AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ಕಾರ್ಯಾಚರಣೆ: ಬೆಂಗಳೂರಿನಲ್ಲಿ 1.45 ಕೋಟಿ ಮೌಲ್ಯದ ನಿಕೋಟಿನ್​ ಜಪ್ತಿ, 9 ಜನರ ಬಂಧನ

ಬೆಂಗಳೂರಿನಲ್ಲಿ ಡ್ರಗ್ಸ್​ ಪೆಡ್ಲರ್​ಗಳ ಹಾವಳಿ ಹೆಚ್ಚಾಗಿದೆ. ಅಮಾಯಕ ಯುವಕ, ಯುವತಿಯರನ್ನೇ ಟಾರ್ಗೆಟ್​ ಮಾಡಿಕೊಂಡು ಡ್ರಗ್ಸ್​ ಮಾರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಡ್ರಗ್ಸ್​ ಪೆಡ್ಲರ್​​ಗಳ ಮೇಲೆ ಕಣ್ಣಿಟ್ಟಿದ್ದು, ಆರೋಪಿಗಳ ಹೆಡೆಮುರಿ ಕಟ್ಟುತ್ತಿದ್ದಾರೆ. ಅದರಂತೆ ಇದೀಗ ಸಿಸಿಬಿ ಪೊಲೀಸರು 1.45 ಕೋಟಿ ರೂ. ಮೌಲ್ಯದ ನಿಷೇಧಿತ ಹುಕ್ಕಾ ಮತ್ತು ನಿಕೋಟಿನ್​ ಉತ್ಪನ್ನವನ್ನು ವಶಪಡಿಸಿಕೊಂಡಿದ್ದಾರೆ.

ಸಿಸಿಬಿ ಕಾರ್ಯಾಚರಣೆ: ಬೆಂಗಳೂರಿನಲ್ಲಿ 1.45 ಕೋಟಿ ಮೌಲ್ಯದ ನಿಕೋಟಿನ್​ ಜಪ್ತಿ, 9 ಜನರ ಬಂಧನ
ಸಿಸಿಬಿ
ರಾಚಪ್ಪಾಜಿ ನಾಯ್ಕ್
| Edited By: ವಿವೇಕ ಬಿರಾದಾರ|

Updated on: Feb 13, 2024 | 2:58 PM

Share

ಬೆಂಗಳೂರು, ಫೆಬ್ರವರಿ 13: ಬೆಂಗಳೂರು ನಗರ ಪೊಲೀಸರು (Bengaluru City Police) ಡ್ರಗ್ಸ್​ ಪೆಡ್ಲರ್​​ಗಳ ವಿರುದ್ಧ ಸಮರ ಸಾರಿದ್ದಾರೆ. ಡ್ರಗ್ಸ್​ (Drugs)​ ಮುಕ್ತ ನಗರವನ್ನಾಗಿ ಮಾಡಲು ಪಣ ತೊಟ್ಟಿದ್ದಾರೆ. ನಗರದ ಚಾಮರಾಜಪೇಟೆ, ಮಹದೇವಪುರ, ರಾಮಮೂರ್ತಿನಗರದಲ್ಲಿ ಸಂಗ್ರಹಿಸಿದ್ದ 1.45 ಕೋಟಿ ರೂ. ಮೌಲ್ಯದ ನಿಷೇಧಿತ ಹುಕ್ಕಾ, ನಿಕೋಟಿನ್​ ಉತ್ಪನ್ನವನ್ನು ಸಿಸಿಬಿ ಮಹಿಳಾ ಸಂರಕ್ಷಣಾ ದಳ ವಶಪಡಿಸಿಕೊಂಡಿದೆ. ಮತ್ತು ಅಕ್ರಮವಾಗಿ ನಿಕೋಟಿನ್​​ ಉತ್ಪನ್ನ ಮಾರುತ್ತಿದ್ದ ಒಂಬತ್ತು ಜನರನ್ನು ಬಂಧಿಸಿದೆ. ​​ಬಂಧಿತರಿಂದ 1.10 ಲಕ್ಷ ನಗದು, ಟಾಟಾ ಏಸ್, 11 ಮೊಬೈಲ್​ ವಶಪಡಿಸಿಕೊಳ್ಳಲಾಗಿದೆ.

