ಬೆಂಗಳೂರು, ಫೆಬ್ರವರಿ 13: ಬೆಂಗಳೂರು ನಗರ ಪೊಲೀಸರು (Bengaluru City Police) ಡ್ರಗ್ಸ್ ಪೆಡ್ಲರ್ಗಳ ವಿರುದ್ಧ ಸಮರ ಸಾರಿದ್ದಾರೆ. ಡ್ರಗ್ಸ್ (Drugs) ಮುಕ್ತ ನಗರವನ್ನಾಗಿ ಮಾಡಲು ಪಣ ತೊಟ್ಟಿದ್ದಾರೆ. ನಗರದ ಚಾಮರಾಜಪೇಟೆ, ಮಹದೇವಪುರ, ರಾಮಮೂರ್ತಿನಗರದಲ್ಲಿ ಸಂಗ್ರಹಿಸಿದ್ದ 1.45 ಕೋಟಿ ರೂ. ಮೌಲ್ಯದ ನಿಷೇಧಿತ ಹುಕ್ಕಾ, ನಿಕೋಟಿನ್ ಉತ್ಪನ್ನವನ್ನು ಸಿಸಿಬಿ ಮಹಿಳಾ ಸಂರಕ್ಷಣಾ ದಳ ವಶಪಡಿಸಿಕೊಂಡಿದೆ. ಮತ್ತು ಅಕ್ರಮವಾಗಿ ನಿಕೋಟಿನ್ ಉತ್ಪನ್ನ ಮಾರುತ್ತಿದ್ದ ಒಂಬತ್ತು ಜನರನ್ನು ಬಂಧಿಸಿದೆ. ಬಂಧಿತರಿಂದ 1.10 ಲಕ್ಷ ನಗದು, ಟಾಟಾ ಏಸ್, 11 ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.
ಕಳೆದ ತಿಂಗಳ ಅಂತ್ಯದಲ್ಲಿ ಸಿಸಿಬಿ ಅಧಿಕಾರಿಗಳು ನಗರದಲ್ಲಿ ಒಂದು ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಂಡಿದ್ದು, ಏಳು ಜನ ಡ್ರಗ್ಸ್ ಪೆಡ್ಲರ್ಗಳನ್ನು ಬಂಧಿಸಿದ್ದರು. ಪುಲಿಕೇಶಿನಗರ, ಬಾಣಸವಾಡಿ, ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿ ಸೇರಿದಂತೆ ನಗರದ ಹಲವೆಡೆ ಆರೋಪಿಗಳು ಡ್ರಗ್ಸ್ ಮಾರುತ್ತಿದ್ದರು. 219 ಎಕ್ಸ್ಟೆಸಿ ಪಿಲ್ಸ್, 505 ಗ್ರಾಂ ಎಂಡಿಎಂಎ ಕ್ರಿಸ್ಟಲ್, 130 ಗ್ರಾಂ ತೂಕದ ಚರಸ್, ಕೊಕೇನ್ ಒಟ್ಟು 1 ಕೋಟಿ 52 ಲಕ್ಷದ 50 ಸಾವಿರ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದರು.
ಹೊಸ ವರ್ಷಕ್ಕೆಂದು ಮಾರಾಟಕ್ಕೆ 21 ಕೋಟಿ ಮೌಲ್ಯದ ಡ್ರಗ್ಸ್ ತಂದಿದ್ದ ಆಫ್ರಿಕಾ ಮೂಲದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಲಿಯೋನಾರ್ಡ್ ಓಕ್ವುಡಿಲಿ ಬಂಧಿತ ಆರೋಪಿ. ಬಂಧಿತನಿಂದ 21 ಕೋಟಿ ಮೌಲ್ಯದ 16 ಕೆಜಿ ಎಂಡಿಎಂಎ, 500 ಗ್ರಾಂ ಕೊಕೆನ್ ಜಪ್ತಿ ಮಾಡಲಾಗಿತ್ತು.
ಇದನ್ನೂ ಓದಿ: ವಶಪಡಿಸಿಕೊಂಡ ಡ್ರಗ್ಸ್, ಗಾಂಜಾವನ್ನ ಪೋಲೀಸರು ಏನ್ಮಾಡ್ತಾರೆ! ಇಲ್ಲಿದೆ ವಿವರ
ಬ್ಯುಸಿನೆಸ್ ವೀಸಾ ಪಡೆದುಕೊಂದು ಆರೋಪಿ ಲಿಯೋನಾರ್ಡ್ ಬೆಂಗಳೂರಿಗೆ ಬಂದು ರಾಮಮೂರ್ತಿನಗರದಲ್ಲಿ ನೆಲೆಸಿದ್ದನು. ಈ ಹೊಸ ವರ್ಷಕ್ಕೆ ಮತ್ತೇರಿಸಲು ಅಪಾರ ಪ್ರಮಾಣದ ಡ್ರಗ್ಸ್ ತಂದಿದ್ದನು. ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ಡ್ರಗ್ಸ್ ವಶಕ್ಕೆ ಪಡೆದಿದ್ದರು. ಆರೋಪಿಯು ಬೆಡ್ಶೀಟ್ ಕವರ್, ಸೋಪ್ ಬಾಕ್ಸ್ ಹಾಗೂ ಚಾಕೊಲೇಟ್ ಬಾಕ್ಸ್ನಲ್ಲಿ ಡ್ರಗ್ಸ್ ಸಾಗಾಟ ಮಾಡುತ್ತಿದ್ದನು. ಹೊಸ ವರ್ಷಕ್ಕೆ ರೇವ್ ಪಾರ್ಟಿಗೆ ಡ್ರಗ್ಸ್ ಸಾಗಿಸಲು ಮುಂದಾಗಿದ್ದ ವೇಳೆ ಆರೋಪಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದನು. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