AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನಿಟ್ರ್ಯಾಪ್​ ಮೂಲಕ ಶಾಸಕ ಹರೀಶ್​ಗೌಡಗೆ ಬ್ಲ್ಯಾಕ್​ ಮೇಲ್​ ಮಾಡಿದ್ದ ಆರೋಪಿಗಳ ಬಂಧನ

ಹನಿಟ್ರ್ಯಾಪ್​ ಮೂಲಕ ಕಾಂಗ್ರೆಸ್​ ಶಾಸಕ ಹರಿಶ್​ಗೌಡ್ ಅವರಿಗೆ ಬ್ಲ್ಯಾಕ್​ಮೇಲ್ ಮಾಡಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೈಸೂರು ಮೂಲದ ಸಂತೋಷ್ ಮತ್ತು ಪುಟ್ಟರಾಜು ಬಂಧಿತ ಆರೋಪಿಗಳು. ಬೆಂಗಳೂರಿನ ಸಿಸಿಬಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ಹನಿಟ್ರ್ಯಾಪ್​ ಮೂಲಕ ಶಾಸಕ ಹರೀಶ್​ಗೌಡಗೆ ಬ್ಲ್ಯಾಕ್​ ಮೇಲ್​ ಮಾಡಿದ್ದ ಆರೋಪಿಗಳ ಬಂಧನ
ಆರೋಪಿ ಸಂತೋಷ್​
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Jun 26, 2024 | 3:08 PM

Share

ಬೆಂಗಳೂರು, ಜೂನ್​ 26: ಹನಿಟ್ರ್ಯಾಪ್​ (Honey Trap) ಮೂಲಕ ಕಾಂಗ್ರೆಸ್​ ಶಾಸಕ ಹರಿಶ್​ಗೌಡ್ (Harish Gowda)​​ ಅವರಿಗೆ ಬ್ಲ್ಯಾಕ್​ಮೇಲ್ (Black Mail) ಮಾಡಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೈಸೂರು ಮೂಲದ ಸಂತೋಷ್ ಮತ್ತು ಪುಟ್ಟರಾಜು ಬಂಧಿತ ಆರೋಪಿಗಳು. ಆರೋಪಿಗಳ ಗ್ಯಾಂಗ್​ ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್​ ಶಾಸಕ ಹರೀಶ್​ಗೌಡ ಅವರ ವಿರುದ್ಧವೇ ಸುಳ್ಳು ಹನಿಟ್ರ್ಯಾಪ್​ ಮಾದರಿ ವಿಡಿಯೋ ಸೃಷ್ಟಿಸಿ ಬೆದರಿಕೆ ಹಾಕಲು ಮುಂದಾಗಿದ್ದರು. ಅಲ್ಲದೆ, ಕೋಟ್ಯಂತರ ರೂ. ಹಣ ನೀಡುವಂತೆ ಬ್ಲ್ಯಾಕ್​ಮೇಲ್ ಮಾಡಿದ್ದರು. ಬಳಿಕ ಕಾಂಗ್ರೆಸ್ ಶಾಸಕ ಹರೀಶ್​ಗೌಡ ಬೆಂಗಳೂರಿನ ಸಿಸಿಬಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಶಾಸಕರು ನೀಡಿದ ದೂರಿನ ಅನ್ವಯ ಕೇಸ್​ ದಾಖಲು ಮಾಡಿಕೊಂಡ ಸಿಸಿಬಿ ಪೊಲೀಸರು ಹನಿಟ್ರ್ಯಾಪ್​ ಮಾಡುತ್ತಿದ್ದ ಜಾಲವನ್ನು ಬೇಧಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ವಿಚಾರಣಗೆ ಒಳಪಡಿಸಿದಾಗ ಹಲವು ವಿಚಾರ ಬೆಳಕಿಗೆ ಬಂದಿದೆ. ಹನಿಟ್ರ್ಯಾಪ್​ ಗ್ಯಾಂಗ್​ನಲ್ಲಿ ಓರ್ವ ಯುವತಿ ಸಹ ಇರುವ ಬಗ್ಗೆ ಮಾಹಿತಿ ದೊರೆತಿದೆ.