1 ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ಜಪ್ತಿ

ಕಳೆದ ತಿಂಗಳ ಅಂತ್ಯದಲ್ಲಿ ಸಿಸಿಬಿ ಅಧಿಕಾರಿಗಳು ನಗರದಲ್ಲಿ ಒಂದು ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಂಡಿದ್ದು, ಏಳು ಜನ ಡ್ರಗ್ಸ್ ಪೆಡ್ಲರ್​ಗಳನ್ನು ಬಂಧಿಸಿದ್ದರು. ಪುಲಿಕೇಶಿನಗರ, ಬಾಣಸವಾಡಿ, ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿ ಸೇರಿದಂತೆ ನಗರದ ಹಲವೆಡೆ ಆರೋಪಿಗಳು ಡ್ರಗ್ಸ್​​ ಮಾರುತ್ತಿದ್ದರು. 219 ಎಕ್ಸ್​​​​ಟೆಸಿ ಪಿಲ್ಸ್​​​, 505 ಗ್ರಾಂ ಎಂಡಿಎಂಎ ಕ್ರಿಸ್ಟಲ್​​​, 130 ಗ್ರಾಂ ತೂಕದ ಚರಸ್, ಕೊಕೇನ್​​ ಒಟ್ಟು 1 ಕೋಟಿ 52 ಲಕ್ಷದ 50 ಸಾವಿರ ಮೌಲ್ಯದ ಡ್ರಗ್ಸ್​​​ ವಶಪಡಿಸಿಕೊಂಡಿದ್ದರು.

21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ಹೊಸ ವರ್ಷಕ್ಕೆಂದು ಮಾರಾಟಕ್ಕೆ 21 ಕೋಟಿ ಮೌಲ್ಯದ ಡ್ರಗ್ಸ್​​ ತಂದಿದ್ದ​ ಆಫ್ರಿಕಾ ಮೂಲದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಲಿಯೋನಾರ್ಡ್ ಓಕ್ವುಡಿಲಿ ಬಂಧಿತ ಆರೋಪಿ. ಬಂಧಿತನಿಂದ 21 ಕೋಟಿ ಮೌಲ್ಯದ 16 ಕೆಜಿ ಎಂಡಿಎಂಎ, 500 ಗ್ರಾಂ ಕೊಕೆನ್ ಜಪ್ತಿ ಮಾಡಲಾಗಿತ್ತು.

