AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ಕಾರ್ಯಾಚರಣೆ: ಕುಖ್ಯಾತ ಕಾರುಗಳ್ಳರ ಬಂಧನ, ಇವರು ಕದ್ದಿದ್ದು ಬರೋಬ್ಬರಿ 27 ಕಾರುಗಳು..!

ಬೆಂಗಳೂರಿನ ಗಿರೀಶ್ ಗೌಡ ಹಾಗೂ ಮೋಹನ್ ಬಂಧಿತ ಆರೋಪಿಗಳಾಗಿದ್ದು, ಈ ಖದೀಮರು ಹೈಫೈ ಕಾರುಗಳನ್ನೇ ಟಾರ್ಗೆಟ್ ಮಾಡಿ ವಂಚಿಸುತ್ತಿದ್ದರು. ಒಟ್ಟಾರೆ ಈ ಚಾಲಾಕಿಗಳು 27 ಕಾರುಗಳನ್ನ ಕಳ್ಳತನ ಮಾಡಿದ್ದರು.

CCB ಕಾರ್ಯಾಚರಣೆ: ಕುಖ್ಯಾತ ಕಾರುಗಳ್ಳರ ಬಂಧನ, ಇವರು ಕದ್ದಿದ್ದು ಬರೋಬ್ಬರಿ 27 ಕಾರುಗಳು..!
ಬಂಧಿತ ಕಾರುಗಳ್ಳರು
ಪೃಥ್ವಿಶಂಕರ
| Edited By: |

Updated on:Jan 17, 2021 | 11:28 AM

Share

ಬೆಂಗಳೂರು: ನಗರದಲ್ಲಿ ಕಾರುಗಳನ್ನ ಬಾಡಿಗೆಗೆ ಪಡೆದು ವಂಚಿಸುತ್ತಿದ್ದ ಇಬ್ಬರು ಖದೀಮರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಗಿರೀಶ್ ಗೌಡ ಹಾಗೂ ಮೋಹನ್ ಬಂಧಿತ ಆರೋಪಿಗಳಾಗಿದ್ದು, ಈ ಖದೀಮರು ಹೈಫೈ ಕಾರುಗಳನ್ನೇ ಟಾರ್ಗೆಟ್ ಮಾಡಿ ವಂಚಿಸುತ್ತಿದ್ದರು. ಒಟ್ಟಾರೆ ಈ ಚಾಲಾಕಿಗಳು 12 ಇನೋವಾ ಕ್ರಿಸ್ತಾ, ಮಾರುತಿ ಕಂಪನಿಯ 5 ಕಾರುಗಳು, ಹೊಂಡೈ ಕಂಪನಿಯ 4 ಕಾರುಗಳು, 3 ಟೊಯೋಟಾ ಫಾರ್ಚುನರ್, ಹೋಂಡಾ ಕಂಪನಿಯ 1 ಕಾರು, ನಿಸಾನ್ ಕಂಪನಿಯ 1 ಕಾರು ಹಾಗೂ ಟಾಟಾ ಕಂಪನಿಯ 1 ಕಾರು ಸೇರಿ ಒಟ್ಟು 27 ಕಾರುಗಳ ಕಳ್ಳತನ ಮಾಡಿದ್ದರು.

ಬಂಧಿತರಿಂದ ಲಕ್ಷಾಂತರ ಬೆಲೆಬಾಳುವ ಕಾರುಗಳು ಹಾಗೂ 75 ಗ್ರಾಂ ಚಿನ್ನಾಭರಣ, 2 ಬೆಲೆ ಬಾಳುವ ಮೊಬೈಲ್ ಫೋನ್, 6 ಲಕ್ಷ ನಗದನ್ನು ಸಿಸಿಬಿ ಪೊಲೀಸರು ಜಫ್ತಿ ಮಾಡಿದ್ದಾರೆ. ORIX AISL ಕಂಪನಿಯ ಜನರಲ್ ಮ್ಯಾನೇಜರ್ ಮೋಹಲ್ ವೇಲು ಎಂಬುವವರ ದೂರನ್ನ ಆಧರಿಸಿ ಆರೋಪಿಗಳ ಬಂಧಿಸಲಾಗಿದೆ. ಬಾಡಿಗೆಗೆ ಕಾರನ್ನ ಪಡೆದುಕೊಂಡು ಎಲ್ಲೋ ಬೋರ್ಡ್ ವೈಕಲ್​ನ್ನ, ವೈಟ್ ಬೋರ್ಡ್ ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು. ಮ್ಯಾನೇಜರ್ ಮೊದಲು ಬೈಯಪ್ಪನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಈ ಪ್ರಕರಣ ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು.

Published On - 8:40 am, Sun, 17 January 21

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