ಆರೋಪಿಗಳು ರಾಜ್ಯದಲ್ಲಿನ ಪ್ರಭಾವಿಗಳ ಸಂಪರ್ಕ ಮಾಡಿ ಅವರನ್ನು ಫಾಲೀ ಮಾಡುತ್ತಿದ್ದರು. ಬಳಿಕ ವಿಐಪಿಗಳನ್ನು ಭೇಟಿ ಮಾಡಿ ನಂಬರ್​ ಪಡೆದುಕೊಳ್ಳುತ್ತಿದ್ದಾರು. ನಂತರ, ಆರೋಪಿಗಳು ವಿಐಪಿಗಳ ಚಲನವಲನದ ಮೇಲೆ ಕಣ್ಣಿಡುತ್ತಿದ್ದರು. ಬಳಿಕ, ವಿಐಪಿಗಳು ಉಳಿದುಕೊಳ್ಳುತ್ತಿದ್ದ ಐಷಾರಾಮಿ ಹೋಟೆಲ್​ಗಳ ರೂಮು ಬುಕ್ಕಿಂಗ್​, ಚೆಕ್​-ಇನ್​​ ಹಾಗೂ ಚೆಕ್​-ಔಟ್​ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದರು.

ಬಳಿಕ, ವಿಐಪಿಗಳು ಹೋಟೆಲ್​ನ ರೂಮ್​ ಖಾಲಿ ಮಾಡಿಕೊಂಡು ಹೋದ ನಂತರ ಅವರು ಉಳಿದುಕೊಂಡಿದ್ದ ರೂಮ್​ ಅನ್ನು ಬಾಡಿಗೆ ಪಡೆದು ಅಲ್ಲಿಯೇ ಉಳಿದುಕೊಳ್ಳುತ್ತಿದ್ದರು. ಈ ರೂಮಿನಲ್ಲಿ ಯುವತಿ ಬಳಸಿಕೊಂಡು ಹಿಡಿನ್​ ಕ್ಯಾಮೆರಾ ಇಟ್ಟಿರುವ ರೀತಿಯಲ್ಲಿ ವಿಡಿಯೋ ರೆಕಾರ್ಡ್​ ಮಾಡುತ್ತಿದ್ದರು. ಬಳಿಕ ವಿಐಪಿ ಈ ಯುವತಿಯನ್ನು ಬಳಕೆ ಮಾಡಿಕೊಂಡಿದ್ದಾರೆ ಎಂಬ ರೀತಿಯಲ್ಲಿ ವಿಡಿಯೋ ಕ್ರಿಯೇಟ್​ ಮಾಡಿ ಅದನ್ನು ವಿಐಪಿಗಳಿಗೆ ಕಳುಹಿಸಿ, ಹಣ್ಣಕ್ಕಾಗಿ ಬೇಡಿಕೆ ಇಡುತ್ತಿದ್ದರು. ಇಲ್ಲದಿದ್ದರೆ ವಿಡಿಯೋ ವೈರಲ್​ ಮಾಡುವುದಾಗಿ ಹಾಗೂ ಪೊಲೀಸರಿಗೆ ಕೊಡುವುದಾಗಿ ಬೆದರಿಕೆ ಹಾಕಿದ್ದರು. ಇದೇ ರೀತಿ ಕಾಂಗ್ರೆಸ್​ ಶಾಸಕ ಹರೀಶ್​​ಗೌಡ ಅವರಿಗೂ ಮಾಡಿದ್ದು, ಕೂಡಲೆ ಶಾಸಕರು ದೂರು ನೀಡಿದ್ದಾರೆ. ಇದೀಗ ಆರೋಪಿಗಳು ಲಾಕ್​ ಆಗಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಹನಿಟ್ರ್ಯಾಪ್ ಮಾಡುತ್ತಿದ್ದ ಮಹಿಳೆ‌ ಸೇರಿ ಮೂವರನ್ನ ಬಂಧಿಸಿದ ಪೊಲೀಸರು 

