ಬೆಂಗಳೂರು: ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದವ ಅರೆಸ್ಟ್, ಅವನ ಮೇಲಿತ್ತು 7 ಪ್ರಕರಣಗಳು

ಶಶಾಂಕ್ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಮಾಡಿದ್ದ. ಸಮಾಜದಲ್ಲಿ ಭಯಭೀತ ವಾತಾವರಣ ಸೃಷ್ಟಿ ಮಾಡ್ತಿದ್ದ. ಹೀಗಾಗಿ ಸಿಸಿಬಿ ಪೊಲೀಸರು ಶಶಾಂಕ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಈತನ ಮೇಲೆ 7 ಪ್ರಕರಣಗಳು ದಾಖಲಾಗಿರೋದು ಬೆಳಕಿಗೆ ಬಂದಿದೆ.

ಬೆಂಗಳೂರು: ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದವ ಅರೆಸ್ಟ್, ಅವನ ಮೇಲಿತ್ತು 7 ಪ್ರಕರಣಗಳು
ಶಶಾಂಕ್
Follow us
ರಾಚಪ್ಪಾಜಿ ನಾಯ್ಕ್
| Updated By: ಆಯೇಷಾ ಬಾನು

Updated on: Jan 21, 2024 | 10:51 AM

ಬೆಂಗಳೂರು, ಜ.21: ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದವನನ್ನು ಬೆಂಗಳೂರು ಸಿಸಿಬಿ ಪೊಲೀಸರು (CCB Police) ಅರೆಸ್ಟ್ ಮಾಡಿದ್ದಾರೆ. ಶಶಾಂಕ್(26) ಬಂಧಿತ ಆರೋಪಿ. ಶಶಾಂಕ್ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಮಾಡಿದ್ದ. ಸಮಾಜದಲ್ಲಿ ಭಯಭೀತ ವಾತಾವರಣ ಸೃಷ್ಟಿ ಮಾಡ್ತಿದ್ದ. ಹೀಗಾಗಿ ಸಿಸಿಬಿ ಪೊಲೀಸರು ಶಶಾಂಕ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಈತನ ಮೇಲೆ 7 ಪ್ರಕರಣಗಳು ದಾಖಲಾಗಿರೋದು ಬೆಳಕಿಗೆ ಬಂದಿದೆ.

2015 ರಲ್ಲಿ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಕೇಸ್, 2019ರಲ್ಲಿ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಪ್ರಕರಣ, ರಾಜಾಜಿನಗರ, ತಿಲಕನಗರದಲ್ಲಿ ಒಂದೊಂದು ಕೊಲೆ ಯತ್ನ ಕೇಸ್​, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಹಾಗೂ ಕೊಲೆಯತ್ನ ಕೇಸ್, ಪುಟ್ಟರೆನಹಳ್ಳಿಯಲ್ಲಿ ಹಲ್ಲೆ ಪ್ರಕರಣ ಸೇರಿದಂತೆ ಏಳು ಪ್ರಕರಣಗಳು ಶಶಾಂಕ್ ವಿರುದ್ಧ ಇರೋದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಮಾಲ್ಡೀವ್ಸ್ ಸರ್ಕಾರದ ಈ ನಿರ್ಧಾರದಿಂದ ಬಾಲಕನ ಪ್ರಾಣವೇ ಹೋಯ್ತು

ಮಹಿಳಾ ಪ್ರಯಾಣಿಕರ ಜೊತೆ ಅನುಚಿತವಾಗಿ ವರ್ತಿಸಿ ಹಲ್ಲೆ

ಮತ್ತೊಂದೆಡೆ ಬೆಂಗಳೂರಿನಲ್ಲಿ ಆಟೋ ಚಾಲಕ ಗುಂಡಾವರ್ತನೆ ತೋರಿದ್ದಾನೆ. ಮಹಿಳಾ ಪ್ರಯಾಣಿಕರ ಜೊತೆ ಅನುಚಿತವಾಗಿ ವರ್ತಿಸಿ ಹಲ್ಲೆ ನಡೆಸಿರುವ ಘಟನೆ ನಗರದ ಬೆಳ್ಳಂದೂರಿನಲ್ಲಿ ನಡೆದಿದೆ. ವೈಟ್ ಫೀಲ್ಡ್ ನ ತುಬರಹಳ್ಳಿಗೆ ತೆರಳಲು ಮಹಿಳೆ ಆಟೋ ಬುಕ್ ಮಾಡಿದ್ದರು. ಆಟೋ ಸ್ಥಳಕ್ಕೆ ಬಂದ ನಂತರ ಬುಕಿಂಗ್ ಕ್ಯಾನ್ಸಲ್ ಆಗಿದೆ. ಈ ವೇಳೆ ಮಹಿಳೆ ಜೊತೆ ಗಲಾಟೆ ಮಾಡಿ ರಸ್ತೆಯಲ್ಲಿ ಎಳೆದಾಡಿ ಹಲ್ಲೆ ಮಾಡಿದ್ದಾನೆ. ಆಟೋ ಚಾಲಕನ ಗುಂಡಾವರ್ತನೆಗೆ ಮಹಿಳೆ ರಸ್ತೆಯಲ್ಲಿ ಬಿದ್ದಿದ್ದಾರೆ.

ನಿನ್ನೆ ಬೆಳಗ್ಗೆ 8.30ರ ಸುಮಾರಿಗೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಯಾವುದೇ ದೂರು ದಾಖಲಿಸದೇ ಮಹಿಳೆ ತನ್ನ ಊರಿಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಮಹಿಳೆ ಸ್ನೇಹಿತನಿಂದ ಸಾಮಾಜಿಕ ಜಾಲತಾಣ ಎಕ್ಸ್ ಆ್ಯಪ್ ಮೂಲಕ ಪೊಲೀಸರಿಗೆ ದೂರು ನೀಡಲಾಗಿದೆ. ದೂರು ಪಡೆದ ಪೊಲೀಸರು ಆಟೋ ಚಾಲಕನಿಗಾಗಿ ಶೋಧ ನಡೆಸುತ್ತಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?