ಇದನ್ನೂ ಓದಿ: ವಶಪಡಿಸಿಕೊಂಡ ಡ್ರಗ್ಸ್​, ಗಾಂಜಾವನ್ನ ಪೋಲೀಸರು ಏನ್ಮಾಡ್ತಾರೆ! ಇಲ್ಲಿದೆ ವಿವರ

ಬ್ಯುಸಿನೆಸ್ ವೀಸಾ ಪಡೆದುಕೊಂದು ಆರೋಪಿ ಲಿಯೋನಾರ್ಡ್ ಬೆಂಗಳೂರಿಗೆ ಬಂದು ರಾಮಮೂರ್ತಿನಗರದಲ್ಲಿ ನೆಲೆಸಿದ್ದನು. ಈ ಹೊಸ ವರ್ಷಕ್ಕೆ ಮತ್ತೇರಿಸಲು ಅಪಾರ ಪ್ರಮಾಣದ ಡ್ರಗ್ಸ್​ ತಂದಿದ್ದನು. ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ಡ್ರಗ್ಸ್ ವಶಕ್ಕೆ ಪಡೆದಿದ್ದರು. ಆರೋಪಿಯು ಬೆಡ್​ಶೀಟ್​​ ಕವರ್​​, ಸೋಪ್​​ ಬಾಕ್ಸ್​​​ ಹಾಗೂ ಚಾಕೊಲೇಟ್​ ಬಾಕ್ಸ್​ನಲ್ಲಿ ಡ್ರಗ್ಸ್​ ಸಾಗಾಟ ಮಾಡುತ್ತಿದ್ದನು. ಹೊಸ ವರ್ಷಕ್ಕೆ ರೇವ್ ಪಾರ್ಟಿಗೆ ಡ್ರಗ್ಸ್ ಸಾಗಿಸಲು ಮುಂದಾಗಿದ್ದ ವೇಳೆ ಆರೋಪಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದನು. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ರಾಚಪ್ಪಾಜಿ ನಾಯ್ಕ್
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಧನುಷ್‌ಗೆ ಮೀಟರ್ ಇಲ್ಲ; ಸೌಂದರ್ಯಾ ಮಾತಿಗೆ ಹೊತ್ತಿ ಉರಿದ ಮನೆ
ಧನುಷ್‌ಗೆ ಮೀಟರ್ ಇಲ್ಲ; ಸೌಂದರ್ಯಾ ಮಾತಿಗೆ ಹೊತ್ತಿ ಉರಿದ ಮನೆ
ಜಿಲ್ಲೆ ಜಿಲ್ಲೆಯಲ್ಲೂ ಕಬ್ಬು ಬೆಳೆಗಾರರ ಕಿಚ್ಚು: ರಾಜ್ಯಾದ್ಯಂತ ಹೋರಾಟ
ಜಿಲ್ಲೆ ಜಿಲ್ಲೆಯಲ್ಲೂ ಕಬ್ಬು ಬೆಳೆಗಾರರ ಕಿಚ್ಚು: ರಾಜ್ಯಾದ್ಯಂತ ಹೋರಾಟ
ಸರ್ದಾರ್ ವಲ್ಲಭಭಾಯಿ ಪಟೇಲ್ ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪ ನಮನ
ಸರ್ದಾರ್ ವಲ್ಲಭಭಾಯಿ ಪಟೇಲ್ ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪ ನಮನ
ಗುಜರಾತ್‌ನಲ್ಲಿ 400 ಕೋಟಿಗೂ ಅಧಿಕ ವೆಚ್ಚದ ಯೋಜನೆಗಳಿಗೆ ಮೋದಿ ಚಾಲನೆ
ಗುಜರಾತ್‌ನಲ್ಲಿ 400 ಕೋಟಿಗೂ ಅಧಿಕ ವೆಚ್ಚದ ಯೋಜನೆಗಳಿಗೆ ಮೋದಿ ಚಾಲನೆ
ದಾಖಲೆ ಇಲ್ಲದ ಜಮೀನಿಗೆ ಇ-ಸ್ವತ್ತು: ಗ್ರಾಮೀಣ ಭಾಗದ ಜನರಿಗೆ ಗುಡ್​ ನ್ಯೂಸ್
ದಾಖಲೆ ಇಲ್ಲದ ಜಮೀನಿಗೆ ಇ-ಸ್ವತ್ತು: ಗ್ರಾಮೀಣ ಭಾಗದ ಜನರಿಗೆ ಗುಡ್​ ನ್ಯೂಸ್
ಬೆನ್ನಹಿಂದೆ ಚಾಕು ಹಾಕಿದ ಯಶಸ್; ಸುದೀಪ್ ಎದುರೇ ಎದ್ದು ನಡೆದ ಸೌಂದರ್ಯಾ
ಬೆನ್ನಹಿಂದೆ ಚಾಕು ಹಾಕಿದ ಯಶಸ್; ಸುದೀಪ್ ಎದುರೇ ಎದ್ದು ನಡೆದ ಸೌಂದರ್ಯಾ
ನದಿ ತಿರುವು ವಿರೋಧಿಸಿ ಸಿಎಂ, ಪ್ರಧಾನಿಗೆ ಪತ್ರ ಬರೆದ ಶಿರಸಿಯ ಶಾಲಾ ಮಕ್ಕಳು
ನದಿ ತಿರುವು ವಿರೋಧಿಸಿ ಸಿಎಂ, ಪ್ರಧಾನಿಗೆ ಪತ್ರ ಬರೆದ ಶಿರಸಿಯ ಶಾಲಾ ಮಕ್ಕಳು
TV9 ಬಿಗ್ ಇಂಪ್ಯಾಕ್ಟ್;ಸೋರುತ್ತಿದ್ದ ಸರ್ಕಾರಿ ಶಾಲೆಗೆ ಬಂತು ಹೊಸ ಮೇಲ್ಛಾವಣಿ
TV9 ಬಿಗ್ ಇಂಪ್ಯಾಕ್ಟ್;ಸೋರುತ್ತಿದ್ದ ಸರ್ಕಾರಿ ಶಾಲೆಗೆ ಬಂತು ಹೊಸ ಮೇಲ್ಛಾವಣಿ
ಜ್ಞಾನಭಾರತಿ ವಿವಿ ಬಳಿ ಸಿಕ್ಕಿದ್ದು ಫೇಕ್​ ಬಾಂಬ್​! ಖಾಲಿ ಪೈಪ್ ಪತ್ತೆ
ಜ್ಞಾನಭಾರತಿ ವಿವಿ ಬಳಿ ಸಿಕ್ಕಿದ್ದು ಫೇಕ್​ ಬಾಂಬ್​! ಖಾಲಿ ಪೈಪ್ ಪತ್ತೆ
ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಅನ್ಯಾಯ; ಕರವೇ ನಾರಾಯಣ ಗೌಡ ಹೇಳಿದ್ದೇನು?
ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಅನ್ಯಾಯ; ಕರವೇ ನಾರಾಯಣ ಗೌಡ ಹೇಳಿದ್ದೇನು?