ಪ್ರಕರಣ ಸಂಬಂಧ ಶಾಸಕ ಹರೀಶ್ ಗೌಡ ಮಾತನಾಡಿ, ನನ್ನ ಪರಿಚಿತರಿಗೆ, ಗೌರವಯುತವಾಗಿ ಬದುಕುತ್ತಿರುವವರಿಗೆ ಹನಿ ಟ್ರ್ಯಾಪ್ ಮಾಡಲಾಗಿತ್ತು. ಎರಡು ನಂಬರ್​ಗಳಿಂದ ಕರೆ ಮಾಡುತ್ತಿದ್ದರು. ಆ ನಂಬರ್​ಗಳ ಮೂಲಕ ಟ್ರೇಸ್ ಮಾಡಿ ಬಂಧನವಾಗಿದೆ. ನಾನೇ ದೂರು ಕೊಟ್ಟಿದ್ದೆ. ಇಬ್ಬರು ಆರೋಪಿಗಳ ಬಂಧನವಾಗಿದೆ. ತನಿಖೆ ನಡೆಯುತ್ತಿದೆ. ಕಾನೂನಾತ್ಮಕವಾಗಿ ಏನು ಆಗಬೇಕು ಆಗುತ್ತದೆ ಎಂದು ಹೇಳಿದರು.

ಹೆಚ್ಚುವರಿ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಮಾತನಾಡಿ, ಕಳೆದ ಕೆಲವು ದಿನಗಳ ಹಿಂದೆ ಸಿಸಿಬಿ ಠಾಣೆಗೆ ದೂರು ಬಂದಿತ್ತು. ಒಂದು ಗ್ಯಾಂಗ್, ಕೆಲವೊಂದು ಅಂಶಗಳ ಮೇಲೆ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಅಂತ ದೂರು ಬಂದಿತ್ತು. ಪ್ರಕರಣ ದಾಖಲಿಸಿ ಆರೋಪಿಗಳನ್ನ ಬಂಧಿಸಿ ಅವರ ಹೇಳಿಕೆಗಳನ್ನ ಪಡೆದುಕೊಂಡಿದ್ದೇವೆ. ಈ ಗ್ಯಾಂಗ್​ನಲ್ಲಿ ಇದುವರೆಗೂ ಮೂವರು ಇದ್ದದ್ದು ಪತ್ತೆಯಾಗಿದೆ. ಇಬ್ಬರ ಬಂಧನವಾಗಿದೆ ಮತ್ತೊಬ್ಬರು ಪರಾರಿಯಾಗಿದ್ದಾರೆ. ಬೇರೆಯವರಿಗೂ ಈ ರೀತಿ ಮಾಡಿದ್ದಾರೆ ಅಂತ ತಿಳಿದು ಬಂದಿದೆ ಪರಿಶೀಲನೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಹಣಕ್ಕಾಗಿ ಬೇಡಿಕೆ ಇಟ್ಟು ಪೋಟೋ ಮನೆಗೆ ಕಳಿಸುವುದಾಗಿ ಬೆದರಿಸುತ್ತಿದ್ದರು. ಈ ಜಾಲದಲ್ಲಿ ಯಾರಿದಾರೆ ಎಂಬುದನ್ನ ನೋಡಬೇಕು. ಉದ್ಯಮಿಗಳು, ಉಪನ್ಯಾಸಕರು, ಎಲ್ಲರಿಗೂ ಕರೆ ಮಾಡಿ ಡಿಮ್ಯಾಂಡ್ ಮಾಡಿದ್ದಾರೆ. ಕಾನೂನು ಕ್ರಮ ಆಗಲಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:08 pm, Wed, 26 June 24

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಬಾಲರಾಮನ ವಿಗ್ರಹವನ್ನು ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ
ಬಾಲರಾಮನ ವಿಗ್ರಹವನ್ನು ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