ಬೆಂಗಳೂರು: ಏಳು ಜನ ಡ್ರಗ್​​​​​ ಪೆಡ್ಲರ್​​ಗಳನ್ನ ಬಂಧಿಸಿದ ಸಿಸಿಬಿ ಪೊಲೀಸರು

ಏಳು ಜನ ಡ್ರಗ್​​​​​ ಪೆಡ್ಲರ್​​ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 1.66 ಕೋಟಿ ಮೌಲ್ಯದ ಡ್ರಗ್ಸ್​ ಜಪ್ತಿ ಮಾಡಿಕೊಂಡಿದ್ದಾರೆ. ಸಿಸಿಬಿ ಪೊಲೀಸರು ಕಳೆದ ಒಂದ ವಾರದಿಂದ ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿದ್ದಾರೆ.

ಬೆಂಗಳೂರು: ಏಳು ಜನ ಡ್ರಗ್​​​​​ ಪೆಡ್ಲರ್​​ಗಳನ್ನ ಬಂಧಿಸಿದ ಸಿಸಿಬಿ ಪೊಲೀಸರು
ಬಂಧನ (ಸಾಂದರ್ಭಿಕ ಚಿತ್ರ)
Edited By: ವಿವೇಕ ಬಿರಾದಾರ

Updated on: Jan 12, 2024 | 2:56 PM

ಬೆಂಗಳೂರು, ಜನವರಿ 12: ಏಳು ಜನ ಡ್ರಗ್​​​​​ ಪೆಡ್ಲರ್​​ಗಳನ್ನು (Drug Peddler) ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 1.66 ಕೋಟಿ ಮೌಲ್ಯದ ಡ್ರಗ್ಸ್​ ಜಪ್ತಿ ಮಾಡಿಕೊಂಡಿದ್ದಾರೆ. ಸಿಸಿಬಿ ಪೊಲೀಸರು ಕಳೆದ ಒಂದ ವಾರದಿಂದ ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿದ್ದಾರೆ. ಗಿರಿನಗರ, ಮಡಿವಾಳ, ಚಿಕ್ಕಜಾಲ, ಆರ್.ಟಿ.ನಗರ ಬೈಯಪ್ಪನಹಳ್ಳಿ ವ್ಯಾಪ್ತಿಯಲ್ಲಿ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ಬಂಧಿತರ ವಿರುದ್ಧ ಒಟ್ಟು ಐದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತರಿಂದ 18.5 ಕೆಜಿ ಗಾಂಜಾ, 203 ಗ್ರಾಂ ಎಂಡಿಎಂಎ, 410 ಎಕ್ಸ್ ಟಸಿ ಪಿಲ್ಸ್, 7 ಮೊಬೈಲ್, 2 ದ್ವಿಚಕ್ರವಾಹ, 1 ಕಾರ್ ವಶಕ್ಕೆ ಪಡೆದುಕೊಂಡಿದ್ದಾರೆ.

ಡ್ರಗ್ ಪೆಡ್ಲರ್​ನಿಂದ 12 ಲಕ್ಷ ರೂ. ಜಪ್ತಿ

ಬೆಂಗಳೂರು ಪೊಲೀಸರು ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ಪೀಟರ್ ಎಂಬುವನಿಂದ 12 ಲಕ್ಷ ಹಣ ಜಪ್ತಿ ಮಾಡಿಕೊಂಡಿದ್ದಾರೆ. ಬಳಿ ಇದ್ದ ಹಣ ಜಪ್ತಿ ಮಾಡಿಕೊಳ್ಳಲಾಗಿದೆ. NDPS ಕಾಯ್ದೆಯ ಕಲಂ 5(A) ಹಾಗೂ 68 (E) ಹಾಗೂ 68 (F) ರಲ್ಲಿನ ಅಧಿಕಾರ ಚಲಾಯಿಸಿ ಹಣ ಜಪ್ತಿ ಮಾಡಿಕೊಳ್ಳಲಾಗಿದೆ. ವಿದ್ಯಾರಣ್ಯ ಪೊಲೀಸರು 2023ರಲ್ಲಿ ಈತನನ್ನು ಬಂಧಿಸಿದ್ದರು.

ಇದನ್ನೂ ಓದಿ: ಬೆಂಗಳೂರು ಪಶ್ಚಿಮ ವಿಭಾಗದ ಪೊಲೀಸರಿಂದ ಡ್ರಗ್ಸ್ ವಿರುದ್ದ ಜಾಗೃತಿ; ನೋ ಡ್ರಗ್ಸ್ ಎಂದ ನಟ ಗಣೇಶ್

ಪೀಟರ್​​ ಹೆಂಡತಿಯ ಅಕೌಂಟ್ ಸೇರಿ ಒಟ್ಟು 7 ಅಕೌಂಟಗಳ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಪೀಟರ್​ 2018ರಲ್ಲಿ ವೈದ್ಯಕೀಯ ವೀಸಾದ ಮೂಲಕ ಭಾರತಕ್ಕೆ ಬಂದು ನೆಲೆಸಿದ್ದಾನೆ. ಪೀಟರ್ 2022 ರಲ್ಲಿ ಮಣಿಪುರ ಮೂಲದ ಯುವಯಿಯನ್ನು ಮದುವೆಯಾಗಿದ್ದಾನೆ. ಪೀಟರ್​ ಹೆಂಡತಿಯ ಹೆಸರಲ್ಲಿ ನಗರದಲ್ಲಿ ಎರೆಡು ಬ್ಯಾಂಕ್ ಖಾತೆ ಹೊಂದಿದ್ದಾನೆ. ಆರೋಪಿ ಪೀಟರ್​​ ಯುಪಿಐ ಪೇಮೆಂಟ್ ಮೂಲಕ ವಹಿವಾಟು ಮಾಡುತ್ತಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More
Loading...
Unable to load recommendations.
Follow Us