ಬೆಂಗಳೂರು: ಮಾದಕ ವಸ್ತು ಮಾರುತ್ತಿದ್ದ ಓರ್ವ ವಿದೇಶಿ ಪ್ರಜೆ ಸೇರಿದಂತೆ ಮೂವರ ಬಂಧನ
ಓರಿಸ್ಸಾ ಮೂಲದ ಇಬ್ಬರು ಆರೋಪಿಗಳು ಕಳೆದ ಆರು ತಿಂಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು. ಆರೋಪಿಗಳು ಮಾರತ್ತಹಳ್ಳಿ ಮತ್ತು ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿ ತಳ್ಳುವ ಗಾಡಿಯಲ್ಲಿ ವಿವಿಧ ರೀತಿಯ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು. ಈ ನಡುವೆ ಓರಿಸ್ಸಾದಿಂದ ಗಾಂಜಾ ತಂದು ಮಾರಾಟ ಮಾಡಲು ಆರಂಭಿಸಿದ್ದರು. ಮುಂದೇನಾಯ್ತು ಈ ಸ್ಟೋರಿ ಓದಿ...
ಬೆಂಗಳೂರು ನ.30: ನಗರದಲ್ಲಿ ಮಾದಕ ವಸ್ತುಗಳನ್ನು (Narcotics) ಮಾರುತ್ತಿದ್ದ ಓರ್ವ ವಿದೇಶಿ ಹಾಗೂ ಓರಿಸ್ಸಾ (Odisha) ಮೂಲದ ಇಬ್ಬರನ್ನು ಪೊಲೀಸರು (Police) ಬಂಧಿಸಿದ್ದಾರೆ. ಬಂಧಿತರಿಂದ 50 ಲಕ್ಷ ಮೌಲ್ಯದ ಡ್ರಗ್ (Drugs) ಜಪ್ತಿ ಮಾಡಿಕೊಳ್ಳಲಾಗಿದೆ. ಓರಿಸ್ಸಾ ಮೂಲದ ಇಬ್ಬರು ಆರೋಪಿಗಳು ಕಳೆದ ಆರು ತಿಂಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು. ಆರೋಪಿಗಳು ಮಾರತ್ತಹಳ್ಳಿ ಮತ್ತು ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿ ತಳ್ಳುವ ಗಾಡಿಯಲ್ಲಿ ವಿವಿಧ ರೀತಿಯ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು.
ಈ ನಡುವೆ ಓರಿಸ್ಸಾದಿಂದ ಗಾಂಜಾ ತಂದು ಮಾರಾಟ ಮಾಡಲು ಆರಂಭಿಸಿದ್ದರು. ಈ ಬಗ್ಗೆ ಪಕ್ಕಾ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಆರೋಪಿಯನ್ನ ಬಂಧಿಸಿ 15ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಮಾರತ್ತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮಾದಕ ವಸ್ತು ಸಾಗಾಣಿಕೆ ಶಂಕೆ: ಬೆಂಗಳೂರಿಗೆ ಬರುವ ಅಂತರಾಜ್ಯ ಬಸ್ಗಳ ತಪಾಸಣೆ ನಡೆಸಿದ ಸಿಸಿಬಿ
ಇನ್ನು ವಿದೇಶಿ ಪ್ರಜೆ 2005ರಲ್ಲಿ ಬ್ಯುಸಿನೆಸ್ ವಿಸಾದಿಂದ ಬೆಂಗಳೂರಿಗೆ ಬಂದಿದ್ದನು. ಪಾಸ್ ಪೋರ್ಟ್ ಅವಧಿ ಮುಗಿದರೂ ಬೆಂಗಳೂರಿನಲ್ಲಿ ವಾಸವಾಗಿದ್ದನು. ಈತ ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿ ಡ್ರಗ್ ಪೆಡ್ಲಿಂಗ್ ಮಾಡಲು ಆರಂಭಿಸಿದ್ದನು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, 180 ಗ್ರಾಂ ಎಮ್ಡಿಎಮ್ಎ, 58 ಗ್ರಾಮ್150 ಎಕ್ಸಟಸಿ ಪಿಲ್ಸ್ ಜಪ್ತಿ ಮಾಡಲಾಗಿದೆ. ಎನ್ಡಿಪಿಎಸ್ ಜೊತೆಗೆ ವಿದೇಶಿಯರ ಕಾಯ್ದೆ ಅಡಿಯಲ್ಲಿ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಏಕ ಕಾಲದಲ್ಲಿ 3 ಅಂಗಡಿಗಳಲ್ಲಿನ ಲಕ್ಷಾಂತರ ರೂಪಾಯಿ ಕಳ್ಳತನ
ಉತ್ತರ ಕನ್ನಡ: ಮೂರು ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಕಳ್ಳತನವಾಗಿರುವ ಘಟನೆ ಹಳಿಯಾಳ ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ಜ್ಯೋತಿ ಮೆಡಿಕಲ್, ಎ.ಕೆ. ಪ್ಯಾಷನ್ ಬಟ್ಟೆ ಅಂಗಡಿ ಹಾಗೂ ಸ್ಟಾರ್ ಪಾನ್ ಶಾಪ್ನಲ್ಲಿ ಕಳ್ಳತನವಾಗಿದೆ. ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:57 pm, Thu, 30 November 23