ಪಿಸ್ತೂಲ್ ತೋರಿಸಿ ದರೋಡೆ ಮಾಡುತ್ತಿದ್ದ ಕುಖ್ಯಾತ ಕಳ್ಳ ಸಿಸಿಬಿ ಬಲೆಗೆ

ಬೆಂಗಳೂರು: ದರೋಡೆಗೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳ ಸಮ್ಮು ಅಲಿಯಾಸ್ ಬಷೀರ್​ನನ್ನು ಬೆಂಗಳೂರು ಸಿಸಿಬಿ ಪೊಲಿಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಡೀಸೆಲ್ ಆಸೀಫ್ ಪರಾರಿಯಾಗಿದ್ದಾನೆ. ಡಿ.19ರಂದು ಗುರುವಾರ ರಾತ್ರಿ ವಿದ್ಯಾರಣ್ಯಪುರ ವ್ಯಾಪ್ತಿಯಲ್ಲಿ ಆರೋಪಿಗಳಿಬ್ಬರು ದರೋಡೆಗೆ ಹೊಂಚು ಹಾಕುತ್ತಿದ್ದರು. ಖಚಿತ ಮಾಹಿತಿಯೊಂದಿಗೆ ಸಿಸಿಬಿ‌ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಡೀಸೆಲ್ ಆಸೀಫ್ ಕಾರಿನಲ್ಲಿ ಪರಾರಿಯಾಗಿದ್ದು, ಕುಖ್ಯಾತ ಕಳ್ಳ ಬಷೀರ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಬಂಧಿತನಿಂದ 1 ಕಂಟ್ರಿಮೇಡ್ ಪಿಸ್ತೂಲ್, 7 ಜೀವಂತ ಗುಂಡುಗಳು, 51 ಲಕ್ಷ ಮೌಲ್ಯದ […]

ಪಿಸ್ತೂಲ್ ತೋರಿಸಿ ದರೋಡೆ ಮಾಡುತ್ತಿದ್ದ ಕುಖ್ಯಾತ ಕಳ್ಳ ಸಿಸಿಬಿ ಬಲೆಗೆ
ಸಾಧು ಶ್ರೀನಾಥ್​

Updated on: Dec 21, 2019 | 11:07 AM

ಬೆಂಗಳೂರು: ದರೋಡೆಗೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳ ಸಮ್ಮು ಅಲಿಯಾಸ್ ಬಷೀರ್​ನನ್ನು ಬೆಂಗಳೂರು ಸಿಸಿಬಿ ಪೊಲಿಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಡೀಸೆಲ್ ಆಸೀಫ್ ಪರಾರಿಯಾಗಿದ್ದಾನೆ.

ಡಿ.19ರಂದು ಗುರುವಾರ ರಾತ್ರಿ ವಿದ್ಯಾರಣ್ಯಪುರ ವ್ಯಾಪ್ತಿಯಲ್ಲಿ ಆರೋಪಿಗಳಿಬ್ಬರು ದರೋಡೆಗೆ ಹೊಂಚು ಹಾಕುತ್ತಿದ್ದರು. ಖಚಿತ ಮಾಹಿತಿಯೊಂದಿಗೆ ಸಿಸಿಬಿ‌ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಡೀಸೆಲ್ ಆಸೀಫ್ ಕಾರಿನಲ್ಲಿ ಪರಾರಿಯಾಗಿದ್ದು, ಕುಖ್ಯಾತ ಕಳ್ಳ ಬಷೀರ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಬಂಧಿತನಿಂದ 1 ಕಂಟ್ರಿಮೇಡ್ ಪಿಸ್ತೂಲ್, 7 ಜೀವಂತ ಗುಂಡುಗಳು, 51 ಲಕ್ಷ ಮೌಲ್ಯದ ಚಿನ್ನಾಭರಣ, ಚಿನ್ನಾಭರಣ ಕರಗಿಸುವ ಯಂತ್ರ ಹಾಗು 1 ಕಾರು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳು ಶ್ರೀಮಂತರನ್ನು ಗುರುತಿಸಿ ಪಿಸ್ತೂಲ್ ತೋರಿಸಿ ಹೆದರಿಸಿ ಕಳ್ಳತನ ಮಾಡುತ್ತಿದ್ದರು. ಬಿಹಾರ ಹಾಗೂ ನೇಪಾಳದ ಗಡಿ ಭಾಗದಲ್ಲಿ ಪಿಸ್ತೂಲ್​ ಅನ್ನು ಖರೀದಿಸಿ ತಂದಿದ್ದರು. ಬಂಧಿತನ‌ ಮಾಹಿತಿ‌ ಆಧರಿಸಿ ಕಳ್ಳತನದ ಮಾಲನ್ನು ಖರೀದಿಸುತ್ತಿದ್ದ ಸಜ್ಜದ್ ಆಲಿಬೇಗ್​ನನ್ನು ಸಹ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us