ನಟ ನಟಿಯರ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸಿಸಿಬಿ ಇನ್ನೂ ಕೆಲವರ ಮೇಲೆ ಕಣ್ಣು ನೆಟ್ಟಿದೆ.

ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸ್ಟಾರ್ ನಟ ಮತ್ತು ಸಹೋದರರು ಭಾಗಿಯಾಗಿರುವ ಬಗ್ಗೆ ಸಿಸಿಬಿ ಅಧಿಕಾರಿಗಳಿಗೆ ಮಹತ್ವದ ಸುಳಿವು ಸಿಕ್ಕಿದ್ದು, ಆ ಇಬ್ಬರನ್ನು ವಿಚಾರಣೆಗೆ ಕರೆಯುವ ಸಾಧ್ಯತೆಗಳಿವೆ. ಸ್ಯಾಂಡಲ್​ವುಡ್​ನ ಫ್ಯಾಮಿಲಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಈ ಸಹೋದರ ನಟರ ಪೈಕಿ 2017ರ ಗಾಂಜಾ ಪ್ರಕರಣ ಹಾಗೂ ಅಪಘಾತ ಸಂದರ್ಭದಲ್ಲಿ ಇದೇ ಕುಟುಂಬದ ಒಬ್ಬರನ್ನ ಜಯನಗರ ಪೊಲೀಸರು ವಿಚಾರಣೆ ನಡೆಸಿ ಹೇಳಿಕೆ ಪಡೆದಿದ್ದರು.

ಆತನೂ ಕೂಡ 3 ದಶಕಗಳಿಂದ ಸ್ಯಾಂಡಲ್​ವುಡ್​ನಲ್ಲಿ ನಟನೆ ಮಾಡಿರುವವರೇ!
ಅಂದು ಸಾಕ್ಷಾಧಾರಗಳ ಕೊರತೆಯಿಂದ ಬಿಟ್ಟು ಕಳುಹಿಸಿದ್ದರು. ನಟರ ತಂದೆಯೂ ಕೂಡ ಮೂರು ದಶಕಗಳಿಂದ ಸ್ಯಾಂಡಲ್​ವುಡ್​ನಲ್ಲಿ ನಟನೆ ಮಾಡಿರುವವರೇ! ಈಗ ಈ ನಂಟಿನಲ್ಲಿ ಸಹೋದರರ ಹೆಸರು ಕೂಡ ಪ್ರಮುಖವಾಗಿ ಕೇಳಿಬಂದಿದೆ. ಹಾಗಾಗಿ ಸಿಸಿಬಿ ಪೊಲೀಸರಿಂದ ಆ ಸ್ಟಾರ್ ನಟ ಹಾಗೂ ಸಹೋದರನಿಗೂ ನೋಟಿಸ್ ನೀಡುವ ಸಾಧ್ಯತೆಯಿದೆ.

ಈ ಇಬ್ಬರು ಸಹೋದರರು ನೈಟ್ ಪಾರ್ಟಿಯಲ್ಲಿ ಉದ್ಯಮಿಗಳು ಮತ್ತು ರಾಜಕಾರಣಿಗಳ ಮಕ್ಕಳ ಜೊತೆ ಡ್ರಗ್ಸ್ ಸೇವನೆ ಮಾಡಿದ್ದಾರೆ ಎಂಬ ಆರೋಪ ಬಲವಾಗಿ ಕೇಳಿಬಂದಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us